'ಸಿಎಂ ಯಡಿಯೂರಪ್ಪ ಜೆಟ್ ಪೈಲೆಟ್ ಇದ್ದಂತೆ'

By Suvarna NewsFirst Published Feb 7, 2021, 4:01 PM IST
Highlights

ಕುರುಬರು ಹಾಗೂ ಪಂಚಮಸಾಲಿ ಸಮುದಾಯದಿಂದ ಹೋರಾಟ| ಎರಡೂ ಸಮಾಜದ ಗುರುಗಳ ಪಾದಯಾತ್ರೆ ನಾನು ನೋಡಿದ್ದೇನೆ. ಕುರುಬರಿಗೆ ಎಸ್‌ಟಿ ಸೇರಿಸಲು ಕೆಲವು ಲೀಗಲ್ ತೊಡಕುಗಳು ಇವೆ| ಕುಲಶಾಸ್ತ್ರದ ಅಧ್ಯಯನ ನಡೆಯಬೇಕಿದೆ| ಅಧ್ಯಯನದ ಬಳಿಕ ಸರ್ಕಾರ ಅಂತಿಮ ತೀರ್ಮಾನಕ್ಕೆ ಬರುತ್ತದೆ:ಶ್ರೀರಾಮುಲು|   

ರಾಯಚೂರು(ಫೆ.07): ನಮ್ಮ ಸಿಎಂ ಯಡಿಯೂರಪ್ಪ ಜೆಟ್ ಪೈಲೆಟ್ ಇದ್ದಂತೆ. ಆ ಜೆಟ್ ಪೈಲೆಟ್‌ನಲ್ಲಿ ಕುಳಿತು ನಾವು ಪ್ರಯಾಣ ಮಾಡುತ್ತಿದ್ದೇವೆ. ಜೆಟ್ ಎಷ್ಟು ವೇಗವಾಗಿ ಹೋಗುತ್ತೋ ಅದೇ ಮಾದರಿಯಲ್ಲಿ ಬಿಜೆಪಿ ಸರ್ಕಾರ ನಡೆಯುತ್ತಿದೆ. ನಮ್ಮ ಸರ್ಕಾರ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯಗೆ ಸಚಿವ ಶ್ರೀರಾಮುಲು ಟಾಂಗ್‌ ಕೊಟ್ಟಿದ್ದಾರೆ. 

ಬಿಎಸ್ವೈ ಸರ್ಕಾರ ಡಕೋಟಾ ಬಸ್ ವಿಚಾರ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಇಂದು(ಭಾನುವಾರ) ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ಶ್ರೀರಾಮುಲು, ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕಕ್ಕೆ ಒತ್ತು ನೀಡುತ್ತಿದೆ. ಉಪ ಚುನಾವಣೆ ಬಳಿಕ ಮತ್ತಷ್ಟು ಜನರಿಗೆ ಸಚಿವ ಸ್ಥಾನ ಸಿಗಲಿದೆ. ಮುಂದಿನ ದಿನಗಳಲ್ಲಿ ಕ.ಕ. ಇಬ್ಬರು ಮೂವರು ಮಂತ್ರಿಗಳು ಆಗುವ ಅವಕಾಶ ಇದೆ ಎಂದು ತಿಳಿಸಿದ್ದಾರೆ. 

ಮಾತಾಡಿದ್ದು ತಪ್ಪು, ಮಸಿ ಬಳಿದಿದ್ದು ತಪ್ಪು : ಪೇಜಾವರ ಶ್ರೀ

ಕುರುಬರ ಎಸ್ಟಿಗಾಗಿ ಪಾದಯಾತ್ರೆ ವಿಚಾರದ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕುರುಬರು ಹಾಗೂ ಪಂಚಮಸಾಲಿ ಸಮುದಾಯದವರು ಹೋರಾಟ ನಡೆಸುತ್ತಿದ್ದಾರೆ. ಎರಡೂ ಸಮಾಜದ ಗುರುಗಳ ಪಾದಯಾತ್ರೆ ನಾನು ನೋಡಿದ್ದೇನೆ. ಕುರುಬರಿಗೆ ಎಸ್‌ಟಿ ಸೇರಿಸಲು ಕೆಲವು ಲೀಗಲ್ ತೊಡಕುಗಳು ಇವೆ. ಕುಲಶಾಸ್ತ್ರದ ಅಧ್ಯಯನ ನಡೆಯಬೇಕಿದೆ. ಆ ಅಧ್ಯಯನದ ಬಳಿಕ ಸರ್ಕಾರ ಅಂತಿಮ ತೀರ್ಮಾನಕ್ಕೆ ಬರುತ್ತದೆ ಎಂದು ತಿಳಿಸಿದ್ದಾರೆ.  

ಇನ್ನೂ ಪಂಚಮಸಾಲಿಗೆ 2 ಎ ನೀಡುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಶ್ರೀರಾಮುಲು, ಈ ಬಗ್ಗೆ ಸಿಎಂ ಬಿಎಸ್ವೈ ಈಗಾಗಲೇ ಅಧ್ಯಯನಕ್ಕಾಗಿ ಆದೇಶ ಮಾಡಿದ್ದಾರೆ. ಹಿಂದುಳಿದ ಆಯೋಗದಿಂದ ಅಧ್ಯಯನದ ವರದಿ ಬಂದ ಬಳಿಕ ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. 
 

click me!