ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಬಿಜೆಪಿ ಕಡೆವಿದೆ ಅಂತ ಸುಳ್ಳು ಆರೋಪ ಮಾಡ್ತಿದ್ದಾರೆ| ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ದಿನಕ್ಕೊಂದು ಹೇಳಿಕೆ ಕೊಡ್ತಿದ್ದಾರೆ| ನಮಗೆ ಯಾವ ಪಕ್ಷದ ಬೆಂಬಲ ಬೇಕಾಗಿಲ್ಲ ಎಂದ ಶ್ರೀರಾಮುಲು|
ಹಾವೇರಿ(ನ.28): ಉಪಚುನಾವಣೆ ನಡೆಯುವ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ. ಮೂರು ವರ್ಷ ಬಿ. ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಆಗಿ ಮುಂದುವರೆಯಬೇಕು ಎಂದು ಸಚಿವ ಬಿ ಶ್ರೀರಾಮುಲು ಅವರು ಹೇಳಿದ್ದಾರೆ.
ಗುರುವಾರ ಜಿಲ್ಲೆಯ ರಾಣಿಬೆನ್ನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಸಾಧನೆಯನ್ನ ಚರ್ಚೆ ಮಾಡವುವವರು ಬಹಿರಂಗ ಚರ್ಚೆಗೆ ಬನ್ನಿ ಎಂದು ಸವಾಲು ಹಾಕಿದ್ದಾರೆ.
ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಬಿಜೆಪಿ ಕಡೆವಿದೆ ಅಂತ ಸುಳ್ಳು ಆರೋಪ ಮಾಡ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ದಿನಕ್ಕೊಂದು ಹೇಳಿಕೆ ಕೊಡ್ತಿದ್ದಾರೆ. ನಮಗೆ ಯಾವ ಪಕ್ಷದ ಬೆಂಬಲ ಬೇಕಾಗಿಲ್ಲ ಎಂದು ಹೇಳಿದ್ದಾರೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಈಗಿನ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಿದವರ್ಯಾರು. ಇಂದು ಗೆಲ್ಲಿಸಲು ಬಂದಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಿಂಗಲ್ ಸ್ಟಾರ್ ಇದ್ದಂತೆ. ಎಲ್ಲರನ್ನೂ ತುಳಿದು ಸಿದ್ದರಾಮಯ್ಯ ದೊಡ್ಡವನಾಗಿದ್ದಾನೆ. ಕೊರಟಗೆರೆಯಲ್ಲಿ ಪರಮೇಶ್ವರ್ ಅವರನ್ನು ಸೋಲಿಸಿದವರ್ಯಾರು? ಎಂದು ಪ್ರಶ್ನಿಸಿದ್ದಾರೆ.
ಡಿಸೆಂಬರ್ 5ರಂದು ಕರ್ನಾಟಕದಲ್ಲಿ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, 9ರಂದು ಫಲಿತಾಂಶ ಪ್ರಕಟವಾಗಲಿದೆ.