* ಶ್ರೀಕೃಷ್ಣನು ಮಹಾಭಾರತದಲ್ಲಿ ಪಾಂಡವರನ್ನು ಯುದ್ಧದಲ್ಲಿ ಗೆಲ್ಲಿಸಿದರು
* ಪ್ರಧಾನಿ ಮೋದಿ ನಮ್ಮ ದೇಶವನ್ನು ಪ್ರಗತಿ ಪಥದತ್ತ ಕೊಂಡೊಯ್ಯಲು ಜನಿಸಿದ ಶ್ರೀಕೃಷ್ಣನ ಅವತಾರ
* ಅದರೆ ಕಾಂಗ್ರೆಸ್‌ನ ಪ್ರಧಾನಮಂತ್ರಿಗಳು ಕೇವಲ ದೆಹಲಿಗೆ ಮಾತ್ರ ಸೀಮಿತರಾಗಿದ್ದರು
ಮುನಿರಾಬಾದ್(ಜೂ.22): ಪ್ರಧಾನಿ ನರೇಂದ್ರ ಮೋದಿಯವರು ಶ್ರೀಕೃಷ್ಣನ ಅವತಾರ ಎಂದು ಸಾರಿಗೆ ಸಚಿವ ಶ್ರೀರಾಮುಲು ಬಣ್ಣಿಸಿದ್ದಾರೆ.
ಕೊಪ್ಪಳದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀಕೃಷ್ಣನು ಮಹಾಭಾರತದಲ್ಲಿ ಪಾಂಡವರನ್ನು ಯುದ್ಧದಲ್ಲಿ ಗೆಲ್ಲಿಸಿದರು. ಅದರಂತೆ ಪ್ರಧಾನಿ ನರೇಂದ್ರ ಮೋದಿಯವರು ನಮ್ಮ ದೇಶವನ್ನು ಪ್ರಗತಿ ಪಥದತ್ತ ಕೊಂಡೊಯ್ಯಲು ಜನಿಸಿದ ಶ್ರೀಕೃಷ್ಣನ ಅವತಾರ ಎಂದರು.
ಕೊಪ್ಪಳ: ಅಂಜನಾದ್ರಿ ಅಭಿವೃದ್ಧಿಗೆ ಭೂಮಿ ನೀಡಲ್ಲ, ರೈತರ ಆಕ್ರೋಶ
ಪ್ರಧಾನಿ ನರೇಂದ್ರ ಮೋದಿಯವರು ಮನ್ ಕಿ ಬಾತ್ ಕಾರ್ಯಕ್ರಮದ ಮೂಲಕ ದೇಶದ ಪ್ರತಿಯೊಬ್ಬ ನಾಗರಿಕ ಮನಸ್ಸಿನಲ್ಲಿ ಮನೆಮಾತಾಗಿದ್ದಾರೆ. ಅಲ್ಲದೇ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷರೊಂದಿಗೆ ಸಂವಾದ ನಡೆಸುವ ಮೂಲಕ ಅವರಿಗೆ ನಮ್ಮ ದೇಶದ ಹಳ್ಳಿಗಳ ಬಗ್ಗೆ ಇರುವ ಕಾಳಜಿಯನ್ನು ಎತ್ತಿ ತೋರಿಸುತ್ತದೆ. ಅದರೆ ಕಾಂಗ್ರೆಸ್‌ನ ಪ್ರಧಾನಮಂತ್ರಿಗಳು ಕೇವಲ ದೆಹಲಿಗೆ ಮಾತ್ರ ಸೀಮಿತರಾಗಿದ್ದರು. ಅವರು ಗ್ರಾಮೀಣ ಪ್ರದೇಶದತ್ತ ಮುಖ ಮಾಡಿ ನೋಡಿರಲಿಲ್ಲ ಎಂದರು.