* ಪ್ರಹ್ಲಾದ್ ಜೋಶಿ, ಶೆಟ್ಟರ್ ಹುಬ್ಬಳ್ಳಿಯನ್ನು ಅಭಿವೃದ್ಧಿ ಮಾಡಿದ್ದಾರೆ
* ಹಗಲು-ಕನಸು ಕಾಣುತ್ತಿರುವ ಕಾಂಗ್ರೆಸ್
* ನಷ್ಟದಲ್ಲಿರುವ ಸಾರಿಗೆ ಇಲಾಖೆಯನ್ನ ಮೇಲೆತ್ತುವ ಕೆಲಸ ಮಾಡುತ್ತೇನೆ
ಹುಬ್ಬಳ್ಳಿ(ಆ.29): ಸಿದ್ದರಾಮಯ್ಯ ಮತ್ತು ಡಿಕೆಶಿ ಕೇವಲ ಫೋಟೋ ಫ್ರೆಂಡ್ಸ್ ಅಗಿದ್ದಾರೆ. ದೆಹಲಿಗೆ ಹೋದಾಗ ಮಾತ್ರ ಒಂದಾಗಿರುತ್ತಾರೆ. ರಾಹುಲ್, ಸೋನಿಯಾ ಗಾಂಧಿ ಎದರು ಕೈ ಕುಲಾಯಿಸುತ್ತಾರೆ. ಹೊರಗಡೆ ಇಬ್ಬರ ಮಧ್ಯೆ ಸಿಎಂ ಸ್ಥಾನಕ್ಕಾಗಿ ಪೈಪೋಟಿ ಇದೆ ಅಂತ ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.
ಇಂದು(ಭಾನುವಾರ) ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹು-ಧಾ ಪಾಲಿಕೆಯಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇವೆ. ಪ್ರಹ್ಲಾದ್ ಜೋಶಿ, ಶೆಟ್ಟರ್ ಹುಬ್ಬಳ್ಳಿಯನ್ನು ಅಭಿವೃದ್ಧಿ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಜನರಿಗೆ ಯಾಕೆ ಸುಳ್ಳು ಹೇಳ್ತೀರಿ?: ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದ ಡಿಕೆಶಿ
ಕಾಂಗ್ರೆಸ್‌ನವರು ಹಗಲು-ಕನಸು ಕಾಣುತ್ತಿದ್ದಾರೆ. ಎಲ್ಲಾ ಚುನಾವಣೆಯಲ್ಲಿ ಕೈ ನಾಯಕರು ನಾವೇ ಗೆಲ್ತೀವಿ ಅಂತಾರೆ. ಆದ್ರೆ ಎಲ್ಲೂ ಗೆದ್ದಿಲ್ಲ. ನಷ್ಟದಲ್ಲಿರುವ ಸಾರಿಗೆ ಇಲಾಖೆಯನ್ನ ಮೇಲೆತ್ತುವ ಕೆಲಸ ಮಾಡುತ್ತೇನೆ. ಉಸ್ತುವಾರಿ ಸಚಿವರ ನೇಮಕ ಕೆಲವೊಂದು ಕಡೆ ಆಗಬೇಕು. ಅದು ಆಗುತ್ತದೆ ಅಂತ ಹೇಳಿದ್ದಾರೆ.