ಖನಿಜ ರಕ್ಷಣೆಗೆ ಪ್ರತ್ಯೇಕ ಪಡೆ ರಚನೆ: ಸಚಿವ ಸಿ.ಸಿ. ಪಾಟೀಲ

By Kannadaprabha NewsFirst Published Sep 28, 2020, 3:19 PM IST
Highlights

ಎಲ್ಲ ಜಿಲ್ಲೆಗಳಲ್ಲೂ ಖನಿಜಗಳ ಅಕ್ರಮ ಗಣಿಗಾರಿಕೆ ಮತ್ತು ಸಾಗಾಣೆ ತಡೆಯುವ ನಿಟ್ಟಿನಲ್ಲಿ ಖನಿಜ ರಕ್ಷಣಾ ಪಡೆಗಳ ರಚನೆ| ಕ್ರಷರ್‌ಗಳ ಗುತ್ತಿಗೆ ಅವಧಿಯನ್ನು 20 ವರ್ಷಗಳಿಗೆ ವಿಸ್ತರಿಸುವ, ಪಾಲುದಾರರನ್ನು ಸೇರಿಸಿಕೊಳ್ಳಲು ಅವಕಾಶ ಕಲ್ಪಿಸುವ ಮಸೂದೆಗೆ ವಿಧಾನ ಪರಿಷತ್‌ ಅಂಗೀಕಾರ|  
 

ಗದಗ(ಸೆ.28): ರಾಜ್ಯದಲ್ಲಿ ಖನಿಜ ಸಂಪತ್ತಿನ ರಕ್ಷಣೆಗಾಗಿ ನಿವೃತ್ತ ಸೇನಾಧಿಕಾರಿಗಳನ್ನು ಒಳಗೊಂಡ ಖನಿಜ ರಕ್ಷಣಾ ಪಡೆಯನ್ನು ರಚಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ. ಪಾಟೀಲ ತಿಳಿಸಿದ್ದಾರೆ. 

ವಿಧಾನ ಪರಿಷತ್‌ನಲ್ಲಿ ಗುರುವಾರ ಕ್ರಷರ್‌ಗಳ ನಿಯಂತ್ರಣ (ತಿದ್ದುಪಡಿ) ಮಸೂದೆ-2020ರ ಮೇಲಿನ ಚರ್ಚೆಗೆ ಉತ್ತಿರಿಸಿದ ಅವರು, ಎಲ್ಲ ಜಿಲ್ಲೆಗಳಲ್ಲೂ ಖನಿಜಗಳ ಅಕ್ರಮ ಗಣಿಗಾರಿಕೆ ಮತ್ತು ಸಾಗಾಣೆಯನ್ನು ತಡೆಯುವ ನಿಟ್ಟಿನಲ್ಲಿ ಈ ಖನಿಜ ರಕ್ಷಣಾ ಪಡೆಗಳನ್ನು ರಚಿಸಲಾಗುವುದು ಎಂದು ಹೇಳಿದ್ದಾರೆ. 

ಗದಗ: ಕಾಂಗ್ರೆಸ್‌ ಹಿರಿಯ ನಾಯಕ ಹೆಚ್.ಕೆ. ಪಾಟೀಲ್‌ಗೆ ಕೊರೋನಾ

ಕ್ರಷರ್‌ಗಳ ಗುತ್ತಿಗೆ ಅವಧಿಯನ್ನು 20 ವರ್ಷಗಳಿಗೆ ವಿಸ್ತರಿಸುವ, ಪಾಲುದಾರರನ್ನು ಸೇರಿಸಿಕೊಳ್ಳಲು ಅವಕಾಶ ಕಲ್ಪಿಸುವ ಮಸೂದೆಗೆ ವಿಧಾನ ಪರಿಷತ್‌ ಅಂಗೀಕಾರ ನೀಡಿತು. ಜಿಲ್ಲಾ ಖನಿಜ ನಿಧಿ ಬಳಕೆಗೆ ಸಂಬಂಧಿಸಿದಂತೆ ಕ್ರಿಯಾಯೋಜನೆ ರೂಪಿಸುವಾಗ ಸ್ಥಳೀಯ ವಿಧಾನ ಪರಿಷತ್‌ ಸದಸ್ಯರಿಗೂ ಕಾಮಗಾರಿಗಳನ್ನು ಸೂಚಿಸಲು ಅವಕಾಶ ಕಲ್ಪಿಸಬೇಕೆಂಬ ಪ್ರತಿಕ್ರಿಯಿಸಿದ ಸಚಿವರು, ಈ ಸಂಬಂಧ ಎಲ್ಲ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಲಾಗುವುದು ಎಂದು ತಿಳಿಸಿದರು.
 

click me!