ಗದಗ ಜಿಲ್ಲೆಯಲ್ಲಿ ನಿತ್ಯ 18 ರಿಂದ 20 ಕೋವಿಡ್ ಪಾಸಿಟಿವ್ ಪ್ರಕರಣಗಳು| ಸರ್ಕಾರದ ನಿಯಮದ ಪ್ರಕಾರ ಕೊರೋನಾ ಟೆಸ್ಟ್| 45 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ| ಈಗಾಲೇ ಪ್ರಧಾನಿ, ಮುಖ್ಯಮಂತ್ರಿ ಸೇರಿದಂತೆ ಸಾಕಷ್ಟು ಜನರು ವ್ಯಾಕ್ಸಿನ್ ಹಾಕಿಸಿಕೊಂಡಿದ್ದಾರೆ. ಜನರು ಭಯಪಡದೆ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಹಾಕಿಸಿಕೊಳ್ಳಬೇಕು: ಸಿ.ಸಿ. ಪಾಟೀಲ್|
ಗದಗ(ಏ.05): ಕೊರೋನಾ 2 ನೇ ಅಲೆ ವೇಗವಾಗಿ ಹರಡುತ್ತಿದೆ. ಕೋವಿಡ್ ಪ್ರಕರಣಗಳನ್ನ ಹತೋಟಿಗೆ ತರಲು ರಾಜ್ಯ ಸರ್ಕಾರ ಕೂಡ ಟಫ್ ರೂಲ್ಸ್‌ಗಳನ್ನ ಬಿಡುಗಡೆ ಮಾಡಿದೆ. ಜನರು ಇವುಗಳನ್ನ ಕಡ್ಡಾಯವಾಗಿ ಪಾಲಿಸಬೇಕು ಎಂದು ಸಚಿವ ಸಿ. ಸಿ. ಪಾಟೀಲ್ ಹೇಳಿದ್ದಾರೆ.
ಇಂದು(ಸೋಮವಾರ) ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮದುವೆ ಹಾಗೂ ಶುಭ ಕಾರ್ಯಗಳಿಗೆ ಜನರ ನಿಯಂತ್ರಣದ ಬಗ್ಗೆ ಕಠಿಣ ಕ್ರಮಗಳನ್ನ ತೆಗೆದುಕೊಳ್ಳಲಾಗುವುದು. ಜಾತ್ರೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ಮುಂದೂಡಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
undefined
ವಸತಿ ಶಾಲೆಯಲ್ಲಿ ಕೊರೋನಾ ಸ್ಫೋಟ: ಪೋಷಕರಲ್ಲಿ ಹೆಚ್ಚಾದ ಆತಂಕ..!
ಸರ್ಕಾರದಿಂದ ಮಾತ್ರ ಕೊರೋನಾ ನಿಯಂತ್ರಣ ಮಾಡಲು ಆಗೋದಿಲ್ಲ, ಕೊರೋನಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಕೂಡ ಬಹಳ ಅಗತ್ಯವಾಗಿದೆ. ಜನರು ಜವಾಬ್ದಾರಿಯಿಂದ ವರ್ತಿಸಬೇಕು. ಕುಟುಂಬದ ಸುರಕ್ಷತೆ ಕಾಪಾಡಿಕೊಳ್ಳಬೇಕು. ಸಾಧ್ಯವಾದಷ್ಟು ಮನೆಯಿಂದ ಹೊರಗಡೆ ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಹೀಗೆ ಮಾಡುವುದರಿಂದ ಮುಂದೆ ಬರುವ ಭೀಕರ ಗಂಡಾಂತರವನ್ನು ತಪ್ಪಿಸಲು ಸಾಧ್ಯ ಎಂದು ಸಚಿವ ಸಿ.ಸಿ. ಪಾಟೀಲ್ ಹೇಳಿದ್ದಾರೆ.
ಗದಗ ಜಿಲ್ಲೆಯಲ್ಲಿ ನಿತ್ಯ 18 ರಿಂದ 20 ಕೋವಿಡ್ ಪ್ರಕರಣಗಳು ಬರುತ್ತಿವೆ. ಸರ್ಕಾರದ ನಿಯಮದ ಪ್ರಕಾರ ಕೊರೋನಾ ಟೆಸ್ಟ್ ಮಾಡಿಸಲಾಗುತ್ತದೆ. ಜಿಲ್ಲೆಯಲ್ಲಿ ವೇಗವಾಗಿ 45 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ಹಾಕಿಸಲಾಗುತ್ತಿದೆ. ಈಗಾಲೇ ಪ್ರಧಾನಿ, ಮುಖ್ಯಮಂತ್ರಿ ಸೇರಿದಂತೆ ಸಾಕಷ್ಟು ಜನರು ವ್ಯಾಕ್ಸಿನ್ ಹಾಕಿಸಿಕೊಂಡಿದ್ದಾರೆ. ಜನರು ಭಯಪಡದೆ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಹಾಕಿಸಿಕೊಳ್ಳುವಂತೆ ಇದೇ ಸಂದರ್ಭದಲ್ಲಿ ಮನವಿ ಮಾಡಿಕೊಂಡಿದ್ದಾರೆ.