'ಡಿಸ್ನಿಲ್ಯಾಂಡ್‌ ಯೋಜನೆಗೆ ಮತ್ತೆ ಚಾಲನೆ'

By Kannadaprabha NewsFirst Published Mar 14, 2021, 8:14 AM IST
Highlights

ಸ್ಥಳೀಯರನ್ನು ವಿಶ್ವಾಸಕ್ಕೆ ಪಡೆದು ಯೋಜನೆ ಜಾರಿ| ಹೆಚ್ಚಿನ ಉದ್ಯೋಗ ಸೃಷ್ಟಿ ಯೋಜನೆಯ ಗುರಿ| ಡಿಸ್ನಿಲ್ಯಾಂಡ್‌ ಯೋಜನೆಗೆ ಮುಂದಾಗಿದ್ದ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ| ಆ ವೇಳೆ ಯೋಜನೆಗೆ ಸ್ಥಳೀಯರು ಹಾಗೂ ರೈತರು ಆಕ್ಷೇಪ ವ್ಯಕ್ತವಾಗಿತ್ತು| 

ಶ್ರೀರಂಗಪಟ್ಟಣ(ಮಾ.14): ವಿಶ್ವ ವಿಖ್ಯಾತ ಕೆಆರ್‌ಎಸ್‌ನ್ನು ಪ್ರಮುಖ ಪ್ರವಾಸೋದ್ಯಮ ಸ್ಥಳವನ್ನಾಗಿ ಪರಿವರ್ತಿಸಲು ಬಹುಕೋಟಿ ವೆಚ್ಚದ ಡಿಸ್ನಿಲ್ಯಾಂಡ್‌ ಯೋಜನೆಗೆ ಚಾಲನೆ ನೀಡಲಾಗುತ್ತಿದ್ದು, ಅದರ ಸಾಧಕ -ಬಾಧಕಗಳನ್ನು ಆಲಿಸಿ ಸ್ಥಳೀಯರ ವಿಶ್ವಾಸದ ಮೇರೆಗೆ ಕಾರ್ಯಪ್ರವೃತ್ತರಾಗುವುದಾಗಿ ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಪಿ.ಯೋಗೇಶ್ವರ್‌ ತಿಳಿಸಿದರು.

ತಾಲೂಕಿನ ಕೆಆರ್‌ಎಸ್‌ನ ಕಾವೇರಿ ಸಂಭಾಂಗಣದಲ್ಲಿ ಡಿಸ್ನಿಲ್ಯಾಂಡ್‌ ಯೋಜನೆ ಸಂಬಂಧ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಯಾರಿಗೂ ಸಮಸ್ಯೆಯಾಗದಂತೆ, ಎಲ್ಲರ ಒಪ್ಪಿಗೆ ಪಡೆದು ಸರ್ವೆ ನಡೆಸಿ ಯೋಜನೆ ಜಾರಿಗೊಳಿಸಲಾಗುವುದು. ಈ ಹಿಂದಿನ ಸಮ್ಮಿಶ್ರ ಸರ್ಕಾರ ಈ ಯೋಜನೆ ಬಗ್ಗೆ ಪಿಪಿಟಿ(ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವ) ತಯಾರಿಸಿದ್ದು, ಅದನ್ನೂ ಸಹ ವೀಕ್ಷಿಸಿದ್ದೇನೆ. ಇದರಿಂದ ಪರಿಸರಕ್ಕೆ ಯಾವುದೇ ಹಾನಿಯುಂಟಾಗುವುದಿಲ್ಲ. ಯೋಜನೆ ಜಾರಿಯಾದಲ್ಲಿ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗವಕಾಶ ದೊರೆಯಲಿದೆ. ಪ್ರವಾಸಿಗರನ್ನು ಆಕರ್ಷಿಸುವುದರ ಜೊತೆಗೆ ಪ್ರವಾಸೋದ್ಯಮ ಇಲಾಖೆಗೆ ಹೆಚ್ಚಿನ ಆದಾಯ ಬರಲಿದೆ ಎಂದರು.

ಕೆ ಆರ್ ಎಸ್‌ನಲ್ಲಿ ಡಿಸ್ನಿಲ್ಯಾಂಡ್ ನಿರ್ಮಾಣ: ಭಾರೀ ವಿರೋಧ

ಈಗಾಗಲೇ ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸುವಂತೆ ಸೂಚನೆ ನೀಡಿರುವುದಾಗಿ ತಿಳಿಸಿದರು. ನಂತರ ಕಾವೇರಿ ಅಣೆಕಟ್ಟೆಯನ್ನು ವೀಕ್ಷಿಸಿದ ಸಚಿವರು ಅಧಿಕಾರಿಗಳಿಂದ

ಪ್ರವಾಸೋದ್ಯಮ ಅಭಿವೃದ್ಧಿ ಸಂಬಂಧ ಮಾಹಿತಿ ಪಡೆದರು.

ಡಿಸ್ನಿಲ್ಯಾಂಡ್‌ ಯೋಜನೆಗೆ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಮುಂದಾಗಿತ್ತು. ಆ ವೇಳೆ ಸ್ಥಳೀಯರು ಹಾಗೂ ರೈತರು ಯೋಜನೆಗೆ ಆಕ್ಷೇಪ ವ್ಯಕ್ತವಾಗಿತ್ತು.
 

click me!