ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ₹5300 ಕೋಟಿ ಘೋಷಣೆ ಮಾಡಿದೆ ಆದ್ರೆ ಒಂದು ಪೈಸೆ ಬಿಡುಗಡೆ ಇಲ್ಲ: ಸಚಿವ ಡಿ ಸುಧಾಕರ್

By Ravi Janekal  |  First Published Jun 24, 2023, 6:00 PM IST

ಭದ್ರಾ ಮೇಲ್ದಂಡೆ ಯೋಜನಾ ಕಾಮಗಾರಿ ಪ್ರದೇಶಗಳನ್ನು ವೀಕ್ಷಣೆ ಮಾಡಿದ್ದೇವೆ. ಕಾಮಗಾರಿ ಪ್ರದೇಶಗಳಲ್ಲಿ ತೊಂದರೆ ಇರುವ ಪ್ರದೇಶಗಳನ್ನು ಗುರುತಿಸಿ ತ್ವರಿತ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಿದ್ದೇವೆ ಎಂದು ಸಚಿವ ಡಿ.ಸುಧಾಕರ್ ತಿಳಿಸಿದರು.


ಭದ್ರಾವತಿ (ಜೂ.24) : ಭದ್ರಾ ಮೇಲ್ದಂಡೆ ಯೋಜನಾ ಕಾಮಗಾರಿ ಪ್ರದೇಶಗಳನ್ನು ವೀಕ್ಷಣೆ ಮಾಡಿದ್ದೇವೆ. ಕಾಮಗಾರಿ ಪ್ರದೇಶಗಳಲ್ಲಿ ತೊಂದರೆ ಇರುವ ಪ್ರದೇಶಗಳನ್ನು ಗುರುತಿಸಿ ತ್ವರಿತ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಿದ್ದೇವೆ ಎಂದು ಸಚಿವ ಡಿ.ಸುಧಾಕರ್ ತಿಳಿಸಿದರು.

ಇಂದು ಭದ್ರಾವತಿಯ ಬಿಆರ್‌ಪಿಯಲ್ಲಿ  ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಕೆಲವು ಕಡೆ ವಿದ್ಯುತ್ ಶಕ್ತಿ, ಅರಣ್ಯ ಹಾಗೂ ಸ್ಥಳೀಯ ಸಮಸ್ಯೆಗಳಿವೆ. ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ಅರಣ್ಯ ಇಲಾಖೆಯ ಕ್ಲಿಯರೆನ್ಸ್ ಸಿಕ್ಕಿದೆ. ತುಂಗಾ ನದಿಯಿಂದ ಭದ್ರಾ ನದಿಗೆ ನೀರನ್ನು ಹಾಯಿಸುವ ಯೋಜನೆ ಕಾಮಗಾರಿ ವೀಕ್ಷಣೆ ಮಾಡಿದ್ದೇವೆ. ಇದುವರೆಗೂ ಕಾಮಗಾರಿ ಆಮೆ ಗತಿಯಲ್ಲಿ ಸಾಗಿದ್ದು ಇದನ್ನು ತ್ವರಿತಗತಿಯಲ್ಲಿ ಸಾಗಿಸಲು ಸೂಚನೆ ನೀಡಿದ್ದೇವೆ ಎಂದರು.

Latest Videos

undefined

ಚಿತ್ರದುರ್ಗ: ಅಶಿಸ್ತು ತೋರಿದ ಅಧಿಕಾರಿಗಳಿಗೆ ಸಚಿವ ಡಿ ಸುಧಾಕರ್ ತರಾಟೆ!

ಈ ಹಿಂದೆ ಸಿದ್ದರಾಮಯ್ಯ(SiddaramaiahCM) ಸರ್ಕಾರದ ಅಧಿಕಾರಾವಧಿಯಲ್ಲಿ ಏಳರಿಂದ ಎಂಟು ಕೋಟಿ ಈ ಯೋಜನೆಗೆ ಖರ್ಚು ಮಾಡಿದ್ದೆವು. ಚಿತ್ರದುರ್ಗ ಜಿಲ್ಲೆ ಹಾಗೂ ದಾವಣಗೆರೆ ಜಿಲ್ಲೆಯ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಈ ಯೋಜನೆ ರೂಪಿಸಲಾಗಿದೆ. ಆದರೆ ಕೇಂದ್ರ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗಾಗಿ 2023ರ ಬಜೆಟ್ ನಲ್ಲಿ 5300 ಕೋಟಿ ಘೋಷಣೆ ಮಾಡಿದ್ದು ಇದುವರೆಗೂ ಬಿಡುಗಡೆಯಾಗಿಲ್ಲ. ಇದೀಗ ಕಾಮಗಾರಿಯ ಪರಿಶೀಲನೆ ನಡೆಸಿದ್ದು ನೀರಾವರಿ ಸಚಿವರು ಹಾಗೂ ಸಿಎಂ ಜೊತೆ ಚರ್ಚೆ ನಡೆಸುತ್ತೇವೆ ಎಂದರು.

ಸುಮಾರು 11 ಟವರ್ಸ್ ಗಳು ಹಾಗೂ ಸೆಕೆಂಡ್ ಜಾಕ್ ವೆಲ್ ಬಳಿ ಸಮಸ್ಯೆ ಇದ್ದು ಶೀಘ್ರವೇ ಬಗೆಹರಿಸುತ್ತೇವೆ. ಕೇಂದ್ರ ಸರ್ಕಾರ ಇದನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡಿದ್ದು ಮುಂದಿನ ದಿನಗಳಲ್ಲಿ ಎಷ್ಟು ಅನುದಾನ ಬಿಡುಗಡೆ ಮಾಡುತ್ತೆ ನೋಡಬೇಕಿದೆ ಎಂದರು. ಇದೇ ವೇಳೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಜಾರಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಎಲ್ಲಾ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು.

ಐದು ಕಾಂಗ್ರೆಸ್‌ ಗ್ಯಾರಂಟಿ ಜಾರಿ ದೇಶದಲ್ಲಿಯೇ ಕ್ರಾಂತಿಕಾರ ಹೆಜ್ಜೆ: ಸಚಿವ ಡಿ.ಸುಧಾಕರ್‌ ಬಣ್ಣನೆ

click me!