ಹುಬ್ಬಳ್ಳಿಯಲ್ಲಿ 20 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಜಿಟಿಟಿಸಿ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರ ಲೋಕಾರ್ಪಣೆ

Published : Dec 27, 2022, 06:43 PM IST
 ಹುಬ್ಬಳ್ಳಿಯಲ್ಲಿ 20 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಜಿಟಿಟಿಸಿ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರ ಲೋಕಾರ್ಪಣೆ

ಸಾರಾಂಶ

ಹುಬ್ಬಳ್ಳಿಯ ಗೋಕುಲ ರಸ್ತೆಯ ಕೈಗಾರಿಕಾ ಪ್ರದೇಶದಲ್ಲಿ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ವತಿಯಿಂದ 20 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರ ಲೋಕಾರ್ಪಣೆಯಾಗಿದೆ. ಈ ನೂತನ ಕೇಂದ್ರದಲ್ಲಿ ಒಟ್ಟು 60 ಅಲ್ಪಾವಧಿ ಮತ್ತು ದೀರ್ಘಾವಧಿ ಕೋರ್ಸುಗಳಿದ್ದು‌, ಸ್ಥಳೀಯ ಯುವಜನತೆ ಉದ್ಯೋಗ ಗಿಟ್ಟಿಸಿಕೊಳ್ಳಲು ನೆರವಾಗಲಿದೆ.

ಹುಬ್ಬಳ್ಳಿ (ಡಿ.27): ಹುಬ್ಬಳ್ಳಿಯ ಗೋಕುಲ ರಸ್ತೆಯ ಕೈಗಾರಿಕಾ ಪ್ರದೇಶದಲ್ಲಿ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ವತಿಯಿಂದ 20 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು. ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಇಂದು ಉದ್ಘಾಟಿಸಿದ್ದಾರೆ. ಈ ನೂತನ ಕೇಂದ್ರದಲ್ಲಿ ಒಟ್ಟು 60 ಅಲ್ಪಾವಧಿ ಮತ್ತು ದೀರ್ಘಾವಧಿ ಕೋರ್ಸುಗಳಿದ್ದು‌,  ಇದರಿಂದ ಸ್ಥಳೀಯ ಯುವಜನತೆ ಉದ್ಯೋಗ ಗಿಟ್ಟಿಸಿಕೊಳ್ಳಲು ನೆರವಾಗಲಿದೆ. ಇಡೀ ದೇಶದಲ್ಲಿ ಕರ್ನಾಟಕ ಮಾತ್ರ ತಾಂತ್ರಿಕೇತರ ಕೋರ್ಸುಗಳ ವಿದ್ಯಾರ್ಥಿಗಳಿಗೂ ಕೌಶಲ್ಯಾಭಿವೃದ್ಧಿ ತರಬೇತಿ ಒದಗಿಸಲಾಗುತ್ತಿದೆ. ನೂತನ   ರಾಷ್ಟ್ರೀಯ ಶಿಕ್ಷಣ ನೀತಿಯಲ್ಲೇ ಇದನ್ನು ಅಳವಡಿಸಲಾಗಿದೆ.

SAI Recruitment 2023: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ

ಉದ್ಘಾಟಿಸಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ .ಮೊದಲ ಮೂರು ಕೈಗಾರಿಕಾ ಕ್ರಾಂತಿಗಳ ಲಾಭದಿಂದ ವಂಚಿತವಾದ ನಾವು ನಾಲ್ಕನೇ ಕೈಗಾರಿಕಾ ಕ್ರಾಂತಿಯನ್ನು ತಪ್ಪಿಸಿಕೊಳ್ಳಬಾರದು" ಎಂದರು.ಸದ್ಯಕ್ಕೆ ಸೆಮಿಕಂಡಕ್ಟರ್ ಮತ್ತು ಚಿಪ್ ತಯಾರಿಕೆಯಲ್ಲಿ ತೈವಾನ್‌ ಮುಂಚೂಣಿಯಲ್ಲಿದೆ. ಈಗ ರಾಜ್ಯದಲ್ಲಿ ಇವೆರಡೂ ಕ್ಷೇತ್ರಗಳತ್ತ ಆದ್ಯ ಗಮನ ಹರಿಸಿದೆ. ಇನ್ನು ಕೆಲವೇ ವರ್ಷಗಳಲ್ಲಿ ನಾವು ಇದರಲ್ಲಿ ಅಗ್ರಸ್ಥಾನವನ್ನು ಅಲಂಕರಿಸಲಿದೆ. ಆತ್ಮನಿರ್ಭರ ಭಾರತದ ನಿರ್ಮಾಣ ಇಂದಿನ ಗುರಿಯಾಗಿದೆ. ಇದಕ್ಕೆ ಗುಣಮಟ್ಟದ ಶಿಕ್ಷಣ ಮತ್ತು ಆಧುನಿಕ ಕೌಶಲ್ಯಾಭಿವೃದ್ಧಿ ಅತ್ಯಗತ್ಯವಾಗಿವೆ ಎಂದು ಅವರು ಪ್ರತಿಪಾದಿಸಿದರು.

2015ರವರೆಗಿನ ಖಾಲಿ ಬೋಧಕ ಹುದ್ದೆಗೆ ಶೀಘ್ರವೇ ನೇಮಕಾತಿ: ಸಚಿವ ಬಿ ಸಿ ನಾಗೇಶ್‌

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಮತ್ತು ಶಾಸಕ ಜಗದೀಶ್ ಶೆಟ್ಟರ್, ಜಿಟಿಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ ಉಪಸ್ಥಿತರಿದ್ದರು. ಇದೆ ವೇಳೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಉಚಿತ ಸಹಾಯವಾಣಿಗೂ ಟೋಲ್ ಫ್ರೀ ನಂ: 155267 ಆರಂಭಿಸಲಾಯಿತು. ಇದರ ಮೂಲಕ, ಅಗತ್ಯವಿರುವವರಿಗೆ ಉದ್ಯಮಶೀಲತೆಗೆ ಸಂಬಂಧಿಸಿದ ಎಲ್ಲ ಮಾರ್ಗದರ್ಶನ ಮಾಡಲಾಗುವುದು. ಇಡೀ ರಾಜ್ಯದಿಂದ ಬರುವ ಕರೆಗಳನ್ನು ಇಲ್ಲಿ ನಿರ್ವಹಿಸಲಾಗುವುದು ಎಂದು ಸಚಿವ ಅಶ್ವತ್ಥನಾರಾಯಣ ವಿವರಿಸಿದರು.

 

PREV
Read more Articles on
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC