
ಚಿಕ್ಕಬಳ್ಳಾಪುರ(ನ.19): ರಾಜ್ಯದಲ್ಲಿ ಗ್ರಾಹಕರು ಮತ್ತು ಹೈನುಗಾರಿಕೆ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಹಾಲಿನ ಬೆಲೆ ಹೆಚ್ಚಿಸಲು ಮುಖ್ಯಮಂತ್ರಿಗಳು ಶೀಘ್ರದಲ್ಲಿಯೇ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಭರವಸೆ ನೀಡಿದರು.
ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಶುಕ್ರವಾರ ಆಯೋಜಿಸಿದ್ದ 60 ಲಕ್ಷ ರು.ಗಳ ವೆಚ್ಚದ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಚೇರಿ ನೂತನ ಕಟ್ಟಡ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.
ಸಿದ್ದು ಗೆಲುವು ಸುಲಭವಿಲ್ಲ : ಸಿಎಂ ಅಭ್ಯರ್ಥಿ ಎಂದು ಘೋಷಿಸಲಿ - ಸುಧಾಕರ್
ಗುಣಮಟ್ಟದಲ್ಲಿ ರಾಜಿ ಇಲ್ಲ
ಪಶು ಆಹಾರ ಬೆಲೆ ಹೆಚ್ಚಾಗಿರುವುದರಿಂದ ಹೈನು ರೈತರು ಮತ್ತು ಸಂಘಗಳು ಹಾಲಿನ ಬೆಲೆ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದಾರೆ. ಇದು ಸರ್ಕಾರದ ಮುಂದಿದ್ದು, ಮುಖ್ಯಮಂತ್ರಿಗಳು ಶೀಘ್ರದಲ್ಲಿಯೇ ಈ ಸಂಬಂಧ ಸಭೆ ಕರೆಯಲಿದ್ದಾರೆ. 60 ಲಕ್ಷ ವೆಚ್ಚದಲ್ಲಿ ಕಚೇರಿ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಗಿದೆ. ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರ ನಿಧಿಯಿಂದ ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡಲು ಕ್ರಮ ವಹಿಸುವುದಾಗಿ ಸಚಿವರು ಭರವಸೆ ನೀಡಿದರು.