ಧಾರವಾಡ ಜಿಲ್ಲೆಯಲ್ಲಿ ಮಳೆಯಿಂದ ಬೆಳೆ ಹಾನಿ: ಸಚಿವ ಹಾಲಪ್ಪ ಭೇಟಿ

By Govindaraj SFirst Published Aug 11, 2022, 11:44 PM IST
Highlights

ಅಪಾರ ಪ್ರಮಾಣ ಮಳೆಯಿಂದಾಗಿ ಧಾರವಾಡ ಜಿಲ್ಲೆಯಲ್ಲಿ ಬಿತ್ತನೆ ಮಾಡಲಾದ 2.73 ಹೆಕ್ಟೇರ್ ಪೈಕಿ. 89,148 ಹೆಕ್ಟೇರ್ ಬೆಳೆ ಹಾನಿ ಸಂಭವಿಸಿದೆ. 61,566 ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬೆಳೆ ಹಾನಿಯಾಗಿದೆ. 916 ಹೆಕ್ಟೇರ್ ಉದ್ದು ಹಾನಿಯಾಗಿದ್ದು, ಒಟ್ಟು 89,148 ಹೆಕ್ಟೇರ್ ಬೆಳೆ ಹಾನಿ ಸಂಭವಿಸಿದೆ. 

ಹುಬ್ಬಳ್ಳಿ (ಆ.11): ಅಪಾರ ಪ್ರಮಾಣ ಮಳೆಯಿಂದಾಗಿ ಧಾರವಾಡ ಜಿಲ್ಲೆಯಲ್ಲಿ ಬಿತ್ತನೆ ಮಾಡಲಾದ 2.73 ಹೆಕ್ಟೇರ್ ಪೈಕಿ. 89,148 ಹೆಕ್ಟೇರ್ ಬೆಳೆ ಹಾನಿ ಸಂಭವಿಸಿದೆ. 61,566 ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬೆಳೆ ಹಾನಿಯಾಗಿದೆ. 916 ಹೆಕ್ಟೇರ್ ಉದ್ದು ಹಾನಿಯಾಗಿದ್ದು, ಒಟ್ಟು 89,148 ಹೆಕ್ಟೇರ್ ಬೆಳೆ ಹಾನಿ ಸಂಭವಿಸಿದೆ. ಮಳೆಯಿಂದ ಬೆಳೆ ಹಾನಿಯಾದ  ಹಿನ್ನೆಲೆಯಲ್ಲಿ ಹುಬ್ಬಳ್ಳಿ ತಾಲೂಕಿನ ವಿವಿಧೆಡೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹುಬ್ಬಳ್ಳಿ ತಾಲೂಕಿನ ನಲವಡಿ ಹಾಗೂ ಶಿರಗುಪ್ಪಿಗೆ ಭೇಟಿ ನೀಡಿ ಅವರು ಅತಿವೃಷ್ಟಿ ಬಾಧಿತ ಹೊಲಗಳ ಪರಿಶೀಲನೆ ಮಾಡಿದರು. 

ರೈತರಿಂದ ಹಾನಿಯ ಮಾಹಿತಿ ಪಡೆದ ಸವಿಬ ಹಾಲಪ್ಪ ಆಚಾರ್ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಬಳಿಕ ಮಾಧ್ಯಮಗಳ ಜೊತೆ  ಮಾತನಾಡಿದ ಅವರು, ಉತ್ತಮ ಮಳೆ ಆಗಿದೆ ಅಂತ ರೈತರು ಖುಷಿಯಿಂದ ಇದ್ದರು. ಆದರೆ ಇತ್ತೀಚೆಗೆ ಸುರಿದ ಮಳೆಗೆ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಅನಿರೀಕ್ಷಿತ ಮಳೆಯಿಂದ ಕಾಳು ಕಟ್ಟುವ ಹಂತದಲ್ಲಿ ಬೆಳೆ ಹಾನಿಯಾಗಿದೆ. ಧಾರವಾಡ ಜಿಲ್ಲೆಯಲ್ಲಿ ಒಟ್ಟು 2.73 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಈ ಪೈಕಿ 89,148 ಹೆಕ್ಟೇರ್ ಬೆಳೆ ಹಾನಿ ಸಂಭವಿಸಿದೆ. 61,566 ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬೆಳೆ ಹಾನಿಯಾಗಿದೆ. 916 ಹೆಕ್ಟೇರ್ ಉದ್ದು ಹಾನಿಯಾಗಿದೆ. ಅಧಿಕಾರಿಗಳು ಸರ್ವೆ ರಿಪೋರ್ಟ್ ಸಿದ್ಧಪಡಿಸಿದ್ದಾರೆ. ಎನ್.ಡಿ.ಆರ್.ಎಫ್ ನಿಯಮಗಳ ಅನ್ವಯ ಪರಿಹಾರ ಕೊಡಲಾಗುವುದು. 

ಹುಬ್ಬಳ್ಳಿಯಲ್ಲಿ ಮತ್ತೆ ಈದ್ಗಾ ವಿವಾದ: ಗಣೇಶೋತ್ಸವಕ್ಕೆ ಅವಕಾಶ ಕೋರಿ ಮನವಿ

ರಾಜ್ಯ ಸರ್ಕಾರದ ನೆರವೂ ಸೇರಿ ಪ್ರತಿ ಹೆಕ್ಟೇರ್‌ಗೆ 13,600 ಪರಿಹಾರ ನೀಡಲಾಗುವುದು. ಬೆಳೆ ವಿಮೆ ಪರಿಹಾರಕ್ಕೂ ಕ್ರಮ ಕೈಗೊಳ್ಳಲಾಗುವುದು. 1,48,166 ರೈತರು ಬೆಳೆ ವಿಮೆ ಹಣ ಕಟ್ಟಿದ್ದಾರೆ. ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ವಿಮಾ ಕಂಪನಿಗಳ ಜೊತೆಯೂ ನಮ್ಮ ಅಧಿಕಾರಿಗಳು ಮಾತನಾಡಿದ್ದಾರೆ ಎಂದಜ ಹಾಲಪ್ಪ ತಿಳಿಸಿದ್ದಾರೆ. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿಯಾದ ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ, ಬೆಳೆ ವಿಮೆ ಪರಿಹಾರ ಸಮರ್ಪಕವಾಗಿ ರೈತರನ್ನು ತಲುಪುತ್ತಿಲ್ಲ. ವಿಮಾ ಕಂಪನಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ ಪರಿಹಾರ ದೊರಕಿಸಿಕೊಡುವಂತೆ ಮನವಿ ಮಾಡಿದರು. ನಂತರ ಹಾಲಪ್ಪ ಆಚಾರ್, ಹುಬ್ಬಳ್ಳಿಯ ಸರ್ಕೀಟ್ ಹೌಸ್‌ನಲ್ಲಿ ಅಧಿಕಾರಿಗಳ ಸಭೆ ಮಾಡಿದರು.

ಮಲೆನಾಡಲ್ಲಿ ಮುಂದುವರೆದ ಗಾಳಿ-ಮಳೆ ಅಬ್ಬರ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುರೆದಿದೆ. ಮಳೆಯಿಂದ ಸರಣಿ ಅನಾಹುತಗಳು ಸಂಭವಿಸಿದೆ. ಕಾಫಿ ಡೇ ಸಿದ್ದಾರ್ಥ್ ಒಡೆತನಕ್ಕೆ ಸೇರಿದ ತರೀಕೆರೆ ತಾಲೂಕಿನ ನಂದಿಗಾವೆ ಕಾಫಿ ತೋಟದಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಪರಿಣಾಮ ಕಾಫಿ ಗಿಡಗಳು ನಾಶವಾಗಿವೆ. ಗುಡ್ಡದಿಂದ ನೂರಾರು ಕಲ್ಲುಬಂಡೆಗಳು ಜಾರಿ ಬಂದಿದ್ದು, ಸುಮಾರು ಒಂದು ಎಕರೆಗೂ ಹೆಚ್ಚು ಕಾಫಿ ತೋಟ ಹಾನಿ ಉಂಟಾಗಿದೆ. ಗುಡ್ಡ ಜರಿದ ಪರಿಣಾಮ ತೋಟದ ರಸ್ತೆಗಳಿಗೂ ಹಾನಿ ಸಂಭವಿಸಿದೆ. 

ಬಿಜೆಪಿಗರ ಢೋಂಗಿತನದ ರಾಷ್ಟ್ರಭಕ್ತಿ ಬೇಡ: ಸಿದ್ದರಾಮಯ್ಯ

ಮಳೆ ಹಾಗೂ ಬಿರುಗಾಳಿಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಉರುಳಿಬಿದ್ದಿರುವ ಘಟನೆ ಚಿಕ್ಕಮಗಳೂರು-ಮೂಡಿಗೆರೆ ರಸ್ತೆಯ ಕಬ್ಬಿಣ ಸೇತುವೆ ಗ್ರಾಮದ ಬಳಿ ಇಂದು  ಬೆಳಗ್ಗೆ ಸಂಭವಿಸಿದೆ. ಬೆಳಗ್ಗೆ 11:30ರ ವೇಳೆಗೆ ಚಿಕ್ಕಮಗಳೂರಿನ ಯಾದವ್ ಎಂಬುವವರಿಗೆ ಸೇರಿದ ಆಲ್ಟೊ ಕಾರು ಅಪಘಾತಕ್ಕೀಡಾಗಿದೆ. ಕಾರಿನಲ್ಲಿ ಇದ್ದ ಎಲ್ಲರೂ  ಅಪಾಯದಿಂದ ಪರಾಗಿದ್ದಾರೆ. ಚಿಕ್ಕಮಗಳೂರಿನಿಂದ ಧರ್ಮಸ್ಥಳಕ್ಕೆ ಪ್ರವಾಸ ಹೋಗಿ ಬರುತ್ತಿರುವ ಸಂದರ್ಭದಲ್ಲಿ ಭಾರಿ ಮಳೆಯಿಂದ ಕಾರು ಎಡ ಭಾಗಕ್ಕೆ ಜಾರಿ ಕಾಫಿ ತೋಟದ ದಿಬ್ಬಕ್ಕೆ ಗುದ್ದಿದೆ. ಸ್ಥಳೀಯರು ಟ್ರಾಕ್ಟರ್ ಸಹಾಯದಿಂದ ಕಾರನ್ನು ಮೇಲಕ್ಕೆ ಎತ್ತಿದ್ದಾರೆ.

click me!