ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಸ್ಮಶಾನ ಜಾಗದಲ್ಲಿ ಸದರಿ ವ್ಯಕ್ತಿಗಳ ವಿರುದ್ಧ ಸೂಕ್ತ ತನಿಖೆ ಮಾಡಿ ಕಾನೂನು ಕ್ರಮ ಕೈಗೊಳ್ಳುವುದಲ್ಲದೇ ಇವರಿಗೆ ನೀಡಿರುವ ಗಣಿ ಗುತ್ತಿಗೆಯ ಅನುಮತಿಯನ್ನು (ಎನ್ಒಸಿ) ರದ್ದು ಪಡಿಸುವಂತೆ ಪತ್ರದಲ್ಲಿ ಸೂಚಿಸಿದ ಸಚಿವ ಡಾ.ಎಚ್.ಸಿ.ಮಹದೇವಪ್ಪ
ಹನೂರು(ಡಿ.03): ತಾಲೂಕಿನ ಹಿರೀಕಾಟಿ ಗ್ರಾಮದ ೧೦೮ ರಲ್ಲಿನ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಸ್ಮಶಾನದ ಜಾಗದಲ್ಲಿ ಒತ್ತುವರಿ ಮಾಡಿ ಗಣಿಗಾರಿಕೆ ನಡೆಸಿರುವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿ ಸಮಾಜ ಕಲ್ಯಾಣ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಚಾಮರಾಜನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.
ಹಿರೀಕಾಟಿ ಸ.ನಂ.೧೦೮ ರಲ್ಲಿ ಗಣಿಗಾರಿಕೆ ಗೀತಾ ಗಣೇಶ್ ೧.೨೦ ಗುಂಟೆ (ಗುತ್ತಿಗೆ ಸಂಖ್ಯೆ ೧೫೦) ಹಾಗೂ ಗಾಯತ್ರಿ ಪುಟ್ಟಣ್ಣ ೩ ಎಕರೆ (ಗುತ್ತಿಗೆ ಸಂಖ್ಯೆ ೧೫೩) ಅನುಮತಿ ಕೊಟ್ಟಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಸ್ಮಶಾನ ಜಾಗದಲ್ಲಿ ಸದರಿ ವ್ಯಕ್ತಿಗಳ ವಿರುದ್ಧ ಸೂಕ್ತ ತನಿಖೆ ಮಾಡಿ ಕಾನೂನು ಕ್ರಮ ಕೈಗೊಳ್ಳುವುದಲ್ಲದೇ ಇವರಿಗೆ ನೀಡಿರುವ ಗಣಿ ಗುತ್ತಿಗೆಯ ಅನುಮತಿಯನ್ನು (ಎನ್ಒಸಿ) ರದ್ದು ಪಡಿಸುವಂತೆ ಪತ್ರದಲ್ಲಿ ಸೂಚಿಸಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದಲ್ಲೂ ಈಗ ವನ್ಯಜೀವಿ ಸಫಾರಿ ಆರಂಭ! ಬುಕಿಂಗ್ ಹೇಗೆ? ಫೀ ಎಷ್ಟು? ಇಲ್ಲಿದೆ ಮಾಹಿತಿ
ಸೌಕರ್ಯ ಕಲ್ಪಿಸಿ
ಹಿರೀಕಾಟಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಹಾಗೂ ಸ್ಮಶಾನದ ಜಾಗಕ್ಕೆ ಮೂಲ ಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಿಕೊಡಬೇಕೆಂದು ಗ್ರಾಮಸ್ಥರ ಮನವಿ ಮೇರೆಗೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಜಿಲ್ಲಾಧಿಕಾರಿಗೆ ಗ್ರಾಮಸ್ಥರ ಮನವಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪತ್ರದಲ್ಲಿ ತಿಳಿಸಿದ್ದಾರೆ.