'ಪೇಜಾವರ ಶ್ರೀಗಳ ಅಗಲಿಕೆ ಹಿಂದೂ ಸಮಾಜ, ದೇಶಕ್ಕೆ ತುಂಬಲಾರದ ನಷ್ಟ'

Suvarna News   | Asianet News
Published : Dec 29, 2019, 01:26 PM ISTUpdated : Dec 29, 2019, 01:27 PM IST
'ಪೇಜಾವರ ಶ್ರೀಗಳ ಅಗಲಿಕೆ ಹಿಂದೂ ಸಮಾಜ, ದೇಶಕ್ಕೆ ತುಂಬಲಾರದ ನಷ್ಟ'

ಸಾರಾಂಶ

ಪೇಜಾವರ ಶ್ರೀಗಳ ನಿಧನಕ್ಕೆ ಸಚಿವ ಜಗದೀಶ್ ಶೆಟ್ಟರ್ ಸಂತಾಪ|ಶ್ರೀಗಳು ಸಮಾಜದಲ್ಲಿನ ಲೋಪದೋಷ, ಅಸ್ಪೃಶ್ಯತೆ ಹೋಗಲಾಡಿಸುವ ನಿಟ್ಟಿನಲ್ಲಿ ಮಾರ್ಗದರ್ಶಕರಾಗಿದ್ದರು| ಸಾಂಸ್ಕೃತಿಕವಾಗಿ, ಸಾಮಾಜಿಕವಾಗಿ ಅವರು ಎಲ್ಲರಿಗೂ ಆದರ್ಶವಾಗಿದ್ದರು| ಶ್ರೀಗಳ ಮಾರ್ಗದರ್ಶನದಲ್ಲಿ ನಾವೆಲ್ಲರೂ ನಡೆಯಬೇಕು ಎಂದ ಜಗದೀಶ್ ಶೆಟ್ಟರ್|  

ಹುಬ್ಬಳ್ಳಿ(ಡಿ.29): ಉಡುಪಿ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ನಿಧನಕ್ಕೆ ಸಚಿವ ಜಗದೀಶ್ ಶೆಟ್ಟರ್ ಅವರು ಸಂತಾಪ ಸೂಚಿಸಿದ್ದಾರೆ. 

ಭಾನುವಾರ ನಗರದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಪೇಜಾವರ ಶ್ರೀಗಳು ಹಿಂದೂ ಸಮಾಜಕ್ಕೆ ಒಂದು ದೊಡ್ಡ ಶಕ್ತಿಯಾಗಿದ್ದರು. ಹಿಂದೂ ಸಮಾಜಕ್ಕೆ ಯಾವುದೇ ಧಕ್ಕೆಯಾದರೆ ಅದರ ವಿರುದ್ಧ ಧ್ವನಿ ಎತ್ತುತ್ತಿದ್ದರು. ಅವರ ಅಗಲಿಕೆ ಹಿಂದೂ ಸಮಾಜಕ್ಕೆ, ದೇಶಕ್ಕೆ ತುಂಬಲಾರದ ನಷ್ಟ ತಂದಿದೆ ಎಂದು ಹೇಳಿದ್ದಾರೆ. 

ವಿಶ್ವಸಂತ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ ಅಸ್ತಂಗತ

ಶ್ರೀಗಳು ಸಮಾಜದಲ್ಲಿನ ಲೋಪದೋಷ, ಅಸ್ಪೃಶ್ಯತೆ ಹೋಗಲಾಡಿಸುವ ನಿಟ್ಟಿನಲ್ಲಿ ಮಾರ್ಗದರ್ಶಕರಾಗಿದ್ದರು. ಸಾಂಸ್ಕೃತಿಕವಾಗಿ, ಸಾಮಾಜಿಕವಾಗಿ ಅವರು ಎಲ್ಲರಿಗೂ ಆದರ್ಶವಾಗಿದ್ದರು. ಅವರ ಅಗಲಿಕೆಯಿಂದ ಲಕ್ಷಾಂತರ ಭಕ್ತರಿಗೆ ತೀವ್ರ ನೋವಾಗಿದೆ. ಪೇಜಾವರ ಶ್ರೀಗಳ ಮಾರ್ಗದರ್ಶನದಲ್ಲಿ ನಾವೆಲ್ಲರೂ ನಡೆಯಬೇಕು ಎಂದು ಹೇಳಿದ್ದಾರೆ. 

ಬೆಂಗಳೂರಿನ ವಿದ್ಯಾಪೀಠದಲ್ಲಿ ಪೇಜಾವರ ಶ್ರೀಗಳ ಅಂತ್ಯಸಂಸ್ಕಾರ

ಹುಬ್ಬಳ್ಳಿಗೂ ಶ್ರೀಗಳಿಗೂ ಸಾಕಷ್ಟು ನಂಟು ಇತ್ತು. ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಭಾಗವಹಿಸಿದ್ದು ನನ್ನ ಸೌಭಾಗ್ಯವಾಗಿದೆ. ಅವರ ಲಕ್ಷಾಂತರ ಭಕ್ತರಿಗೆ ನೋವನ್ನು ಭರಿಸುವ ಶಕ್ತಿಯನ್ನ ದೇವರು ಕರುಣಿಸಲಿ ಎಂದು ತಿಳಿಸಿದ್ದಾರೆ. 
 

PREV
click me!

Recommended Stories

ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ