'ಹುಬ್ಬಳ್ಳಿ ಆಯ್ತು ಇದೀಗ ಈ ನಗರದಲ್ಲೂ ಬಂಡವಾಳ ಹೂಡಿಕೆದಾರರ ಸಮಾವೇಶ'

Kannadaprabha News   | Asianet News
Published : Feb 24, 2020, 01:18 PM ISTUpdated : Jan 18, 2022, 03:40 PM IST
'ಹುಬ್ಬಳ್ಳಿ ಆಯ್ತು ಇದೀಗ ಈ ನಗರದಲ್ಲೂ ಬಂಡವಾಳ ಹೂಡಿಕೆದಾರರ ಸಮಾವೇಶ'

ಸಾರಾಂಶ

ಮೈಸೂರಿನಲ್ಲಿ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಚಿಂತನೆ| ಬಾಂಬೆ ಇನ್‌ವೆಸ್ಟರ್ಸ್‌ ಮೀಟ್‌ ಮಾದರಿಯಲ್ಲಿ ಕರ್ನಾಟಕದ 2ನೇ ಮತ್ತು 3ನೇ ಸ್ತರದ ನಗರಗಳಲ್ಲಿ ವಲಯ ಮಟ್ಟದಲ್ಲಿ ಹೂಡಿಕೆದಾರರ ಸಭೆ ನಡೆಸಲಾಗುವುದು| ಕೈಗಾರಿಕಾ ಪ್ರದೇಶದಲ್ಲಿ ಸರ್ಕಾರಿ ಹಾಗೂ ನಾಲಾ ಭೂಮಿಯನ್ನು KIADBಗೆ ಹಸ್ತಾಂತರಿಸಬೇಕು|

ಮೈಸೂರು(ಫೆ.24): ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಬಂಡವಾಳ ಹೂಡಿಕೆದಾರರ ಸಮಾವೇಶದಂತೆ ಮೈಸೂರಿನಲ್ಲಿಯೂ ಬಂಡವಾಳ ಹೂಡಿಕೆದಾರರ ಸಮಾವೇಶ ಆಯೋಜಿಸಲು ಉದ್ದೇಶಿಸಲಾಗಿದ್ದು, ಅದಕ್ಕಾಗಿ ಶೀಘ್ರದಲ್ಲೇ ಪೂರ್ವಭಾವಿ ಸಭೆ ಕರೆಯಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ಭಾನುವಾರ ಸರ್ಕಾರಿ ಅತಿಥಿಗೃಹದಲ್ಲಿ ಜನಪ್ರತಿನಿಧಿಗಳು, ಕೈಗಾರಿಕೋದ್ಯಮಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿದ ಅವರು ಹುಬ್ಬಳ್ಳಿಯಲ್ಲಿ ನಡೆದ ವಿಭಾಗ ಮಟ್ಟದ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 72 ಸಾವಿರ ಕೋಟಿ ರು. ಬಂಡವಾಳ ಹರಿದು ಬಂದಿದೆ ಎಂದರು.

ಇನ್ವೆಸ್ಟ್‌ ಕರ್ನಾಟಕ: 72000 ಕೋಟಿ ರೂ ಹೂಡಿಕೆ ಒಪ್ಪಂದ!

ಬಾಂಬೆ ಇನ್‌ವೆಸ್ಟರ್ಸ್‌ ಮೀಟ್‌ ಮಾದರಿಯಲ್ಲಿ ಕರ್ನಾಟಕದ ಎರಡನೇ ಮತ್ತು ಮೂರನೇ ಸ್ತರದ ನಗರಗಳಲ್ಲಿ ವಲಯ ಮಟ್ಟದಲ್ಲಿ ಹೂಡಿಕೆದಾರರ ಸಭೆ ನಡೆಸಲಾಗುವುದು. 2019-24ರ ಕೈಗಾರಿಕಾ ನೀತಿಯಲ್ಲಿ ತಿಳಿಸಿರುವಂತೆ ಎರಡನೇ ಮತ್ತು ಮೂರನೇ ನಗರಗಳಲ್ಲಿ ಕೈಗಾರಿಕೆಗಳಿಗೆ ಒತ್ತು ನೀಡಲಾಗುವುದು ಎಂದರು.

ಪ್ರಸ್ತಾವನೆ ಸಲ್ಲಿಕೆ:

ಮೈಸೂರು ಕೈಗಾರಿಕೆಗಳ ಸಂಘದ ಅಧ್ಯಕ್ಷರಾದ ವಾಸು ಅವರು ಹಲವಾರು ಪ್ರಸ್ತಾವನೆಗಳನ್ನು ಸಚಿವರಿಗೆ ಸಲ್ಲಿಸಿದರು. ಕೂರ್ಗಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿಯಿಂದ ಹಂಚಿಕೆಯಾಗಿರುವ ಉದ್ದಿಮೆದಾರರಿಗೆ ಹಂಚಿಕೆ ಪತ್ರ ನೀಡಬೇಕು. ತಾಂಡ್ಯ/ಹಿಮ್ಮಾವು ಕೈಗಾರಿಕಾ ಪ್ರದೇಶದಲ್ಲಿ 100 ಎಕರೆ ಪ್ರದೇಶವನ್ನು ಆಹಾರ ಮತ್ತು ಪಾರ್ಮ ಪಾರ್ಕ್ ಸ್ಥಾಪಿಸಲು ಮೀಸಲಿರಿಸಬೇಕು ಎಂದರು.
ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿ ಅಭಿವೃದ್ಧಿಪಡಿಸಿರುವ 2 ಮಹಿಳಾ ಪಾರ್ಕ್‌ನ ಉದ್ದಿಮೆಗಳಿಗೆ ರಿಯಾಯಿತಿ ದರದಲ್ಲಿ ನಿವೇಶನ ಹಂಚಿಕೆಗೆ ಪರಿಗಣಿಸಬೇಕು. ಕೈಗಾರಿಕಾ ಪ್ರದೇಶದಲ್ಲಿ ಸರ್ಕಾರಿ ಹಾಗೂ ನಾಲಾ ಭೂಮಿಯನ್ನು ಕೆ.ಐ.ಎ.ಡಿ.ಬಿ.ಗೆ ಹಸ್ತಾಂತರಿಸಬೇಕು ಎಂದು ಮನವಿ ಮಾಡಿದರು.

ಮತ್ತೆ ಕಡೆಗಣಿಸಿದ್ರಾ ಕಲ್ಯಾಣ ಕರ್ನಾಟಕ?: ಈ ಭಾಗಕ್ಕೆ ಹರಿದು ಬರಲಿಲ್ಲ ಬಂಡವಾಳ

ಸಭೆಯಲ್ಲಿ ಶಾಸಕರಾದ ಜಿ.ಟಿ.ದೇವೇಗೌಡ, ಎಲ್‌.ನಾಗೇಂದ್ರ, ಕೆ.ಐ.ಎ.ಡಿ.ಬಿ. ಸಿ.ಇ.ಒ. ಬಸವರಾಜೇಂದ್ರ, ಮಾಜಿ ಶಾಸಕರಾದ ಕೋಟೆ ಶಿವಣ್ಣ, ಮೈಸೂರು ಕೈಗಾರಿಕೆಗಳ ಸಂಘದ ಕಾರ್ಯದರ್ಶಿ ಸುರೇಶ… ಕುರ್ಮಾ ಜೈನ…, ಕಡಕೊಳ ಕೈಗಾರಿಕಾ ಸಂಘದ ಅಧ್ಯಕ್ಷರಾದ ರಾಮಕೃಷ್ಣೇಗೌಡ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಲಿಂಗರಾಜಪ್ಪ ಮತ್ತಿತರರು ಉಪಸ್ಥಿತರಿದ್ದರು. ಎಫ್ ಕೆ.ಸಿ.ಸಿ.ಐ. ಅಧ್ಯಕ್ಷರಾದ ಸುಧಾರ್ಕ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಕಾಯ್ದೆಗೆ ತಿದ್ದುಪಡಿ ತನ್ನಿ:

ಟ್ರಕ್‌ ಟರ್ಮಿನಲ್ ಸ್ಥಾಪನೆಗೆ 10 ಎಕರೆ ನಿವೇಶನ ಮೀಸರಿಸಬೇಕು. ಕೈಗಾರಿಕಾ ಪ್ರದೇಶ ತಾಜ್ಯ ಶೇಖರಣೆ, ಸಂಸ್ಕರಣೆ ಹಾಗೂ ವಿಲೇವಾರಿ ಘಟಕ ಸ್ಥಾಪಿಸಬೇಕು. ಕೈಗಾರಿಕಾ ಪ್ರದೇಶಗಳಿಗೆ ಹೊಂದಿಕೊಂಡಂತೆ ಇರುವ ಭೂಮಿಯನ್ನು ವಸತಿ ಬಡಾವಣೆ ಹಾಗೂ ವಸತಿ ಸಮುಚ್ಛಯಗಳ ನಿರ್ಮಾಣಗಳಿಗೆ ಅನುಮೋದನೆ ನೀಡುವ ಸಂದರ್ಭಗಳಲ್ಲಿ ಕಡ್ಡಾಯವಾಗಿ ಬರ್ಫ ಜೋನ್‌ ಅಂತರ ಕಾಯ್ದುಕೊಳ್ಳಲು ನಗರಾಭಿವೃದ್ಧಿ ಕಾಯಿದೆ ತಿದ್ದುಪಡಿ ತರಲು ವಾಸು ಅವರು ಕೋರಿದರು.

#NewsIn100Seconds ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್‌

"

PREV
click me!

Recommended Stories

ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ
ಅಡಕೆ ಬೆಳೆಗಾರರ ನೆರವಿಗೆ ಕೇಂದ್ರ ತುರ್ತಾಗಿ ಮಧ್ಯಪ್ರವೇಶಿಸಲಿ: ಸಂಸದ ಬಿ.ವೈ.ರಾಘವೇಂದ್ರ