ಹುಬ್ಬಳ್ಳಿ, ಧಾರವಾಡ, ಬೆಳಗಾವಿ ತ್ರಿವಳಿ ನಗರಗಳ ಅಭವೃದ್ಧಿಗೆ ಬದ್ಧ: ಶೆಟ್ಟರ್‌

Kannadaprabha News   | Asianet News
Published : Feb 17, 2020, 10:50 AM IST
ಹುಬ್ಬಳ್ಳಿ, ಧಾರವಾಡ, ಬೆಳಗಾವಿ ತ್ರಿವಳಿ ನಗರಗಳ ಅಭವೃದ್ಧಿಗೆ ಬದ್ಧ: ಶೆಟ್ಟರ್‌

ಸಾರಾಂಶ

ಹೂಡಿಕೆದಾರರ ಸಮಾವೇಶ ಮಾಡಿದ್ದಕ್ಕೆ ಪ್ರಶಂಸೆ ಮಾಡಬೇಕು: ಶೆಟ್ಟರ್| ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ 2020| 2 ವರ್ಷಗಳಲ್ಲಿ ಬೆಳಗಾವಿ, ಕಿತ್ತೂರು, ಧಾರವಾಡ ರೈಲು ಮಾರ್ಗಕ್ಕೆ ಚಾಲನೆ| ಹುಬ್ಬಳ್ಳಿ-ಧಾರವಾಡ ಅವಳಿ ನಗರದಂತಿದ್ದರು ಬೆಳಗಾವಿ ಸೇರಿ ತ್ರಿವಳಿ ನಗರವಾಗಲಿದೆ|

ಬೆಳಗಾವಿ(ಫೆ.17): ಉತ್ತರ ಕರ್ನಾಟಕದಲ್ಲಿ ಹೂಡಿಕೆದಾರರ ಸಮಾವೇಶ ಮಾಡೋ ಧೈರ್ಯ ಯಾರೂ ಮಾಡಿರಲಿಲ್ಲ. ಆ ಕೆಲಸವನ್ನು ನಾನು ಮಾಡಿದ್ದೇನೆ, ಅದನ್ನು ಪ್ರಶಂಸೆ ಮಾಡಬೇಕು ಎಂದು ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ತಿಳಿಸಿದ್ದಾರೆ. 

ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶವೇನೋ ಆಯ್ತು: ಇಲ್ಲಿಗೆ ಕೈಗಾರಿಕೆಗಳು ಬರ್ತಾವಾ?

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, 72 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ಹಣ ಹರಿದು ಬರುತ್ತಿದೆ. 51 ಕಂಪನಿಗಳು ಬಂಡವಾಳ ಹೂಡಲು ಸಿದ್ಧವಾಗಿವೆ. ಉತ್ತರ ಕರ್ನಾಟಕ ಭಾಗದಲ್ಲಿ ಮೊದಲ ಬಾರಿ ಈ ಸಮಾವೇಶ ಮಾಡಿದ್ದು, ಕೇವಲ ಹುಬ್ಬಳ್ಳಿ-ಧಾರವಾಡ ನಗರಕ್ಕೆ ಸೀಮಿತ ಅಲ್ಲ. ಬೆಳಗಾವಿ ಜಿಲ್ಲೆಯಲ್ಲಿ 10, ಯಾದಗಿರಿ ಜಿಲ್ಲೆಯ ಕಡೇಚೂರಿನಲ್ಲಿ 11 ಕಂಪನಿಗಳು ಹಾಗೂ ವಿಜಯಪುರ, ಹಾವೇರಿ, ದಾವಣಗೆರೆಯಲ್ಲಿ ಹೂಡಿಕೆ ಮಾಡಲು ಮುಂದೆ ಬಂದಿದ್ದಾರೆ ಎಂದು ತಿಳಿಸಿದರು.

ಇನ್ವೆಸ್ಟ್‌ ಕರ್ನಾಟಕ-ಹುಬ್ಬಳ್ಳಿ: ಬರೋಬ್ಬರಿ 72000 ಕೋಟಿ ರೂ ಹೂಡಿಕೆ!

ಹೂಡಿಕೆದಾರರ ಸಮ್ಮೇಳನದಲ್ಲಿ ಕೇವಲ ಹುಬ್ಬಳ್ಳಿ, ಧಾರವಾಡಕ್ಕೆ ಸಿಮೀತವಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬೆಂಗಳೂರು ಹೊರತುಪಡಿಸಿ ಟಯರ್‌ 2, ಟಯರ್‌ 3 ಸಿಟಿಗಳಿಗೂ ಕಂಪನಿಗಳು ಬರಬೇಕು. ಸಚಿವನಾಗಿ ಐದು ತಿಂಗಳಲ್ಲಿ ಈ ಸಾಧನೆ ಮಾಡಿದ್ದೇನೆ. ಉತ್ತರ ಕರ್ನಾಟಕ ಜನ ಅಪ್ರಿಶಿಯೇಟ್‌ ಮಾಡಬೇಕು, ಡಿಸ್ಕರೇಜ್‌ ಮಾಡಬಾರದು ಎಂದರು.

ತ್ರಿವಳಿ ನಗರ:

2 ವರ್ಷಗಳಲ್ಲಿ ಬೆಳಗಾವಿ, ಕಿತ್ತೂರು, ಧಾರವಾಡ ರೈಲು ಮಾರ್ಗಕ್ಕೆ ಚಾಲನೆ ಸಿಗಲಿದೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರದಂತಿದ್ದರು ಬೆಳಗಾವಿ ಸೇರಿ ತ್ರಿವಳಿ ನಗರವಾಗಲಿದೆ. ತ್ರಿವಳಿ ನಗರಗಳ ಅಭಿವೃದ್ಧಿಗೆ ಹೆಚ್ಚಿನ ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ. 

ಇನ್ವೆಸ್ಟ್‌ ಕರ್ನಾಟಕ: 72000 ಕೋಟಿ ರೂ ಹೂಡಿಕೆ ಒಪ್ಪಂದ!

PREV
click me!

Recommended Stories

ದರ್ಶನ್ ಗ್ಯಾಂಗ್‌ನಿಂದ ಕೊಲೆಗೀಡಾದ ರೇಣುಕಾಸ್ವಾಮಿಗೆ ಸತ್ತಮೇಲೂ ನೆಮ್ಮದಿಯಿಲ್ಲ! ಸಮಾಧಿ ಧ್ವಂಸಗೈದ ಡೆವಿಲ್ ಗ್ಯಾಂಗ್‌!
ಧರ್ಮಸ್ಥಳ ನೂರಾರು ಶವ ಹೂಳಿದ ಕೇಸ್: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು - SIT ವರದಿಯಲ್ಲಿ ಒಬ್ಬರಿಗೆ ಕ್ಲೀನ್ ಚಿಟ್!