31 ಗೋವುಗಳ ದತ್ತು ಪಡೆದ ಸಚಿವ ಸುಧಾಕರ್‌

By Kannadaprabha News  |  First Published Nov 30, 2022, 1:46 PM IST

ಜಾನುವಾರುಗಳು ಕಸಾಯಿಖಾನೆಗಳಿಗೆ ಹೋಗುವುದನ್ನು ತಡೆಗಟ್ಟಿ ಅವುಗಳ ರಕ್ಷಣೆ ಮಾಡುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿ ಗೋ ಶಾಲೆಗಳನ್ನು ನಿರ್ಮಾಣ ಮಾಡಿದ ಸರ್ಕಾರ 


ದೊಡ್ಡಬಳ್ಳಾಪುರ(ನ.30):  ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿ ನಂತರ ಜಾನುವಾರುಗಳು ಕಸಾಯಿಖಾನೆಗಳಿಗೆ ಹೋಗುವುದನ್ನು ತಡೆಗಟ್ಟಿ ಅವುಗಳ ರಕ್ಷಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಗೋ ಶಾಲೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್‌ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕೊಡಿಗೆಯಲ್ಲಿ ಜಿಲ್ಲಾ ಸರ್ಕಾರಿ ಗೋಶಾಲೆ ಲೋಕಾರ್ಪಣೆಗೊಳಿಸಿ, ಗೋಪೂಜೆ ಸಲ್ಲಿಸಿ ಮಾತನಾಡಿದರು.

31 ಗೋವು ದತ್ತು ಪಡೆದ ಸಚಿವ ಸುಧಾಕರ್‌: 

Tap to resize

Latest Videos

ಇದೇ ವೇಳೆ ಸಚಿವ ಪ್ರಭು ಚವ್ಹಾಣ್‌ ಅವರ ಮನವಿಗೆ ಸ್ಪಂದಿಸಿದ ಸಚಿವ ಡಾ.ಸುಧಾಕರ್‌ ‘ನಾನು ಕೂಡ 31 ಗೋವು ದತ್ತು ಪಡೆಯುತ್ತೇನೆ’ ಎಂದರೆ, ಶಾಸಕ ಡಾ.ಶ್ರೀನಿವಾಸಮೂರ್ತಿ, ಮಾಜಿ ಶಾಸಕ ನಾಗರಾಜು ಅವರು ತಲಾ 5 ಗೋವುಗಳ ದತ್ತು ಪಡೆಯುವ ವಾಗ್ದಾನ ನೀಡಿದರು.

ಜಿಲ್ಲೆಗೊಂದರಂತೆ 31 ಗೋವು ದತ್ತು ಪಡೆದ ಸಚಿವ ಚವ್ಹಾಣ್‌

ಅಕ್ರಮ ಕಸಾಯಿಖಾನೆಗಳನ್ನು ಮುಚ್ಚುವ ಉದ್ದೇಶದಿಂದಲೇ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದ ನಂತರದಲ್ಲಿ ಗೋವುಗಳ ರಕ್ಷಣೆಗಾಗಿ ಜಿಲ್ಲಾಮಟ್ಟದಲ್ಲಿ ಗೋ ಶಾಲೆಗಳ ಸ್ಥಾಪನೆಗೆ ಮುಂದಾಗಿದ್ದರ ಫಲವೇ ಇಂದು ಲೋಕಾರ್ಪಣೆಯಾಗಿರುವ ಗೋಶಾಲೆಯಾಗಿದೆ. ಮೂಕಪ್ರಾಣಿಗಳ ರಕ್ಷಣೆಯಾಗಬೇಕು ಎಂಬುದೇ ಸರ್ಕಾರದ ಸಂಕಲ್ಪ ಎಂದರು.

31 ಪುಣ್ಯಕೋಟಿಗಳ ದತ್ತು ಪಡೆದ ಅಭಿನಯ ಚಕ್ರವರ್ತಿ!

ಬೆಂಗಳೂರು: ನನ್ನನ್ನು ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯನ್ನಾಗಿ ನೇಮಕ ಮಾಡಿ ಸರ್ಕಾರ ನನ್ನ ಜವಾಬ್ದಾರಿ ಹೆಚ್ಚಿಸಿದೆ. ನನ್ನನ್ನು ನೇಮಕ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಪ್ರಭು ಚವ್ಹಾಣ್ ಅವರಿಗೆ ಕೃತಜ್ಞತೆ ತಿಳಿಸುತ್ತೇನೆ. ಸಾರ್ವಜನಿಕರು, ಚಿತ್ರರಂಗದ ಕಲಾವಿದರು, ಸಾರ್ವಜನಿಕ ಸಂಘ ಸಂಸ್ಥೆಗಳು ಗೋವುಗಳನ್ನು ದತ್ತು ಪಡೆಯಬೇಕು ಎಂದು ನಟ ಸುದೀಪ್ ಮನವಿ ಮಾಡಿದರು. 

ನ.14ರಂದು ತಮ್ಮ ನಿವಾಸದಲ್ಲಿ ಗೋಪೂಜೆ ನೇರವೇರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗೋಸಂಕುಲ ಸಂರಕ್ಷಣೆಯಲ್ಲಿ ಮಹತ್ವದ ಕೆಲಸ ಮಾಡುತ್ತಿದೆ ಎಂದರು. ಸಿಎಂ ತಮ್ಮ ಹುಟ್ಟುಹಬ್ಬದಂದು 11 ಗೋವು ದತ್ತು ಪಡೆದು, ತಮ್ಮ ಕನಸಿನ ಕೂಸಾದ ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ತಂದರು. ನಾನು ಕೂಡ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆದಿದ್ದೇನೆ ಎಂದು ಸಚಿವ ಪ್ರಭು ಚವ್ಹಾಣ್ ಅವರು ವಿವರಿಸಿದಾಗ ನಾನು ಕೂಡ ನಿಮ್ಮಂತೆ ದತ್ತು ಪಡೆದಿದ್ದೇನೆ  ಎಂದು ಸುದೀಪ್ ಅವರು ಸಚಿವರಿಗೆ ತಿಳಿಸಿದ್ದರು.
 

click me!