ಮೈಸೂರು: 'ಕೊರೋನಾ ವಾರಿಯರ್‌ ಆತ್ಮಹತ್ಯೆ, ನಾಗೇಂದ್ರ ಕುಟುಂಬಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ'

Suvarna News   | Asianet News
Published : Aug 20, 2020, 04:20 PM ISTUpdated : Aug 20, 2020, 04:23 PM IST
ಮೈಸೂರು: 'ಕೊರೋನಾ ವಾರಿಯರ್‌ ಆತ್ಮಹತ್ಯೆ, ನಾಗೇಂದ್ರ ಕುಟುಂಬಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ'

ಸಾರಾಂಶ

ನಾಗೇಂದ್ರ ಸಾವಿನ ನೋವು ಒಬ್ಬ ವೈದ್ಯನಾಗಿ ನನಗೂ  ಅರ್ಥವಾಗುತ್ತದೆ. ಶಾಂತಿ ಕಾಪಾಡಿ. ಕೋವಿಡ್‌ ಸಂಕಷ್ಟ ಕಾಲದಲ್ಲಿ ಸಂಯಮದಿಂದ ವರ್ತಿಸಿ. ನಾಗೇಂದ್ರ ಜನಪರ ಅಧಿಕಾರಿ, ಸಹೃದಯಿ, ಅತ್ಯಂತ ಸೂಕ್ಷ್ಮ ಸ್ವಭಾವದವರು ಎಂದು ತಿಳಿಯಿತು. ಅವರ ಸಾವಿನ ತನಿಖೆಗೆ ಆದೇಶಿಸಿದ್ದೇನೆ. ಅವರ ಕುಟುಂಬಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ತಿಳಿಸಿದ ಸುಧಾಕರ್‌

ಮೈಸೂರು(ಆ.20): ಜಿಲ್ಲೆಯ ನಂಜನಗೂಡು ತಾಲೂಕಿನ ಕೊರೋನಾ ವಾರಿಯರ್‌ ಆರೋಗ್ಯಾಧಿಕಾರಿ ನಾಗೇಂದ್ರ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಾಗೇಂದ್ರ ಅವರ ಸಾವಿಗೆ ಪ್ರತಿಕ್ರಿಯೆ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಸುದ್ದಿ ತಿಳಿಯಿತು. ಅವರ ಸಾವು ನನಗೆ ಅತ್ಯಂತ ಬೇಸರ ತಂದಿದೆ. ಪ್ರೀತಿಯ ಕೊರೊನಾ ವಾರಿಯರ್ಸ್‌ಗಳಿಗೆ ನನ್ನದೊಂದು ಮನವಿ. ನಿಮಗೆ ಎಷ್ಟೇ ಒತ್ತಡಗಳಿದ್ದರೂ ನಿಮ್ಮ ಮೇಲಾಧಿಕಾರಿಗಳ ಜೊತೆ ಹೇಳಿಕೊಳ್ಳಿ. ನಿಮ್ಮ ಕಷ್ಟಗಳಿಗೆ ಸರ್ಕಾರ ಯಾವತ್ತೂ ಜೊತೆಗಿದೆ ಎಂದು ಧೈರ್ಯ ತುಂಬಿದ್ದಾರೆ.

ನಾಗೇಂದ್ರ ಸಾವಿನ ನೋವು ಒಬ್ಬ ವೈದ್ಯನಾಗಿ ನನಗೂ  ಅರ್ಥವಾಗುತ್ತದೆ. ಶಾಂತಿ ಕಾಪಾಡಿ. ಕೋವಿಡ್‌ ಸಂಕಷ್ಟ ಕಾಲದಲ್ಲಿ ಸಂಯಮದಿಂದ ವರ್ತಿಸಿ. ನಾಗೇಂದ್ರ ಜನಪರ ಅಧಿಕಾರಿ, ಸಹೃದಯಿ, ಅತ್ಯಂತ ಸೂಕ್ಷ್ಮ ಸ್ವಭಾವದವರು ಎಂದು ತಿಳಿಯಿತು. ಅವರ ಸಾವಿನ ತನಿಖೆಗೆ ಆದೇಶಿಸಿದ್ದೇನೆ. ಅವರ ಕುಟುಂಬಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

ಮತ್ತೋರ್ವ ಸ್ವಾಮೀಜಿಗೆ ಕೊರೋನಾ ಸೋಂಕು

ನಾಗೇಂದ್ರ ಸಾವಿನ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ  ಎಸ್ ಟಿ  ಸೋಮಶೇಖರ್ ಅವರ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದು  ಮುಂದಿನ ಸೂಕ್ತ ಕ್ರಮಗಳ ಬಗ್ಗೆ ಚರ್ಚೆ ಮಾಡುತ್ತಿದ್ದೀವಿ ಎಂದು ಹೇಳಿದ್ದಾರೆ.  ಕೋವಿಡ್‌ ನಿಯಂತ್ರಿಸುವಲ್ಲಿ ಬಿಡುವಿಲ್ಲದೇ ಹಗಲಿರುಳು ಶ್ರಮಿಸುತ್ತಿರುವ ನಮ್ಮ ಎಲ್ಲಾ ಕೋವಿಡ್‌ ವಾರಿಯರ್ಸ್‌ಗಳಿಗೆ ನಾನು ಈ ಮೂಲಕ ತಿಳಿಸುವುದೇನಂದರೆ ಅಧಿಕ ಕೆಲಸದಿಂದ ನೀವು ಒತ್ತಡ, ಮಾನಸಿಕ ಖಿನ್ನತೆಗೆ ಒಳಗಾಗುತ್ತಿರುವು ನಮ್ಮ ಸರ್ಕಾರದ ಗಮನಕ್ಕೆ ಬಂದಿದೆ. ಸರ್ಕಾರದ ಪರವಾಗಿ ಭರವಸೆ ಕೊಡುತ್ತಿದ್ದೇನೆ ಎಂದು ಧೈರ್ಯ ತುಂಬಿದ್ದಾರೆ.

ರಾಜ್ಯದ ಎಲ್ಲಾ ಭಾಗದ ವೈದ್ಯರುಗಳಿಗೆ, ಕೊರೊನಾ ಯೋಧರಿಗೆ ನೈತಿಕ  ಸ್ಫೂರ್ತಿಯನ್ನು ಮುಂದಿನ ದಿನಗಳಲ್ಲಿ ನಿಮ್ಮ ಒತ್ತಡಗಳನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಬಿಡುವಿಲ್ಲದೇ ಕೆಲಸ ಮಾಡುತ್ತಿರುವ ನಿಮಗೆ ರಜೆ, ಒತ್ತಡ ಸಡಿಲ ಮಾಡಲು ಎಲ್ಲಾ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. 

ನಾಗೇಂದ್ರ ಅವರ ಸಾವಿನಲ್ಲಿ ಗೊಂದಲ ಸೃಷ್ಟಿ ಮಾಡುವುದು ಅಮಾನವೀಯವಾಗುತ್ತದೆ. ವೈದ್ಯಕೀಯ ಸಂಘದ ಎಲ್ಲಾ ಆತ್ಮೀಯರಿಗೆ ಮನವಿ ಮಾಡುವುದೇನೆಂದರೆ ನಾಗೇಂದ್ರ ಅವರ ಅಂತ್ಯ ಸಂಸ್ಕಾರವನ್ನು ನೆರವೇರಿಸುವ ಆದ್ಯತೆ ಕೊಡಿ. ಅವರ ಕುಟುಂಬ ವರ್ಗದವರಿಗೆ ಮುಖ್ಯಮಂತ್ರಿ ಬಿಎಸ್‌ವೈ ಜೊತೆ ಚರ್ಚೆಸಿ ನ್ಯಾಯ ಕೊಡಿಸುತ್ತೇವೆ. ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು ಅವರ ಪ್ರಾಣವನ್ನು ಹಿಂದಿರುಗಿ ತರಲು ಸಾಧ್ಯವಿಲ್ಲವೆಂದು ಗೊತ್ತಿದೆ. ಆದರೆ ಅವರ ಕುಟುಂಬದ ಸದಸ್ಯರಿಗೆ ಶಾಶ್ವತವಾದ ಪರಿಹಾರವನ್ನು ಸರ್ಕಾರ ಖಂಡಿತವಾಗಿಯೂ ಮಾಡುತ್ತದೆ. ಎಲ್ಲಾ ಕೋವಿಡ್‌ ಯೋಧರ ಜೊತೆ ಸರ್ಕಾರ ಇದೆ ಎಂದು ಹೇಳಲು ಇಚ್ಛಿಸುತ್ತೇನೆ ಎಂದು ಹೇಳಿದ್ದಾರೆ.

ಯಾರೂ ಕೂಡಾ ನಾಗೇಂದ್ರ ಅವರ ಸಾವನ್ನು ಅನ್ಯ ಕಾರಣಗಳಿಗೆ ದುರ್ಬಳಕೆ ಮಾಡಬಾರದು ಎಂದು ಕಳಕಳಿಯ ಮನವಿ ಮಾಡುತ್ತಿದ್ದೇನೆ. ಈಗಾಗಲೇ ವೈದ್ಯಾಧಿಕಾರಿಗಳ ಸಂಘದ ಪದಾಧಿಕಾರಿಗಳ ಜೊತೆ ಸಭೆ ಕರೆದಿದ್ದೇನೆ. ಕೋವಿಡ್‌ ಯೋಧರ ನೆರವಿಗೆ ನಮ್ಮ ಸರ್ಕಾರ ಜೊತೆಗಿದೆ. ಇನ್ಮುಂದೆ ಇಂತಹ ಘಟನೆಗಳು ನಡೆಯದಂತೆ ಮತ್ತಷ್ಟು ಸೂಕ್ತ ಕ್ರಮಗಳು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. 

PREV
click me!

Recommended Stories

ಸದ್ದಿಲ್ಲದೇ ಓಪನ್ ಆದ 'ಬಿಗ್ ಬಾಸ್' ನಡೆಯುವ ಜಾಲಿವುಡ್ ಸ್ಟುಡಿಯೋ! KSPCB ಅನುಮತಿ
ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!