ಸಚಿವ ಡಾ.ಕೆ. ಸುಧಾಕರ್‌ ಕೆಂಡಾಮಂಡಲ

By Kannadaprabha NewsFirst Published Nov 12, 2020, 11:36 AM IST
Highlights

ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಸುಧಾಕರ್ ಕೆಮಡಾಮಂಡಲರಾದರು.. ಕಾರಣ

ಮೈಸೂರು (ನ.12):  ಮೈಸೂರು ಮೆಡಿಕಲ್‌ ಕಾಲೇಜು ಆಡಳಿತದಲ್ಲಿ ಕಂಡುಬಂದ ನ್ಯೂನತೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕಕ್‌ ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಿದರು.

ಹೊರಗುತ್ತಿಗೆ ವಿಷಯದಲ್ಲಿ ಲೋಪ ಸರಿಪಡಿಸಲು ಮೆಡಿಕಲ್‌ ಕಾಲೇಜು, ಕೆ.ಆರ್‌. ಆಸ್ಪತ್ರೆ, ಚೆಲುವಾಂಬ ಮತ್ತು ಪಿಕೆ ಸ್ಯಾನಿಟೋರಿಯಂಗಳಿಗೆ ಒಂದೇ ಗುತ್ತಿಗೆ ನೀಡಬೇಕು, ಪ್ರತ್ಯೇಕವಾಗಿ ನೀಡಿರುವುದನ್ನು ತಕ್ಷಣ ರದ್ದುಮಾಡಬೇಕು. ಗುಣಮಟ್ಟಹಾಗೂ ಪಾರದರ್ಶಕತೆಗೆ ಒತ್ತು ನೀಡಬೇಕು. ಒಂದು ವೇಳೆ ಕಾನೂನಿನ ತೊಡಕು ಎದುರಾದರೆ ಸರ್ಕಾರಕ್ಕೆ ವರದಿ ಸಲ್ಲಿಸಿ ಮಾರ್ಗದರ್ಶನ ಪಡೆದುಕೊಳ್ಳಬೇಕು ಎಂದು ಬುಧವಾರ ಕಾಲೇಜಿಗೆ ಭೇಟಿ ನೀಡಿ ಶೈಕ್ಷಣಿಕ ಹಾಗೂ ಆಡಳಿತದ ಪ್ರಗತಿ ಪರಿಶೀಲನೆ ನಡೆಸಿ ಸೂಚನೆ ನೀಡಿದರು.

ಅವರನ್ನು ಹೊಣೆ ಮಾಡುವುದು ಸರಿಯಲ್ಲ : ಡಿಕೆ ಬ್ರದರ್ಸ್ ಪರವಾಗಿ ಮಾತಾಡಿದ ಸಚಿವ ಸುಧಾಕರ್ .

ಸಂಶೋಧನೆ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಕಟವಾದ ಸಂಶೋಧನಾ ಲೇಖನಗಳ ಮಾಹಿತಿ ನೀಡಲು ಪರದಾಡಿದ ಡೀನ್‌ ನಾಗರಾಜು ಅವರನ್ನು ತರಾಟೆಗೆ ತೆಗೆದುಕೊಂಡರು. ಜವಾಬ್ದಾರಿ ಹುದ್ದೆಯಲ್ಲಿ ಇರುವವರು ಸಮರ್ಥವಾಗಿ ನಿಭಾಯಿಸಲು ಸಾಧ್ಯವಾಗದಿದ್ದರೆ ಆ ಹುದ್ದೆಯಲ್ಲಿ ಇರಬಾರದು. ಇನ್ನು ಮುಂದೆ ಲೋಪಗಳಿಗೆ ಅವಕಾಶ ನೀಡಿದರೆ ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.

ಕಟ್ಟಡ ನಿರ್ವಹಣೆಗೆ ಇರುವ ಹಣದ ಬಳಕೆ ಮಾಡದೇ ಮೂರು ವರ್ಷದಿಂದ ಕಾಲಾಹರಣ ಮಾಡುತ್ತಿರುವುದನ್ನು ಕಂಡು ಕೆಂಡಾಮಂಡಲರಾದ ಸಚಿವರು, ತಕ್ಷಣ ಆದ್ಯತೆ ಮೇರೆಗೆ ಆಗಬೇಕಿರುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸೂಚನೆ ನೀಡಿದರು. ಹಾಸ್ಟೆಲ್‌ ಗಳ ದುರಸ್ತಿ ಮತ್ತು ಉಪಕರಣಗಳ ಖರೀದಿ ವಿಷಯದಲ್ಲಿ ಸರಕಾರದ ನಿಯಮಗಳ ಅಡಿಯಲ್ಲಿ ಟೆಂರ್ಡ ಕರೆಯಬೇಕು. ನಿಗದಿತ ಅರ್ಹತೆ ಹೊಂದಿರುವ ಏಜೆನ್ಸಿಗಳ ಮೂಲಕವೇ ಖರೀದಿ ಪ್ರಕ್ರಿಯೆ ನಡೆಯುವಂತೆ ಎಚ್ಚರವಹಿಸಬೇಕು. ಸಂಬಂಧಿಸಿದ ಪ್ರಕ್ರಿಯೆಗಳ ಮಾಹಿತಿಯನ್ನು ಡಿಎಂಇ ಅವರಿಗೆ ನೀಡುವಂತೆ ತಾಕೀತು ಮಾಡಿದರು.

ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕ್ಯಾನ್ಸರ್‌ ಚಿಕಿತ್ಸೆ ಕೇಂದ್ರವನ್ನು ಪಿಪಿಪಿ ಮಾದರಿಯಲ್ಲಿ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ನಾಗೇಂದ್ರ ಅವರ ಮನವಿಗೆ ಭರವಸೆ ನೀಡಿದರು. ಮುಂದಿನ ವರ್ಷಕ್ಕೆ ನೂರು ವರ್ಷ ಪೂರೈಸುವ ಕೆಆರ್‌ ಆಸ್ಪತ್ರೆ ಕಟ್ಟಡಗಳ ನವೀಕರಣ ಮತ್ತು ದುರಸ್ತಿ ಕಾರ್ಯಕ್ಕೆ  52 ಕೋಟಿ ಪ್ರಸ್ತಾವನೆಗೆ ಅನುಮೋದನೆ ನೀಡುವುದಾಗಿ ತಕ್ಷಣ ಅದನ್ನು ಕಳುಹಿಸಿಕೊಡುವಂತೆ ಸೂಚಿಸಿದರು.

ಇಲಾಖೆ ಕಾರ್ಯದರ್ಶಿ ಮತ್ತು ಡಿಎಂಇ ಅವರು ನಿಯಮಿತವಾಗಿ ಭೇಟಿ ನೀಡಿ ಪ್ರಗತಿ ಪರಿಶೀಲಿಸಬೇಕು ಮತ್ತು ಅಗತ್ಯ ಇರುವ ಕಡೆ ಸ್ಥಳ ಪರಿಶೀಲನೆ ನಡೆಸಬೇಕು. ಕಾಟಾಚಾರಕ್ಕೆ ಸಭೆ ನಡೆಸಿದರೆ ಯಾವುದೇ ಪ್ರಯೋಜನ ಆಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಮೈಸೂರು, ಬೆಂಗಳೂರು, ಹುಬ್ಬಳ್ಳಿ ಮತ್ತು ಬಳ್ಳಾರಿ ಮೆಡಿಕಲ್‌ ಕಾಲೇಜುಗಳು ರಾಜ್ತದ ಹಳೆಯ ಮತ್ತು ಪ್ರತಿಷ್ಠಿತ ಸಂಸ್ಥೆಗಳಾಗಿದ್ದು ಇವುಗಳನ್ನು ಮಾದರಿ ಸಂಸ್ಥೆಗಳಾಗಿ ಅಭಿವೃದ್ಧಿ ಪಡಿಸಬೇಕು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯ ನಿರ್ವಹಿಸಬೇಕು ಎಂದರು.

ಟ್ರಾಮಾ ಕೇರ್‌ ಸೆಂಟರ್‌ ಕಾಮಗಾರಿ ವಿಂಬಕ್ಕೆ ಕಾರಣಗಳನ್ನು ಕೇಳಿ ತ್ವರಿತವಾಗಿ ಪೂರ್ಣ æೂಳಿಸಲು ಸೂಚನೆ ನೀಡಿದರು. ಸಿಎಸ್‌ಆರ್‌ ಮೂಲಕ ಹೆಚ್ಚಿನ ನೆರವು ಪಡೆಯಲು ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸಬೇಕು ಎಂದರು. ಚಾಮರಾಜ ಕ್ಷೇತ್ರದ ಶಾಸಕ ಎಲ್‌. ನಾಗೇಂದ್ರ ಮೊದಲಾದವರು ಇದ್ದರು.

click me!