ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯುವುದು ರಾಜಕಾರಣಕ್ಕಾಗಿ ಅಲ್ಲ. ಚುನಾವಣೆ ನಡೆಯುವುದು ಭಯೋತ್ಪಾದಕರನ್ನು ವಿರೋಧಿಸುವ ಹಾಗೂ ಬೆಂಬಲಿಸುವರ ವಿರುದ್ಧ ಎಂದು ಹೇಳುವ ಮೂಲಕ ಪರೋಕ್ಷವಾಗಿ ಕಾಂಗ್ರೆಸ್ ವಿರುದ್ದ ಹರಿಹಾಯ್ದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ
ಚಿಕ್ಕಬಳ್ಳಾಪುರ(ಸೆ.29): ಬರುವ ಅಕ್ಟೋಬರ್ 30 ರಂದು ಕಲಬುರಗಿಯಲ್ಲಿ ಬಿಜೆಪಿ ಒಬಿಸಿ ಮೋರ್ಚಾ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶ, ರಾಜ್ಯದ ರಾಜಕಾರಣಕ್ಕೆ ಹೊಸ ದಿಕ್ಕು ನೀಡಲಿದೆಯೆಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ನಗರದ ಕಂದವಾರ ಬಾಗಿಲಿಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಬುಧವಾರ ರಾಜ್ಯ ಮಟ್ಟದ ಒಬಿಸಿ ಸಮಾವೇಶದ ಪೂರ್ವಭಾವಿಯಾಗಿ ಹಮ್ಮಿಕೊಂಡಿದ್ದ ಜಿಲ್ಲಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಹಿಂದುಳಿದ ವರ್ಗಗಳು ಶಕ್ತಿ ತುಂಬಬೇಕೆಂದರು.
ಭಯೋತ್ವಾದನೆ ಬೆಂಬಲಿಗರ ವಿರುದ್ಧ ಸಮರ
ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯುವುದು ರಾಜಕಾರಣಕ್ಕಾಗಿ ಅಲ್ಲ. ಚುನಾವಣೆ ನಡೆಯುವುದು ಭಯೋತ್ಪಾದಕರನ್ನು ವಿರೋಧಿಸುವ ಹಾಗೂ ಬೆಂಬಲಿಸುವರ ವಿರುದ್ಧ ಎಂದು ಹೇಳುವ ಮೂಲಕ ಪರೋಕ್ಷವಾಗಿ ಕಾಂಗ್ರೆಸ್ ವಿರುದ್ದ ಹರಿಹಾಯ್ದರು. ರಾಜ್ಯದಲ್ಲಿ ಕೂಡ ಬಿಜೆಪಿ ಸರ್ಕಾರ ಭಯೋತ್ಪಾದನೆ ಉಂಟು ಮಾಡುವ ಶಕ್ತಿಗಳನ್ನು ಮಟ್ಟಹಾಕಲು ಸಮರ್ಥವಾಗಿದೆ. ಇದಕ್ಕಾಗಿ ಹಿಂದುಳಿದ ವರ್ಗಗಳು ಎದ್ದು ನಿಲ್ಲಬೇಕು. ಅ.30 ರಂದು ನಡೆಯುವ ಸಮಾವೇಶ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶ ರಾಜ್ಯದ ರಾಜಕಾರಣದ ದಿಕ್ಕು ಬದಲಾವಣೆ ಮಾಡಲಿದೆ. ಕೇಂದ್ರ, ರಾಜ್ಯ ಸರ್ಕಾರಗಳಿಗೆ ಹೊಸ ಶಕ್ತಿ, ವಿಶ್ವಾಸವನ್ನು ಮೂಡಿಸಲಿದೆ ಎಂದು ಸಚಿವ ಪೂಜಾರಿ ಹೇಳಿದರು.
ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್‌ಪಾಸ್ ಸೌಲಭ್ಯ
ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ಮಾತನಾಡಿ, ರಾಜ್ಯದ ಹಿಂದುಳಿದ ವರ್ಗಗಳು ಹಲವು ಪ್ರಾದೇಶಿಕ ಪಕ್ಷಗಳೊಂದಿಗೆ ಹರಿದು ಹಂಚಿ ಹೋಗಿವೆ. ಬಿಜೆಪಿ ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬಲು ಬದ್ದವಾಗಿದ್ದು ಕಲಬರುಗಿಯಲ್ಲಿ ನಡೆಯುವ ಸಮಾವೇಶದಲ್ಲಿ ರಾಜ್ಯದ ಹಿಂದುಳಿದ ವರ್ಗಗಳ ಸಾಮೂಹಿಕವಾಗಿ ತಮ್ಮ ಶಕ್ತಿ ಪ್ರದರ್ಶನ ಮಾಡಬೇಕೆಂದರು.
ಅಹಿಂದಕ್ಕೆ ಬಿಜೆಪಿಯಲ್ಲಿ ಭವಿಷ್ಯ
ಅರಣ್ಯ ಅಭಿವೃದ್ದಿ ನಿಗಮದ ಅಧ್ಯಕ್ಷೆ ಹಾಗೂ ನಟಿ ತಾರಾ ಅನುರಾಧ ಮಾತನಾಡಿ, ಕೆಲ ಪಕ್ಷಗಳಿಗೆ ಕೇವಲ ಚುನಾವಣೆ ಬಂದಾಗ ಮಾತ್ರ ಅಹಿಂದ ವರ್ಗಗಳ ನೆನಪು ಬರುತ್ತದೆ ಎಂದು ಕಾಂಗ್ರೆಸ್ ವಿರುದ್ದ ಕಿಡಿಕಾರಿದರು. ಒಬ್ಬ ಟೀ ಮಾರಾರುವ ಸಾಮಾನ್ಯ ವ್ಯಕ್ತಿ ಅದರಲ್ಲು ಒಬಿಸಿ ಸಮುದಾಯದ ನರೇಂದ್ರ ಮೋದಿ ಈ ದೇಶದ ಪ್ರಧಾನಿ ಆಗಿದ್ದು ಬಿಜೆಪಿಯಲ್ಲಿ ಮಾತ್ರ ಸಾಧ್ಯ. ಕಲಬರುಗಿಯಲ್ಲಿ ನಡೆಯುವ ಓಬಿಸಿ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸೇರುವಂತೆ ಮನವಿ ಮಾಡಿದರು.
ವಿಧವಾ ವಿವಾಹ ಹೆಸರಲ್ಲಿ ಹಣ ಗುಳುಂ; ಪೋಟೊ ನೋಡಿ ಅಧಿಕಾರಿಗಳು ಗಾಬರಿ
ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮಾತನಾಡಿ, ಓಬಿಸಿ ಸಮುದಾಯದಲ್ಲಿ ಚೈತನ್ಯ ಬೆಳೆಸದೇ ಚುನಾವಣೆಗಳಿಗೆ ಮಾತ್ರ ಹಿಂದುಳಿದ ವರ್ಗಗಳನ್ನು ಬ್ಯಾಂಕ್ ಮಾಡಿಕೊಂಡಿರುವ ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ಚುನಾವಣೆಗಳಲ್ಲಿ ತಕ್ಕಪಾಠ ಕಲಿಸಬೇಕೆಂದರು.
ಸಮಾವೇಶದಲ್ಲಿ ಸಚಿವ ಮುನಿರತ್ನ, ಸಂಸದ ಪಿ.ಸಿ.ಮೋಹನ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಶಾಸಕಿ ಪೂರ್ಣಿಮಾ ಶ್ರೀನಿವಾಸ್, ವಿಧಾನ ಪರಿಷತ್ತು ಸದಸ್ಯ ಕೇಶವಪ್ರಸಾದ್, ಬಿಜೆಪಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ ಸೇರಿದಂತೆ ಜಿಲ್ಲಾ ಓಬಿಸಿ ಮೋರ್ಚಾ ಪದಾಧಿಕಾರಿಗಳು ಇದ್ದರು.