ಗ್ರಾಮೀಣ ಮತ್ತು ಪಂಚಾಯತ್ ರಾಜ್ ಸಚಿವ ಸಚಿವ ಕೆ ಎಸ್ ಈಶ್ವರಪ್ಪಗೆ ಜೀವ ಬೆದರಿಕೆ ಕರೆ ಮಾಡಲಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಸಂಬಂಧ ಮಾತನಾಡದಂತೆ ತಾಕೀತು ಮಾಡಲಾಗಿದೆ.
ಶಿವಮೊಗ್ಗ [ಜ.04]: ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಜೀವ ಬೆದರಿಕೆ ಕರೆ ಬಂದಿದ್ದು, ಈ ಸಂಬಂಧ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಚೆನ್ನೈ ನಿಂದ ಅಪರಿಚಿತ ವ್ಯಕ್ತಿಯೋರ್ವ ಈಶ್ವರಪ್ಪನವರ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಆರಂಭದಲ್ಲಿ ವಿಮೆ ಕುರಿತು ಮಾತನಾಡಿದ್ದಾನೆ. ಆ ಬಳಿಕ ಪೌರತ್ವ ತಿದ್ದುಪಡಿ ಕಾಯ್ದೆ ಸಂಬಂಧ ಮಾತನಾಡದಂತೆ ತಾಕೀತು ಮಾಡಿದ್ದಾನೆ. ಇದನ್ನು ಉಲ್ಲಂಘಿಸಿದಲ್ಲಿ ಜೀವ ತೆಗೆಯುವುದಾಗಿ ಬೆದರಿಕೆ ಒಡ್ಡಿದ ವ್ಯಕ್ತಿ ಹಿಂದಿಯಲ್ಲಿ ಮಾತನಾಡಿದ್ದಾಗಿ ಈಶ್ವರಪ್ಪನವರ ಆಪ್ತರು ತಿಳಿಸಿದ್ದಾರೆ.
ಮೋದಿ ಭಾರತದ ಪ್ರಧಾನಿಯೋ ಪಾಕ್ ಪ್ರಧಾನಿಯೋ?'...
ಈ ವಿಷಯವನ್ನು ಈಶ್ವರಪ್ಪನವರ ಆಪ್ತ ಸಹಾಯಕ ಪೊಲೀಸರಿಗೆ ತಿಳಿಸಿದ್ದು, ಸಚಿವರಿಗೆ ವಿಶೇಷ ಭದ್ರತೆ ಒದಗಿಸಲಾಗಿದೆ. ಪೊಲೀಸರು ಈ ಸಂಬಂಧ ತನಿಖೆ ಆರಂಭಿಸಿದ್ದಾರೆ.
ಈ ಹಿಂದೆಯೂ ಕೂಡ ಅನೇಕ ಬಾರಿ ಸಚಿವ ಈಶ್ವರಪ್ಪ ಅವರಿಗೆ ಬೆದರಿಕೆ ಕರೆ ಮಾಡಲಾಗಿತ್ತು. ಅಲ್ಲದೇ ಜೀವ ಬೆದರಿಕೆ ಒಡ್ಡಲಾಗಿತ್ತು. ಇದೀಗ ಮತ್ತೊಮ್ಮೆ ಅವರಿಗೆ ಕರೆ ಮಾಡಿ ಪ್ರಾಣ ಬೆದರಿಕೆ ಹಾಕಲಾಗಿದೆ.