ಅಪಘಾತವಾಗಿ ರಕ್ತದ ಮಡುವಿನಲ್ಲಿ ಬಿದ್ದವರನ್ನು ಆಸ್ಪತ್ರೆಗೆ ಸೇರಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್: ಮಾನವೀಯತೆಗೆ ಸಾಕ್ಷಿ

By Sathish Kumar KHFirst Published Aug 28, 2023, 3:50 PM IST
Highlights

ಬೈಕ್ ಹಾಗೂ‌ ಆಟೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಇಬ್ಬರು ಯುವಕರ ನೆರವಿಗೆ ಧಾವಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾನವೀಯತೆಯ ಮೆರೆದಿದ್ದಾರೆ. 

ಚಾಮರಾಜನಗರ (ಆ.28):  ಬೈಕ್ ಹಾಗೂ‌ ಆಟೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಇಬ್ಬರು ಯುವಕರ ನೆರವಿಗೆ ಧಾವಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾನವೀಯತೆಯ ಮೆರೆದಿದ್ದಾರೆ. 

ಗೃಹಲಕ್ಷ್ಮಿ ಯೋಜನೆ ಚಾಲಾನಾ ಸಮಾರಂಭದ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ಬಳಿಕ ಸಚಿವರು ಮಂಡ್ಯಕ್ಕೆ ತೆರಳುತ್ತಿದ್ದರು. ನಗರದ ಹೊರವಲಯದ  ಸಂತೇಮರಳ್ಳಿ ಮುಖ್ಯ ರಸ್ತೆಯ ದೊಡ್ಡಪೇಟೆ ಕ್ರಾಸ್ ಬಳಿ  ಬೈಕ್ ನಲ್ಲಿ ಚಲಿಸುತ್ತಿದ್ದ ಇಬ್ಬರು ಯುವಕರು ಆಟೋ‌ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಬಿದ್ದು ನರಳುತ್ತಿದ್ದರು. ಇದೇ ಮಾರ್ಗದಲ್ಲಿ ಚಲಿಸುತ್ತಿದ್ದ ಸಚಿವರು, ತಮ್ಮ ಕಾರನ್ನು ನಿಲ್ಲಿಸಿ ಆಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು. ಕೆಲಸದ ಒತ್ತಡದ ಮಧ್ಯೆಯೂ ಸಚಿವರು ಗಾಯಾಳುಗಳನ್ನು ಸಾಗಿಸಲು ಎಲ್ಲ ವ್ಯವಸ್ಥೆ ಮಾಡಿದರು.

ಗೃಹಲಕ್ಷ್ಮಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗಿಯಾಗಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಮನವಿ

ಈ ವೇಳೆ ಸ್ಥಳೀಯರು ದೊಡ್ಡಪೇಟೆ ಕ್ರಾಸ್ ನಲ್ಲಿ ಪದೆ ಪದೇ ಅಪಘಾತ ಸಂಭವಿಸುತ್ತಿದ್ದು, ಇದಕ್ಕೆ ಪರಿಹಾರ ಕೊಡಿಸಬೇಕು ಎಂದು ಮನವಿ ಮಾಡಿದರು. ಗಾಯಾಳುಗಳಿಗೆ ನೆರವಾದ ಸಚಿವರ ಮಾನವೀಯತೆ ಕಾರ್ಯ ಸ್ಥಳೀಯರು ಮೆಚ್ಚುಗೆ ಪಾತ್ರವಾಯಿತು. ಇನ್ನು ಅಲ್ಲಿದ್ದ ಸ್ಥಳೀಯರು ಯಾವುದೇ ಜನಸಾಮಾನ್ಯರು ಇದ್ದರೂ ರಕ್ತದ ಮಡುವಿನಲ್ಲಿ ಬಿದ್ದು ನರಳುತ್ತಿದ್ದ ಯುವಕರನ್ನು ರಕ್ಷಣೆ ಮಾಡಲು ತಡವಾಗುತ್ತಿತ್ತು. ಅಷ್ಟರಲ್ಲಾಗಲೇ ಯುವಕ ಪ್ರಾಣವೂ ಹೋಗುವ ಸಾಧ್ಯತೆಯಿತ್ತು. ಆದರೆ, ಅದೇ ದಾರಿಯಲ್ಲಿ ಬಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸ್ವತಃ ಕಾರಿನಿಂದ ಇಳಿದು, ಅವರನ್ನು ರಕ್ಷಣೆ ಮಾಡಲು ಮುತವರ್ಜಿ ವಹಿಸಿದರು. ಜೊತೆಗೆ, ತಮ್ಮ ಎಸ್ಕಾರ್ಟ್‌ ಸಿಬ್ಬಂದಿಗೆ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಯುವಕರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ಸಾಗಿಸುವಂತೆ ಸೂಚನೆ ನೀಡಿದ್ದಾರೆ. ನಂತರ, ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತು.

click me!