50 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಒಂದೇ ಒಂದು ಸ್ಥಾನಕ್ಕೆ ಸಿಮೀತ| ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಕ್ಷೇತ್ರದ ಅಭಿವೃದ್ಧಿ|. ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ಅಭಿವೃದ್ಧಿ ಮಾಡಲು ಸಾದ್ಯವೇ?| ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಸರ್ಕಾರ ತನ್ನ ಅಧಿಕಾರದಲ್ಲಿ ನಿದ್ದೆ ಮಾಡಿತೆ ಹೊರತು ಅಭಿವೃದ್ಧಿ ಮಾಡಲಿಲ್ಲ: ಅಶೋಕ|
ಮಸ್ಕಿ(ಏ.13): ಮುಂಬರುವ 2023 ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಸರ್ವನಾಶವಾಗುವುದರಲ್ಲಿ ಯಾವುದೇ ಸಂದೇಶಹವಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ.
ಪಟ್ಟಣದಲ್ಲಿ ಬಿಜೆಪಿಯಿಂದ ಸೋಮವಾರ ಏರ್ಪಡಿಸಿದ್ದ ಮಹಿಳಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿ ಮೈಸೂರಿನ ವರುಣಾ ಕ್ಷೇತ್ರದಲ್ಲಿ ಚುನಾವಣೆ ಗೆಲ್ಲಲಾಗದ ಸಿದ್ದರಾಮಯ್ಯ ಮಸ್ಕಿಯಲ್ಲಿ ಬಂದು ಕಾಂಗ್ರೆಸ್ ಗೆಲ್ಲುತ್ತದೆ ಎಂದು ಭಾಷಣ ಮಾಡುತ್ತಾರೆ. 50 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಒಂದೇ ಒಂದು ಸ್ಥಾನಕ್ಕೆ ಸಿಮೀತವಾಗಿದೆ. ಕಾಂಗ್ರೆಸ್ ನ ದುರಾಡಳಿತದಿಂದ ಬೆಸತ್ತು 17 ಜನ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ಬಂದರೆ ವಿನಃ ಯಾವುದೇ ಹಣದ ಆಸೆಗಾಗಿ ಅಲ್ಲ ಎಂದರು. ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಕ್ಷೇತ್ರದ ಅಭಿವೃದ್ಧಿಯಾಗುತ್ತದೆ. ಆದರೆ, ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ಅಭಿವೃದ್ಧಿ ಮಾಡಲು ಸಾದ್ಯವೇ?ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಸರ್ಕಾರ ತನ್ನ ಅಧಿಕಾರದಲ್ಲಿ ನಿದ್ದೆ ಮಾಡಿತೆ ಹೊರತು ಅಭಿವೃದ್ಧಿ ಮಾಡಲಿಲ್ಲ.ಸಚಿವ ಮುರುಗೇಶ ನಿರಾಣಿ ಮಾತನಾಡಿ ಮಹಿಳೆಯರಿಗಾಗಿ ಪ್ರಧಾನಿ ನರೇಂದ್ರ ಮೋದಿ ಹೆಚ್ಚಿನ ಅನುದಾನ ನೀಡುವ ಮೂಲಕ ಅವರ ಕಲ್ಯಾಣಕ್ಕೆ ಮುಂದಾಗಿದ್ದಾರೆ ಎಂದರು.
undefined
ಸುಳ್ಳು ಹೇಳೋದ್ರಲ್ಲಿ ಬಿಜೆಪಿಗರು ನಿಸ್ಸೀಮರು: ಸಿದ್ದರಾಮಯ್ಯ
ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ, ಮಹಿಳಾ ಮೊರ್ಚದ ರಾಷ್ಟೀಯ ಉಪಾಧ್ಯಕ್ಷೆ ಡಿ.ಕೆ.ಅರುಣಾ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ, ಶಾಸಕರಾದ ಪರಣ್ಣ ಮನವಳ್ಳಿ,ದೊಡ್ಡನ ಲೆಕ್ಕಿಹಾಳ, ಕೃಷ್ಣಪ್ಪ, ಭಾರತಿ ಶೆಟ್ಟಿ, ಜಿಲ್ಲಾ ಪಂಚಾಯತ ಅಧ್ಯಕ್ಷೆ ಹಾದಿಮನಿ ವೀರಲಕ್ಷ್ಷೀ ಮಾಜಿ ಶಾಸಕರಾದ ಮಾನಪ್ಪ ವಜ್ಜಲ್, ನೇಮಿರಾಜ ನಾಯ್ಕ, ರಾಮಾನಂದ ಯಾಧವ್, ಯುವ ಮೊರ್ಚ ರಾಜ್ಯ ಘಟಕದ ಅಧ್ಯಕ್ಷ ಸಂದೀಪ ಕುಮಾರ, ಮಹಿಳಾ ಮೊರ್ಚದ ಜಿಲ್ಲಾ ಘಟಕದ ಅಧ್ಯಕ್ಷೆ ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ, ಶಾಸಕರ ಪುತ್ರಿ ರಾಜೇಶ್ವರಿ ಪಾಟೀಲ, ಪುರಸಭೆ ಅಧ್ಯಕ್ಷೆ ವಿಜಯಲಕ್ಷ್ಮಿ ಬಿ. ಪಾಟೀಲ. ಮಹಿಳಾ ಮೊರ್ಚದ ಮಂಡಲ ಅಧ್ಯಕ್ಷೆ ಪ್ರಮೀಳಾ ಇತರರು ಇದ್ದರು.