'ಚಾಮರಾಜನಗರ ಉಸ್ತುವಾರಿಯೂ ಎಸ್‌ಟಿಎಸ್‌ಗೆ ನೀಡುವಂತೆ ಜನರ ಆಗ್ರಹ'

By Kannadaprabha News  |  First Published Dec 3, 2020, 8:27 AM IST

ಕಳೆದ ಏಳೆಂಟು ತಿಂಗಳಿಂದ ಮೈಸೂರಿನಲ್ಲಿ ಸೋಮಶೇಖರ್‌ ಉತ್ತಮ ಅಭಿವೃದ್ಧಿ ಕಾರ್ಯ| ಪಕ್ಷದಲ್ಲಿಯೂ ಸಹ ಅನೇಕ ಕಾರ್ಯ ಚಟುವಟಿಕೆಗಳನ್ನು ನಡೆಸುತ್ತಾ ಎಲ್ಲ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಮನಸ್ಸನ್ನು ಗೆದ್ದ ಸೋಮಶೇಖರ್‌| 


ಮದ್ದೂರು(ಡಿ.03):  ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಅಭೂತಪೂರ್ವವಾಗಿ ಪಕ್ಷದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಅವರಿಗೆ ಮೈಸೂರು ಜೊತೆಗೆ ಚಾಮರಾಜನಗರ ಜಿಲ್ಲೆಯ ಉಸ್ತುವಾರಿಯನ್ನೂ ಕೊಡಬೇಕು ಎಂದು ಅಲ್ಲಿನ ಜನರು ಅಪೇಕ್ಷೆ ಪಡುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದ್ದಾರೆ.

ಬುಧವಾರ ಮದ್ದೂರಿನಲ್ಲಿ ನಡೆದ ಗ್ರಾಮ ಸ್ವರಾಜ್‌ ಸಮಾವೇಶದಲ್ಲಿ ಮಾತನಾಡಿದ ಅವರು, ಕಳೆದ ಏಳೆಂಟು ತಿಂಗಳಿಂದ ಮೈಸೂರಿನಲ್ಲಿ ಸೋಮಶೇಖರ್‌ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಇದರ ಜೊತೆಗೆ ಪಕ್ಷದಲ್ಲಿಯೂ ಸಹ ಅನೇಕ ಕಾರ್ಯ ಚಟುವಟಿಕೆಗಳನ್ನು ನಡೆಸುತ್ತಾ ಎಲ್ಲ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಮನಸ್ಸನ್ನು ಗೆದ್ದಿದ್ದಾರೆ ಎಂದರು.

Tap to resize

Latest Videos

'ಭತ್ತ, ರಾಗಿಗೆ ಬೆಂಬಲ ಬೆಲೆ ಅಡಿ ಖರೀದಿ ಕೇಂದ್ರ ಸ್ಥಾಪನೆ'

ಮೈಸೂರು ಜಿಲ್ಲೆಯ ಪ್ರತಿ ತಾಲೂಕುಗಳಿಗೂ ಸಂಚರಿಸಿ ಪ್ರಮುಖ ಮುಖಂಡರ ಸಭೆಗಳನ್ನು ನಡೆಸಿ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಪಕ್ಷದಲ್ಲಿ ಹೆಚ್ಚಿನ ಜವಾಬ್ದಾರಿಯನ್ನು ತೆಗೆದುಕೊಂಡಿದ್ದಾರೆ. ಇವರ ಕಾರ್ಯವೈಖರಿಯನ್ನು ಗಮನಿಸಿದ ಚಾಮರಾಜನಗರ ಜಿಲ್ಲೆಯ ಪಕ್ಷದ ಕಾರ್ಯಕರ್ತರು ಸೋಮಶೇಖರ್‌ ಅವರಿಗೆ ಮೈಸೂರಿನ ಜೊತೆ ತಮ್ಮ ಜಿಲ್ಲೆಯ ಉಸ್ತುವಾರಿಯನ್ನು ಕೊಡಿ ಎಂದು ಆಗ್ರಹಿಸುತ್ತಿದ್ದಾರೆ ಎಂದು ತಿಳಿಸಿದರು.
 

click me!