ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳ: ಶೀಘ್ರ ಅಧಿಸೂಚನೆ

By Kannadaprabha NewsFirst Published Jul 3, 2020, 3:25 PM IST
Highlights

519 ಮೀ ಎತ್ತರವನ್ನು 524 ಮೀ. ಹೆಚ್ಚಿ​ಸು​ವಂತೆ ಪ್ರಸ್ತಾಪ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ| ಅಂತಾರಾಜ್ಯ ಕುಡಿವ ನೀರಿನ ಸಮಸ್ಯೆ ಬಗೆಹರಿಸಲು ಮುಂದಿನ ವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವರೊಂದಿಗೆ ಸಭೆ|

ಕಲಬುರಗಿ(ಜು.03): ಆಲಮಟ್ಟಿ ಜಲಾಶಯದ ಪ್ರಸ್ತುತ ಇರುವ 519 ಮೀ. ಎತ್ತರವನ್ನು 524 ಮೀ. ಹೆಚ್ಚಿಸುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರದಲ್ಲಿ ಅಧಿಸೂಚನೆ ಪ್ರಕಟವಾಗುವ ನಿರೀಕ್ಷೆಯಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. 

ಜಿಲ್ಲೆಯ ಅಫಜಲ್ಪುರ ತಾಲೂಕಿನ ಸೊನ್ನ ಬ್ಯಾರೇಜ್‌ ಪರಿವೀಕ್ಷಿಸಿ ಮಾತನಾಡಿ, ಅಣೆಕಟ್ಟು ಹೆಚ್ಚಳ ಕುರಿತಂತೆ ಕೇಂದ್ರ ಸರ್ಕಾರವೇ ಮಧ್ಯ ಪ್ರವೇಶಿಸಬೇಕೆಂದು ಕೋರಲಾಗಿದೆ ಎಂದರು.ಮಹದಾಯಿ ಯೋಜನೆ ಅನುಷ್ಠಾನಕ್ಕೆ 800 ಕೋಟಿ ಮೊತ್ತದ ವಿಸ್ತ್ರತ ಯೋಜನಾ ವರದಿ ತಯಾರಿಸಿ ಕೇಂದ್ರಕ್ಕೆ ಕಳುಹಿಸಲಾಗಿದೆ. ಕೊರೋನಾ ಕಡಿಮೆಯಾದ ನಂತರ ತಾವು ದೆಹಲಿಗೆ ಹೋಗಿ ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿಯಾಗಿ ಇದರ ಅನುಮೋದನೆ ಪಡೆಯುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ದತ್ತಾತ್ರೇಯ ದೇವಸ್ಥಾನಕ್ಕೆ ರಮೇಶ ಜಾರಕಿಹೊಳಿ ಭೇಟಿ: ಸಾರ್ವಜನಿಕರಿಗೆ ಇಲ್ಲದ ದರ್ಶನ ಭಾಗ್ಯ ಸಚಿವರಿಗೇಕೆ?

ಅಲ್ಲದೇ ಅಂತಾರಾಜ್ಯ ಕುಡಿವ ನೀರಿನ ಸಮಸ್ಯೆ ಬಗೆಹರಿಸಲು ಮುಂದಿನ ವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವರೊಂದಿಗೆ ಸಭೆ ನಡೆಸಲಾಗುತ್ತಿದ್ದು, ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ತಿಳಿಸಿದ್ದಾರೆ.
 

click me!