ಸಚಿವ ಸಂತೋಷ ಲಾಡ್ ಹೆಸರೇ ಮರೆ ಶಿಕ್ಷಣ ಇಲಾಖೆ..!

By Kannadaprabha News  |  First Published Sep 5, 2024, 10:33 AM IST

ಸೆ. 6ರಂದು ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ ಪ್ರಯುಕ್ತ ಶಿಕ್ಷಕರ ದಿನಾಚರಣೆ ಹಾಗೂ ಪ್ರತಿಭಾ ಕಾರಂಜಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ನಿಯಮಾವಳಿ ಗಾಳಿಗೆ ತೂರಿ ಸ್ಥಳೀಯ ಶಾಸಕರ ಹೆಸರನ್ನೇ ಕೈಬಿಟ್ಟಿರುವುದು ಚರ್ಚಾ ವಿಷಯವಾಗಿದೆ. 


ಕಲಘಟಗಿ(ಸೆ.05):  ಪಟ್ಟಣದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಶಿಕ್ಷಕರ ದಿನಾಚರಣೆಯ ಆಮಂತ್ರಣ ಪತ್ರಿಕೆಯಲ್ಲಿ ಕ್ಷೇತ್ರದ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹೆಸರು ಕೈ ಬಿಟ್ಟಿರುವುದು ಚರ್ಚೆಗೆ ಗ್ರಾಸವಾಗಿದೆ.

ಪಟ್ಟಣ ಹೊರವಲಯದಲ್ಲಿರುವ ಗುಡ್ ನ್ಯೂಸ್ ಕಾಲೇಜಿನಲ್ಲಿ ಸೆ. 6ರಂದು ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ ಪ್ರಯುಕ್ತ ಶಿಕ್ಷಕರ ದಿನಾಚರಣೆ ಹಾಗೂ ಪ್ರತಿಭಾ ಕಾರಂಜಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ನಿಯಮಾವಳಿ ಗಾಳಿಗೆ ತೂರಿ ಸ್ಥಳೀಯ ಶಾಸಕರ ಹೆಸರನ್ನೇ ಕೈಬಿಟ್ಟಿರುವುದು ಚರ್ಚಾ ವಿಷಯವಾಗಿದೆ. 

Latest Videos

undefined

ಬೆಂಗ್ಳೂರಿನಲ್ಲಿ 200 ಕೋಟಿ ವೆಚ್ಚದಲ್ಲಿ ವಿಜ್ಞಾನ ನಗರ ನಿರ್ಮಾಣಕ್ಕೆ ಕ್ರಮ: ಸಚಿವ ಬೋಸರಾಜು

ಆಮಂತ್ರಣ ಪತ್ರಿಕೆಯಲ್ಲಿ ತಹಸೀಲ್ದಾರ್‌ ವೀರೇಶ ಮುಳುಗುಂದಮಠ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಶುರಾಮ ಸಾವಂತ, ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಬಸಾಪುರ ಅವರ ಹೆಸರನ್ನು ಮಾತ್ರ ಮುದ್ರಿಸಲಾಗಿದೆ. ಪತ್ರಿಕೆಯಲ್ಲಿ ಮುಖ್ಯವಾಗಿ ಶಾಸಕರ ಹೆಸರು ಕೈ ಬಿಟ್ಟಿರುವುದಕ್ಕೆ ಲಾಡ್ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. 'ಅದು ಆಮಂತ್ರಣ ಪತ್ರಿಕೆಯೇ ಅಲ್ಲ ಸಚಿವರ ಹೆಸರು ಕೈ ಬಿಡುವ ಪ್ರಶ್ನೆಯೇ ಇಲ್ಲ' ಎಂದು ಬಿಇಒ ಉಮಾದೇವಿ ಬಸಾಪುರ ತಿಳಿಸಿದರು.

ಶಿಕ್ಷಕರ ದಿನಾಚರಣೆ ಆಮಂತ್ರಣ ಪತ್ರಿಕೆ ಮುದ್ರಣ ಮಾಡಿರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಶಿಕ್ಷಣ ಇಲಾಖೆಯವರು ಅದರ ಜವಾಬ್ದಾರಿ ಹೊತ್ತಿರುತ್ತಾರೆ. ಈ ಬಗ್ಗೆ ಮಾಹಿತಿ ಪಡೆಯುವೆ ಎಂದು ಕಲಘಟಗಿ ತಹಸೀಲ್ದಾರರು ವೀರೇಶ ಮುಳುಗುಂದಮಠ ತಿಳಿಸಿದ್ದಾರೆ. 

click me!