ರೈತರ ಬೇಡಿಕೆ ಈಡೇರಿಸಲು ನಮ್ಮ ಸರ್ಕಾರ ಸಿದ್ಧ: ಸಚಿವ ಸತೀಶ ಜಾರಕಿಹೊಳಿ

By Kannadaprabha News  |  First Published Oct 5, 2023, 1:30 AM IST

ಇಲ್ಲಿಯ ರೈತರು ನೀವು ಅನ್ಯಾಯವಾಗಿದೆ ಎಂದು ಹೇಳುತ್ತಿದ್ದೀರಿ. ಈ ಕುರಿತು ಮತ್ತೊಂದು ಭಾರಿ ಸರ್ವೆ ನಡೆಸಲು ಕ್ರಮ ಕೈಗೊಳ್ಳಲಾಗುವುದು. ಈ ಹಿಂದೆ ನಡೆದ ಸರ್ವೆಯಲ್ಲಿ ಹಲವಾರು ಗೊಂದಲಗಳಿವೆ. ಇದನ್ನು ನಿವಾರಿಸಲು ಬಡವರ ಪರ ಹಾಗೂ ರೈತರ ಪರವಾಗಿರುವ ನಮ್ಮ ಸರ್ಕಾರ ಸಿದ್ಧವಾಗಿದೆ: ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ 


ಚನ್ನಮ್ಮನ ಕಿತ್ತೂರು(ಅ.05):  ಹಕ್ಕು ಪತ್ರ ವಿತರಿಸುವಂತೆ ಆಗ್ರಹಿಸಿ ಇಲ್ಲಿಯ ತಹಸೀಲ್ದಾರ್‌ ಕಚೇರಿ ಮುಂದೆ ಕುಲವಳ್ಳಿ ಭಾಗದ ರೈತರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಬುಧವಾರ ಭೇಟಿ ನೀಡಿ ರೈತರ ಮನವೊಲಿಸಲು ಯಶಸ್ವಿಯಾದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ಈಗಾಗಲೇ ಸುಪ್ರೀಂ ಕೋರ್ಟ್‌ ಖಾಸಗಿ ಮಾಲೀಕರ ಷರತ್ತುಬದ್ದ ಆದೇಶ ನೀಡಿದೆ. ಈ ಆದೇಶದಲ್ಲಿ ಅರಣ್ಯ ಸಂರಕ್ಷಿಸುವಂತೆ ಸೂಚಿಸಿದೆ. ಯಾರೊಬ್ಬರೂ ಇಲ್ಲ ಸಲ್ಲದ ಗೊಂದಲಕ್ಕೊಳಗಾಗಬಾರರು. ಸರ್ಕಾರ ಗಮನ ಸೆಳೆಯಲು ನೀವು ಪ್ರತಿಭಟನೆ ಮಾಡುತ್ತಿದ್ದು, ಈ ಕುರಿತು ಸರ್ಕಾರದ ಗಮನಕ್ಕೆ ಈ ವಿಷಯವನ್ನು ತರುತ್ತೇನೆ ಎಂದು ಭರವಸೆ ನೀಡಿದರು.

Latest Videos

undefined

ಬೆಳಗಾವಿ: ಬೆಳ್ಳಿಕಿರೀಟ, ಪೇಟಾ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

ಇಲ್ಲಿಯ ರೈತರು ನೀವು ಅನ್ಯಾಯವಾಗಿದೆ ಎಂದು ಹೇಳುತ್ತಿದ್ದೀರಿ. ಈ ಕುರಿತು ಮತ್ತೊಂದು ಭಾರಿ ಸರ್ವೆ ನಡೆಸಲು ಕ್ರಮ ಕೈಗೊಳ್ಳಲಾಗುವುದು. ಈ ಹಿಂದೆ ನಡೆದ ಸರ್ವೆಯಲ್ಲಿ ಹಲವಾರು ಗೊಂದಲಗಳಿವೆ. ಇದನ್ನು ನಿವಾರಿಸಲು ಬಡವರ ಪರ ಹಾಗೂ ರೈತರ ಪರವಾಗಿರುವ ನಮ್ಮ ಸರ್ಕಾರ ಸಿದ್ಧವಾಗಿದೆ. ಯಾರೇ ಬಂದು ನಿಮ್ಮನ್ನು ಒಕ್ಕಲೆಬಿಸಲು ಪ್ರಯತ್ನಿಸಿದರೂ ಪೊಲೀಸ್ ಇಲಾಖೆ ಸಹಾಯ ಪಡೆದುಕೊಳ್ಳಿ. ಇನ್ನೂ ಕಾನೂನು ಹೊರಾಟಕ್ಕೆ ಅವಕಾಶವಿದ್ದು, ಹಕ್ಕು ಕೇಳಲು ಸಹ ಅವಕಾಶವಿದೆ ಎಂದು ಹೇಳುವ ಮೂಲಕ ಪ್ರತಿಭಟನಾಕಾರರ ಮನವೊಲಿಸಿ ಗೊಂದಲ ಸೃಷ್ಟಿಯಾಗದಂತೆ ನಡೆದುಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ಇದಕ್ಕೆ ಸಹಮತ ವ್ಯಕ್ತ ಪಡಿಸಿದ ಪ್ರತಿಭಟನಾಕಾರರು ಪ್ರತಿಭಟನೆ ಹಿಂಪಡೆದು ತಮ್ಮ ಗ್ರಾಮಗಳಿಗೆ ತೆರಳಿದರು. ಈ ಸಂದರ್ಭದಲ್ಲಿ ಶಾಸಕ ಬಾಬಾಸಾಹೇಬ್‌ ಪಾಟೀಲ, ಎಸಿ ಪ್ರಭಾವತಿ ಫಕ್ಕಿರಪೂರ, ತಹಸೀಲ್ದಾರ್‌ ರವೀಂದ್ರ ಹಾದಿಮನಿ, ರೈತ ಹೊರಾಟಗಾರ ಬಿಷ್ಠಪ್ಪ ಶಿಂಧೆ ಸೇರಿದಂತೆ ಇತರರು ಇದ್ದರು.

click me!