ಸುವರ್ಣವಿಧಾನಸೌಧಕ್ಕೆ ಪ್ರಮುಖ ರಾಜ್ಯಮಟ್ಟದ ಕಚೇರಿ ಸ್ಥಳಾಂತರ, ಬೆಳಗಾವಿ ಜಿಲ್ಲಾ ವಿಭಜನೆ ಮಾಡಬೇಕು ಎನ್ನುವ ಬೇಡಿಕೆಗೆ ಸ್ಪಂದನೆ ಸಿಕ್ಕಿಲ್ಲ. ಬೆಳಗಾವಿ ಕೈಗಾರಿಕಾ ಘಟಕಗಳ ಅಭಿವೃದ್ಧಿಗೆ ಕೈಗೊಳ್ಳಬೇಕಿತ್ತು. ಐಟಿ ಪಾರ್ಕ್ ಸ್ಥಾಪನೆ ನಿರೀಕ್ಷೆಯೂ ಹುಸಿಯಾಗಿದೆ. ಐಟಿ ಪಾರ್ಕ್‌ಗೆ ಸ್ಥಳ ನಿಗದಿಯಾಗಿದ್ದರೂ ಈವರೆಗೂ ಯಾವುದೇ ಕಂಪನಿಗಳು ಬಂದಿಲ್ಲ. ರಾಜ್ಯ ಸರ್ಕಾರ ಮೂಗಿಗೆ ತುಪ್ಪ ಸವರಿದೆ ಎಂದು ಜಿಲ್ಲೆಯ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶ್ರೀಶೈಲ ಮಠದ
ಬೆಳಗಾವಿ(ಜು.08): ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಗಡಿ ಜಿಲ್ಲೆ ಬೆಳಗಾವಿಗೆ ಮಹತ್ವದ ಕೊಡುಗೆಗಳೇನೂ ಸಿಕ್ಕಿಲ್ಲ. ಕೆಲ ಯೋಜನೆಗಳನ್ನು ಹೊರತುಪಡಿಸಿದರೆ ಜನರ ನಿರೀಕ್ಷೆಗೆ ದೊಡ್ಡ ಮಟ್ಟದ ಸ್ಪಂದನೆ ಸಿಕ್ಕಿಲ್ಲ. ಪ್ರಭಾವಿಗಳೇ ಸರ್ಕಾರದ ಭಾಗವಾಗಿದ್ದರೂ ಸಿಹಿ ಸುದ್ದಿ ಸಿಗದಿರುವುದು ಜನರ ನಿರಾಶೆಗೆ ಕಾರಣವಾಗಿದೆ. ಇದು ಆನೆ ಹೊಟ್ಟಿಗೆ ಅರೆಕಾಸಿನ ಮಜ್ಜಿಗೆ ಎನ್ನುವಂತಾಗಿದೆ.
undefined
ಸುವರ್ಣವಿಧಾನಸೌಧಕ್ಕೆ ಪ್ರಮುಖ ರಾಜ್ಯಮಟ್ಟದ ಕಚೇರಿ ಸ್ಥಳಾಂತರ, ಬೆಳಗಾವಿ ಜಿಲ್ಲಾ ವಿಭಜನೆ ಮಾಡಬೇಕು ಎನ್ನುವ ಬೇಡಿಕೆಗೆ ಸ್ಪಂದನೆ ಸಿಕ್ಕಿಲ್ಲ. ಬೆಳಗಾವಿ ಕೈಗಾರಿಕಾ ಘಟಕಗಳ ಅಭಿವೃದ್ಧಿಗೆ ಕೈಗೊಳ್ಳಬೇಕಿತ್ತು. ಐಟಿ ಪಾರ್ಕ್ ಸ್ಥಾಪನೆ ನಿರೀಕ್ಷೆಯೂ ಹುಸಿಯಾಗಿದೆ. ಐಟಿ ಪಾರ್ಕ್‌ಗೆ ಸ್ಥಳ ನಿಗದಿಯಾಗಿದ್ದರೂ ಈವರೆಗೂ ಯಾವುದೇ ಕಂಪನಿಗಳು ಬಂದಿಲ್ಲ. ರಾಜ್ಯ ಸರ್ಕಾರ ಮೂಗಿಗೆ ತುಪ್ಪ ಸವರಿದೆ ಎಂದು ಜಿಲ್ಲೆಯ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಜೆಟ್‌ನಲ್ಲೇ ರಾಜ್ಯದ ವ್ಯಕ್ತಿತ್ವಕ್ಕೆ ಮಸಿ ಬಳಿದ ಸಿದ್ದು: ಬಿಜೆಪಿ ಎಂಎಲ್‌ಸಿ ಎನ್.ರವಿಕುಮಾರ್
ಉತ್ತರ ಕರ್ನಾಟಕ ಜನತೆಗೆ ಪ್ರಮುಖ ಬೇಡಿಕೆಯಾದ ಸುವರ್ಣ ವಿಧಾನಸೌಧಕ್ಕೆ ರಾಜ್ಯಮಟ್ಟದ ಪ್ರಮುಖ ಕಚೇರಿಗಳನ್ನು ಸ್ಥಳಾಂತರ ಮಾಡಬೇಕು ಎನ್ನುವ ಬೇಡಿಕೆಗೆ ಸ್ಪಂದನೆ ಸಿಕ್ಕಿಲ್ಲ. ಬೆಂಗಳೂರನ್ನು ಹೊರತುಪಡಿಸಿದರೆ ರಾಜ್ಯದಲ್ಲೇ ಬೆಳಗಾವಿ ದೊಡ್ಡ ಜಿಲ್ಲೆಯಾಗಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡಿ, ಬೆಳಗಾವಿ, ಗೋಕಾಕ ಮತ್ತು ಚಿಕ್ಕೋಡಿ ಹೀಗೆ ಮೂರು ಜಿಲ್ಲೆಗಳನ್ನಾಗಿ ಘೋಷಣೆ ಮಾಡಬೇಕು ಎನ್ನುವ ಬೇಡಿಕೆಗೆ ಆದ್ಯತೆ ನೀಡಲಾಗಿಲ್ಲ. ಜಿಲ್ಲೆಯ ನೀರಾವರಿ ಯೋಜನೆಗಳಿಗೂ ಆದ್ಯತೆ ನೀಡಲಾಗಿಲ್ಲ. ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಒಂದಿಷ್ಟುಕೊಡುಗೆಗಳು ಸಿಗಬಹುದು ಎಂಬ ನಿರೀಕ್ಷೆ ಕೂಡ ಹುಸಿಯಾಗಿದೆ.
ರಾಜ್ಯದಲ್ಲೇ ಗಡಿ ನಾಡು ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಮೆರವಣಿಗೆಯನ್ನು ಅತೀ ಅದ್ಧೂರಿಯಿಂದ ಆಚರಿಸಲಾಗುತ್ತಿದೆ. ಹಾಗಾಗಿ, ಸರ್ಕಾರ ರಾಜ್ಯೋತ್ಸವ ಮೆರವಣಿಗೆಗೆ . 1 ಕೋಟಿ ಅನುದಾನ ನೀಡುವಂತೆ ಕನ್ನಡಪರ ಸಂಘಟನೆಗಳ ಬೇಡಿಕೆಗೂ ಸ್ಪಂದನೆ ಸಿಕ್ಕಿಲ್ಲ.
ಜಿಲ್ಲೆಗೆ ಸಿಕ್ಕಿದ್ದೇನು?
-ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ಬೆಳಗಾವಿಯಲ್ಲಿ ಅತ್ಯಾಧುನಿಕ ಕೌಶಲ್ಯ ಪ್ರಯೋಗಾಲಯಗಳು, ಸಂಶೋಧನಾ ಕೇಂದ್ರ ಮತ್ತು ಒಳಾಂಗಣ ಕ್ರೀಡಾಂಗಣ ಸ್ಥಾಪಿಸಲಾಗುವುದು
- ಬೆಳಗಾವಿಯಲ್ಲಿ ಅಲ್ಪಸಂಖ್ಯಾತ ಯುವಜನರಿಗೆ ಕೌಶಲ್ಯ ತರಬೇತಿ ಕೇಂದ್ರ ಸ್ಥಾಪನೆ
- ಹುಕ್ಕೇರಿ ತಾಲೂಕಿನ ಕಣಗಲಾದಲ್ಲಿ ಹೊಸದಾಗಿ ಕೈಗಾರಿಕಾ ವಸಾಹತು ಸ್ಥಾಪನೆ
- ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರವನ್ನು ಪ್ರವಾಸಿತಾಣವನ್ನಾಗಿ ಅಭಿವೃದ್ಧಿಪಡಿಸುವುದು
-ಕಿತ್ತೂರು ಕೋಟೆಯಲ್ಲಿ ರಾತ್ರಿ ವೇಳೆ ಪ್ರವಾಸಿಗರ ಭೇಟಿಯನ್ನು ಉತ್ತೇಜಿಸಲು ಹಾಗೂ ಕರ್ನಾಟಕ ರಾಜ್ಯದ ಕಲೆ , ವಾಸ್ತುಶಿಲ್ಪ ಮತ್ತು ಸಾಂಸ್ಕೃತಿಕ ಪರಂಪರೆಯ ಶ್ರೀಮಂತಿಕೆಯನ್ನು ಪ್ರದರ್ಶಿಸಲು 3ಡಿ ಪ್ರೆಜೆಕ್ಷನ್, ಮಲ್ಟಿಮೀಡಿಯಾ, ಸೌಂಡ್ ಮತ್ತು ಲೈಟ್ ಷೋ ಯೋಜನೆ ಕೈಗೊಳ್ಳಲಾಗುವುದು
-ಮಾನವ - ವನ್ಯಪ್ರಾಣಿ ಸಂರ್ಘದಲ್ಲಿ ಸಂರಕ್ಷಿಸಿದ , ಗಾಯಗೊಂಡ, ಅನಾರೋಗ್ಯ ಪೀಡಿತ ಪ್ರಾಣಿಗಳನ್ನು ರಕ್ಷಮೆ, ನಿರ್ವಹಣೆ ಮಾಡಲು ಬೆಳಗಾವಿಯಲ್ಲಿ ಹೊಸದಾಗಿ ಪುನರ್ವಸತಿ ಕೇಂದ್ರ ನಿರ್ಮಿಸಲಾಗುವುದು
-ಕಿತ್ತೂರು ಕರ್ನಾಟಕ ಭಾಗದ ಅಭಿವೃದ್ದಿಗೆ ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪನೆ
-ಬೆಳಗಾವಿ ಹಾಗೂ ಗೋಕಾಕದಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳ ನಿರ್ಮಿಸುವುದು
- ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವುದು
-ಸುಟ್ಟ ಗಾಯಗೊಂಡಿವವರಿಗೆ ಚಿಕಿತ್ಸಾ ಘಟಕ ಸ್ಥಾಪನೆ
- ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಕಟ್ಟಡ ನಿರ್ಮಾಣಕ್ಕೆ . 216.53 ಕೋಟಿ ಅನುದಾನ ಒದಗಿಸಲಾಗಿದೆ
-ಖಾನಾಪುರದಲ್ಲಿ ಸಮುದಾಯ ಆರೋಗ್ಯ ಕೇಂದ್ರ ತಾಲೂಕು ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೆ
ಬಜೆಟ್ ಪ್ರತಿಕ್ರಿಯೆಗಳು
ರಾಜ್ಯ ಕಾಂಗ್ರೆಸ್ ಸರ್ಕಾರ ಮಂಡಿಸಿರುವ ಬಜೆಚ್ ಇದು ನಿರಾಶಾದಾಯಕವಾಗಿದೆ. ಪ್ರಸ್ತುತ ಬಜೆಚ್ ಜನಸಾಮಾನ್ಯರನ್ನು ಕೇಂದ್ರವಾಗಿಟ್ಟುಕೊಂಡು ರೂಪಿತಗೊಂಡಿಲ್ಲ. ಶಿಕ್ಷಣ ಆರೋಗ್ಯ ಕೃಷಿ ನೀರಾವರಿ ಕ್ಷೇತ್ರಗಳಿಗೆ ಕೊಡಬೇಕಾದಂತಹ ಪ್ರಾಮುಖ್ಯತೆಯನ್ನು, ಆದ್ಯತೆಯನ್ನು ಕಡೆಗಣಿಸಲಾಗಿದೆ. ಅಡುಗೆ ಅನಿಲ ದರವನ್ನು ಏರಿಸುವುದರ ಮೂಲಕವಾಗಿ ಬಡವರ ಹೊಟ್ಟೆಯ ಮೇಲೆ ಬರೆ ಎಳೆದಿದೆ. ಗ್ಯಾರಂಟಿಗಳ ಭರಾಟೆಯಲ್ಲಿ ಜನಸಾಮಾನ್ಯರ ಹಿತಾಸಕ್ತಿಗಳನ್ನು ಕಾಪಾಡಿಲ್ಲ ಅಂತ ಬೆಳಗಾವಿ ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯಬಜೆಟ್ ಜನ ವಿರೋಧಿಯಾಗಿದೆ. ಈ ಬಜೆಟ್‌ನಲ್ಲಿ ಹೊಸ ಯೋಜನೆಗಳ ಪ್ರಸ್ತಾಪವೇ ಇಲ್ಲ. ಗಡಿನಾಡಿನಲ್ಲಿ ಕೈಗಾರಿಕೆಗಳ ಉತ್ತೇಜನಕ್ಕೆ ಏನೂ ಕ್ರಮ ತೆಗೆದು ಕೊಂಡಿಲ್ಲ. ಹಿಂದಿನ ಸರ್ಕಾರ ಕಿದ್ವಾಯಿ ಆಸ್ಪತ್ರೆ ಸ್ಥಾಪನೆಗೆ . 150 ಕೋಟಿ ನೀಡಿತ್ತು, ಈಗಿನ ಕಾಂಗ್ರೆಸ… ಸರ್ಕಾರ ಅದಕ್ಕೆ ಕೇವಲ 50 ಕೋಟಿ ತೆಗೆದಿರಿಸಿ ಬೆಳಗಾವಿ ವಿರೋಧಿ ಸರ್ಕಾರ ಎನ್ನುವುದನ್ನು ಸಾಬೀತು ಮಾಡಿದೆ. ಮರಾಠ ಅಭಿವೃದ್ಧಿ ನಿಗಮಕ್ಕೆ . 50 ಕೋಟಿ ಅನುದಾನ ನೀಡಿದೆ. ಭಾಗ್ಯ ಲಕ್ಷ್ಮೇ ಯೋಜನೆ ಬಗ್ಗೆ ಪ್ರಸ್ತಾಪಿಸಿಲ್ಲ ಅಂತ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಹೇಳಿದ್ದಾರೆ.
ಇದೊಂದು ಬಜೆಟ್ ಭಾಷಣದ ಬದಲಾಗಿ ರಾಜಕೀಯ ದ್ವೇಶದ ಪ್ರಚಾರ ಭಾಷಣವಾಗಿದ್ದು ಹೆಚ್ಚಿನ ಸಮಯ ಬಿಜೆಪಿಯನ್ನು ದ್ವೇಷಿಸುವಲ್ಲೆ ಕಾಲ ಕಳೆದ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹಳೆಯ ಚಾಳಿ ಹಿಂದು ವಿರೊಧಿ ನೀತಿಯನ್ನೆ ಮುಂದುವರಿಸಿದ್ದಾರೆ. ಗೋ ಶಾಲೆ ರದ್ದತಿ, ಅಲ್ಪ ಸಂಖ್ಯಾತರ ತುಷ್ಟಿಕರಣ ಎದ್ದು ಕಾಣುತ್ತಿದೆ. ಅಭಿವೃದ್ಧಿ ಪರ ಕಾರ್ಯಕ್ಕೆ ಒತ್ತು ನೀಡದೆ ಕೆಲ ಪ್ರಚಾರಕ್ಕೆ ಮಾಡಿದ ಭಾಷಣವಾಗಿದೆ. ನಿರಾಶಾದಾಯಕ ಬಜೆಟ್ ಇದಾಗಿದೆ ಅಂತ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಸಂಜಯ ಪಾಟೀಲ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದÜ 2023 -24ನೇ ಸಾಲಿನ ಆಯವ್ಯಯ ಇತಿಹಾಸದಲ್ಲೇ ಅತ್ಯಪರೂಪವಾದದ್ದು, ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವ ಕಾಂಗ್ರೆಸ್ ಧ್ಯೇಯ ಬಜೆಚ್ ನಲ್ಲಿ ಪ್ರತಿಬಿಂಬಿತವಾಗಿದೆ. ಪ್ರಾದೇಶಿಕವಾಗಿ ನೋಡಿದರೂ, ಇಲಾಖಾವಾರು ನೋಡಿದರೂ ಎಲ್ಲ ದೃಷ್ಟಿಯಿಂದಲೂ ಬಜೆಚ್ ಅತ್ಯಂತ ಸಮತೋಲಿತವಾಗಿದೆ. ಎಲ್ಲ ಜಿಲ್ಲೆಗಳಿಗೂ, ಎಲ್ಲ ಇಲಾಖೆಗಳಿಗೂ ಹೇರಳವಾಗಿ ಹಣ ಒದಗಿಸಲಾಗಿದೆ. ರಾಜ್ಯದ ಸರ್ವಾಂಗೀಣ ಬೆಳವಣಿಗೆಗೆ ಅಗತ್ಯವಾದ ರೀತಿಯಲ್ಲಿ ಬಜೆಚ್ ರೂಪಿಸಲಾಗಿದೆ. ಕೃಷಿ, ನೀರಾವರಿ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಗ್ರಾಮೀಣಾಭಿವೃದ್ಧಿ, ಆರೋಗ್ಯ ಹೀಗೆ ಎಲ್ಲ ಕ್ಷೇತ್ರಗಳಿಗೂ ಆದ್ಯತೆ ನೀಡಲಾಗಿದೆ ಅಂತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ.
ಕಲ್ಯಾಣದ ಅಭಿವೃದ್ಧಿಗೆ ಬಜೆಟ್ ಪೂರಕ: ಸಚಿವ ಈಶ್ವರ್ ಖಂಡ್ರೆ
ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಧ್ಯೇಯವಾಕ್ಯದೊಂದಿಗೆ ರಾಜ್ಯದ ಜನರನ್ನು ಹಿತದೃಷ್ಟಿಯಲ್ಲಿಟ್ಟುಕೊಂಡು . 3 ಲಕ್ಷ 28 ಸಾವಿರ ಕೋಟಿ ಮೊತ್ತದ ಬಜೆಟ್ ಮಂಡನೆ ಮಾಡಲಾಗಿದೆ. ರಾಜ್ಯದ ಸಮಗ್ರ ಅಭಿವೃದ್ಧಿ, ರಾಜ್ಯದ ಎಲ್ಲ ವರ್ಗದ ಜನರ ಸಬಲೀಕರಣಕ್ಕಾಗಿ ಈ ಬಜೆಟ್ ಪೂರಕ, ಆಶಾದಾಯಕವಾಗಿದ್ದು, ಜನಪರ, ಜನಸ್ನೇಹಿ ಬಜೆಟ್ ಆಗಿದೆ. ಬಜೆಟ್‌ನಲ್ಲಿ ರಾಜ್ಯದ ರೈತರು, ಮಹಿಳೆಯರು, ಯುವಕರ ಸಬಲೀಕರಣಕ್ಕೆ ಈ ಬಜೆಚ್‌ನಲ್ಲಿ ವಿಶೇಷವಾಗಿ ಹೊಸ ಯೋಜನೆಗಳನ್ನು ಜಾರಿ ಮಾಡಲು ನಿರ್ಧರಿಸಲಾಗಿದೆ. ಲೋಕೋಪಯೋಗಿ ಇಲಾಖೆಗೆ 10.143 ಕೋಟಿ ಅನುದಾನ ಒದಗಿಸಲಾಗಿದೆ ಅಂತ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಚುನಾವಣೋತ್ತರ ಬಜೆಟ್ ಅತ್ಯಂತ ಪ್ರಬುದ್ಧತೆಯಿಂದ ಕೂಡಿದೆ. ಚುನಾವಣೆಯಲ್ಲಿ ಘೋಷಿಸಿದ ಐದರಲ್ಲಿ ನಾಲ್ಕು ಗ್ಯಾರಂಟಿಗಳಿಗೆ ಮುಂಗಡ ಪತ್ರದಲ್ಲಿ ಹಣವನ್ನು ತೆಗೆದಿರಿಸುವುದರ ಜೊತೆಗೆ, ಅಭಿವೃದ್ಧಿಗೆ ಆದ್ಯತೆ ನೀಡಿದೆ. ಅಪಾರ ಅನುಭವವುಳ್ಳ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಕ್ಷಣಕ್ಕೆ ಆದ್ಯತೆ ನೀಡಿ, ಮಾನವ ಸಂಪನ್ಮೂಲ ಅಭಿವೃದ್ಧಿಯೇ ನಾಡಿನ ಅಭಿವೃದ್ಧಿ ಎನ್ನುವುದನ್ನು ಸಾಬೀತು ಮಾಡಿದ್ದಾರೆ. ಜನಸಾಮಾನ್ಯರಿಗೆ ತೆರಿಗೆ ಭಾರ ವಿಧಿಸದೆ ಸಂಪನ್ಮೂಲ ಕ್ರೂಢೀಕರಿಸುವ ಬಜೆಟ್ ಎಂದರೆ ತಪ್ಪಾಗಲಾರದು ಎಂದು ಬೆಳಗಾವಿ ವಾಣಿಜ್ಯ ಶಿಕ್ಷಣ ತಜ್ಞ ಡಾ.ಚಂದ್ರಶೇಖರ ಗುಡಸಿ ತಿಳಿಸಿದ್ದಾರೆ.