ಕಳೆದ ವರ್ಷಕ್ಕೆ ಹೋಲಿಕೆ ಮಾಡಿದಲ್ಲಿ ಈ ವರ್ಷ ರೈತ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ದೇವರ ದಯೆಯಿಂದ ಎರಡು ಮೂರು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಬರ ಘೋಷಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ.7ರಂದು ಸಭೆ ಕರೆದಿದ್ದು, ಅಲ್ಲಿ ತೀರ್ಮಾನಿಸುವರು: ಸಚಿವ ಶರಣಬಸಪ್ಪ ದರ್ಶನಾಪುರ
ಗದಗ(ಸೆ.05): ಅನಿಯಮಿತ ಲೋಡ್ ಶೆಡ್ಡಿಂಗ್ ಸಮಸ್ಯೆ ಎರಡು ಮೂರು ದಿನಗಳಲ್ಲಿ ಬಗೆಹರಿಲಿದೆ ಎಂದು ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದರು. ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ಕೊರತೆ ಇದೆ. ಕೈಗಾರಿಕಾ ಪ್ರದೇಶಗಳಿಗೆ ಒಂದು ವಾರದಿಂದ ಸಮರ್ಪಕ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಪೀಕ್ ಅವರ್ ನಲ್ಲಿ ವಿದ್ಯುತ್ ಕಡಿತ ಆಗುತ್ತಿರುವುದರಿಂದ ಜನರಿಗೆ ತೊಂದರೆ ಆಗುತ್ತಿದೆ ಎಂದು ಜನರು ದೂರುತ್ತಿದ್ದಾರೆ. ಈಗ ಮಳೆ ಆಗುತ್ತಿದ್ದು, ಜಲ ವಿದ್ಯುತ್ ಸ್ಥಾವರಗಳು ಕೆಲಸ ಮಾಡಲಿವೆ. ಕಲ್ಲಿದ್ದಲು ಬಂದಿದ್ದು, ರಾಯಚೂರಿನಲ್ಲಿ ನಾಲ್ಕು ಘಟಕಗಳು ಕಾರ್ಯಾರಂಭ ಮಾಡಿದ್ದು, ವಿದ್ಯುತ್ ಕಡಿತ ಸಮಸ್ಯೆ ಶೀಘ್ರ ಬಗೆಹರಿಯಲಿದೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಕುರಿತಾದ ವಿರೋಧ ಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿದ ಅವರು, ಬೆಲೆ ಏರಿಕೆಯಿಂದ ಜನರಿಗೆ ಸಮಸ್ಯೆಯಾಗಿದೆ. ಗ್ಯಾರಂಟಿ ಯೋಜನೆಗಳಿಂದ ಬಡ ಜನರ ಬದುಕು ಶಕ್ತಗೊಂಡಿದೆ. ನಮ್ಮದು ಜನ ಪರ ಸರ್ಕಾರ. ನಾವು ಹಿಂದಿನ ಸರ್ಕಾರದಂತೆ ಆಡಳಿತ ನಡೆಸಬೇಕೇ? ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಕ್ಕೆ ಪ್ರತಿಭಟಿಸುತ್ತಾರಾ? ಕೊಡಬೇಡಿ ಎಂದು ಪ್ರತಿಭಟಿಸುತ್ತಾರಾ ಎಂದು ಪ್ರಶ್ನಿಸಿದರು.
ಜನರಿಗೆ ಕೊಟ್ಟ ಮಾತು ಈಡೇರಿಸಿದ್ದೇವೆ. ಸಣ್ಣಪುಟ್ಟ ತೊಂದರೆಗಿದ್ದರೆ ಹೇಳಲಿ ಸರಿ ಮಾಡೋಣ ಎಂದು ತಿಳಿಸಿದರು.
undefined
ಹಾವೇರಿ ಆಯ್ತು, ಗದಗ ಜಿಲ್ಲೆಯಲ್ಲೂ ಮೋಡ ಬಿತ್ತನೆ: ಸಚಿವ ಎಚ್.ಕೆ. ಪಾಟೀಲ ಮಾಹಿತಿ
ಕಳೆದ ವರ್ಷಕ್ಕೆ ಹೋಲಿಕೆ ಮಾಡಿದಲ್ಲಿ ಈ ವರ್ಷ ರೈತ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ದೇವರ ದಯೆಯಿಂದ ಎರಡು ಮೂರು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಬರ ಘೋಷಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆ.7ರಂದು ಸಭೆ ಕರೆದಿದ್ದು, ಅಲ್ಲಿ ತೀರ್ಮಾನಿಸುವರು ಎಂದು ತಿಳಿಸಿದರು.