67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಶುಕ್ರವಾರ ಸುವರ್ಣ ಸೌಧದ ಆವರಣದಲ್ಲಿ ಆಯೋಜಿಸಲಾಗಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮ ಉದ್ಘಾಟಿಸಿದ ಸಚಿವೆ ಶಶಿಕಲಾ ಜೊಲ್ಲೆ.
ಬೆಳಗಾವಿ (ಅ.28): ಇವತ್ತಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಅಭಿವೃದ್ದಿಗಾಗಿ ಆಧುನಿಕ ವಾತಾವರಣಕ್ಕೆ ಒಗ್ಗಬೇಕಾಗುತ್ತದೆ. ಆದರೆ ಅದೇ ಕಾರಣಕ್ಕಾಗಿ ನಾಡು, ನುಡಿ, ಸಂಸ್ಕೃತಿ ಮರೆತು ಮೂಢರಾಗದೇ ನಮ್ಮತನದ ಅಭಿಮಾನವನ್ನು ಮೆರೆಯಲೇಬೇಕಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಅವರು ಅಭಿಪ್ರಾಯಪಟ್ಟರು. 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಶುಕ್ರವಾರ ಸುವರ್ಣ ಸೌಧದ ಆವರಣದಲ್ಲಿ ಆಯೋಜಿಸಲಾಗಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 'ಮಗುವಿಗೆ ಎದೆಹಾಲು ಕುಡಿಸಲಾರಳು ಆಧುನಿಕ ತಾಯಿ ಇವಳಯ್ಯ. ಬಾಟಲಿ ಹಾಲು ಕುಡಿಸಿ ಚಾಕಲೇಟ್ ತಿನ್ನಿಸಿ ಪಾಪ್ ಸಾಂಗ್ ಹಾಡುವಳಯ್ಯ. ' ಎಂದು ಜನಪದ ಗೀತೆ ಹಾಡುವ ಮೂಲಕ ಸಚಿವೆ ಶಶಿಕಲಾ ಜೊಲ್ಲೆ ಅವರು ಎಲ್ಲೆ ಇದ್ದರೂ, ಹೇಗೆ ಇದ್ದರೂ ಕನ್ನಡಕದ ಪ್ರತಿ ತಾಯಿಯೂ ಕನ್ನಡತಿಯೇ ಆಗಿರಬೇಕು ಎಂದು ಅಭಿಪ್ರಾಯಪಟ್ಟರು.
ನಾಡ ದೇವಿಗೆ ಕೋಟಿ ಕಂಠದಾರತಿ: ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ವಿದ್ಯಾ ಚೇತನ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಗೀತೆಗಳನ್ನು ಪ್ರಸ್ತುತ ಪಡಿಸುವ ಮೂಲಕ ವಿದ್ಯಾರ್ಥಿ, ವಿದ್ಯಾರ್ಥಿನಿ, ಅಧಿಕಾರಿಗಳು ಸಂಗೀತ ಶಿಕ್ಷಕ ವಿನಾಯಕ ಮೋರೆ ನೇತೃತ್ವದಲ್ಲಿ ಭುವನೇಶ್ವರಿಗೆ ಕೋಟಿ ಕಂಠದಾರತಿ ಬೆಳಗಿದರು.
ಬೆಂಗಳೂರು: ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಮೊಳಗಿದ ಕನ್ನಡದ ಹಾಡು..!
ಕನ್ನಡ ರಾಜ್ಯೋತ್ಸವ ನಿಮಿತ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶುಕ್ರವಾರ ಹಮ್ಮಿಕೊಂಡಿರುವ ವಿನೂತನವಾದ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮಕ್ಕೆ ಅದ್ಭುತ ಪ್ರತಿಕ್ರಿಯೆ ಲಭಿಸಿದೆ. ಇದಕ್ಕಾಗಿ ಈಗಾಗಲೇ 1.15 ಕೋಟಿ ಜನರು ಕ್ಯೂಆರ್ ಕೋಡ್ ಮೂಲಕ ತಮ್ಮ ಹೆಸರು ನೊಂದಾಯಿಸಿಕೊಂಡಿದ್ದಾರೆ. ಹತ್ತು ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ಸಾವಿರಾರು ಸಂಘ ಸಂಸ್ಥೆಗಳು ಗಾಯನಕ್ಕಾಗಿ ತಮ್ಮ ಹೆಸರು ನೋಂದಾಯಿಸಿವೆ. 45 ದೇಶಗಳಿಂದ, ದೇಶದ 26 ರಾಜ್ಯಗಳಿಂದ ಜನರು ನೋಂದಣಿ ಮಾಡಿದ್ದಾರೆ. ಇದು ಅತ್ಯಂತ ಯಶಸ್ವಿ ಕಾರ್ಯಕ್ರಮವಾಗಿ ಹೊರಹೊಮ್ಮಿದೆ.
ಉಡುಪಿ: ಕಡಲಿನ ನಡುವೆ ನೂರಾರು ಬೋಟುಗಳಲ್ಲಿ ಕೋಟಿ ಕಂಠ ಗಾಯನ
ಕಾರ್ಯಕ್ರಮದಲ್ಲಿ ಕುವೆಂಪು ರಚಿತ ನಾಡಗೀತೆಯಾದ ಜಯ ಭಾರತ ಜನನಿಯ ತನುಜಾತೆ, ಹುಯಿಲಗೋಳ ನಾರಾಯಣರಾಯರ ರಚಿತ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು,ಬಾರಿಸಿ ಕನ್ನಡ ಡಿಂಡಿಮವ, ಡಾ.ಡಿ.ಎಸ್.ಕರ್ಕಿ ರಚಿತ ಹಚ್ಚೇವು ಕನ್ನಡದ ದೀಪ, ಚನ್ನವೀರ ಕಣವೀರ ರಚಿತ ವಿಶ್ವ ವಿನೂತನ ವಿದ್ಯಾಚೇತನ, ಹಂಸಲೇಖ ರಚಿತ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಸಮೂಹ ಗೀತ ಗಾಯನಗಳು ಇತ್ತು.