ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯಡಿಯೂರಪ್ಪ ಬಹಳ ಚಾಲೆಂಜ್ ಎದುರಿಸಿದ್ದಾರೆ: ಜೊಲ್ಲೆ

By Suvarna NewsFirst Published Jun 10, 2021, 2:22 PM IST
Highlights

* ಸಹಿ ಸಂಗ್ರಹಣೆ ನಡೆಯುತ್ತಿರುವ ಕುರಿತು ನನಗೆ ಮಾಹಿತಿ ಇಲ್ಲ
* ಬಿಎಸ್‌ವೈ ಅತಿವೃಷ್ಟಿ ಅನಾವೃಷ್ಟಿ, ಕೋವಿಡ್ ಕಾಲದಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ 
* ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರ ಕೊರತೆಯಿದೆ 

ಗದಗ(ಜೂ.10): ಯಾವುದೇ ರೀತಿಯ ಉಹಾಪೋಹಗಳಿಗೆ ನಾವು ಬಲಿ ಆಗೋದು ಬೇಡ. ಸಿಎಂ ಬಿ.ಎಸ್. ಯಡಿಯೂರಪ್ಪನರು ನಮ್ಮ ಸರ್ಕಾರ ಬಂದ ಮೇಲೆ ಬಹಳ ಚಾಲೆಂಜ್ ಎದುರಿಸಿದ್ದಾರೆ. ಅತಿವೃಷ್ಟಿ ಅನಾವೃಷ್ಟಿ, ಕೋವಿಡ್ ಕಾಲದಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆಗೆ ಹೋಗುತ್ತೇವೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. 

ಸಿಎಂ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ವಿಚಾರದ ಬಗ್ಗೆ ಇಂದು(ಗುರುವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮನೆಯೆಂದ ಮೇಲೆ ಕೆಲವು ಜಗಳಗಳು ಇದ್ದೇ ಇರುತ್ತವೆ. ಸ್ವಲ್ಪ ಕಿರಿಕಿರಿ ಇರುತ್ತೇ, ಮತ್ತೆ ಸರಿ ಹೋಗುತ್ತದೆ. ಯಾರೋ ಏನೋ ಹೇಳಿದ್ರು ಅಂತಾ ಗಾಬರಿ ಪಡುವಂತಿಲ್ಲ ಎಂದು ಹೇಳಿದ್ದಾರೆ. 

ಕೆಲಸ ಮಾಡಿ, ಇಲ್ಲದಿದ್ದರೆ ರಾಜೀನಾಮೆ ಕೊಡಿ : ಸಿಎಂ ವಿರುದ್ಧ ಯತ್ನಾಳ್ ಗರಂ

ನಾನು ಯಾವುದಕ್ಕೂ ಸಹಿ ಮಾಡಿಲ್ಲಾ, ಸಹಿ ಸಂಗ್ರಹಣೆ ನಡೆಯುತ್ತಿರುವ ಕುರಿತು ನನಗೆ ಮಾಹಿತಿ ಇಲ್ಲ. ಹೈಕಮಾಂಡ್‌ ಇರುತ್ತದೆ ಅವರು ಎಲ್ಲದನ್ನು ನೋಡುತ್ತಿರುತ್ತಾರೆ. ಕೋವಿಡ್ ಸಂದರ್ಭದಲ್ಲಿ ಸಿಎಂ ಅವರಿಗೆ ಬೇಜಾರ್‌ ಆಗಿರಬಹುದು. ಹಾಗಾಗಿ ರಾಜೀನಾಮೆ ನೀಡಲು ಸಿದ್ಧ ಅಂತಾ ಹೇಳಿದ್ದಾರೆ ಅಷ್ಟೇ ಎಂದು ತಿಳಿಸಿದ್ದಾರೆ. 

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರ ಕೊರತೆಯಿದೆ. ಖಾಸಗಿ ವೈದ್ಯರ ಜೊತೆಗೆ ಚರ್ಚೆ ಮಾಡುತ್ತಿದ್ದೇವೆ. ಕೊರೋನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವದು ಎಂದು ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟಪಡಿಸಿದ್ದಾರೆ. 
 

click me!