'ದೇಶಕ್ಕೆ ಕಾಂಗ್ರೆಸ್‌ ನೀಡಿರುವ ಕೊಡುಗೆಯಾದರೂ ಏನು?'

Kannadaprabha News   | Asianet News
Published : Dec 03, 2020, 12:29 PM IST
'ದೇಶಕ್ಕೆ ಕಾಂಗ್ರೆಸ್‌ ನೀಡಿರುವ ಕೊಡುಗೆಯಾದರೂ ಏನು?'

ಸಾರಾಂಶ

ದೇಶದಲ್ಲಿ ನರೇಂದ್ರ ಮೋದಿ, ಕರ್ನಾಟಕದಲ್ಲಿ ಸಿಎಂ ಯಡಿಯೂರಪ್ಪ ಅವರಿಂದ ಸಾಕಷ್ಟು ಯೋಜನೆ ಜಾರಿ|ಕೇಂದ್ರದಲ್ಲಿ ಅಟಲ್‌ ಬಿಹಾರಿ ವಾಜಪೇಯಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಬಂದು ಅಭಿವೃದ್ಧಿ ಕಾರ್ಯ ಮಾಡಿದರೂ ದುರಾದೃಷ್ಟ ಮತ್ತೆ ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದು 2ಜಿ, 3ಜಿ ಹಗರಣದಲ್ಲಿ ಭೂಮಿ, ಆಕಾಶನೂ ಬಿಡಲಿಲ್ಲ: ಜೊಲ್ಲೆ|  

ಬೆಳಗಾವಿ(ಡಿ.03): ಸ್ವಾತಂತ್ರ್ಯ ನಂತರ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ದೇಶಕ್ಕೆ ನೀಡಿದ ಕೊಡುಗೆ ಏನು? ಕೇವಲ ಗರೀಬಿ ಹಟಾವೋ ಬಿಟ್ಟರೆ ಯಾವುದೇ ಯೋಜನೆ ಮಾಡಲಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. 

ನಗರದ ಧರ್ಮನಾಥ ಭವನದ ಸಭಾಂಗಣದಲ್ಲಿ ಬುಧವಾರ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ನರೇಂದ್ರ ಮೋದಿ, ಕರ್ನಾಟಕದಲ್ಲಿ ಸಿಎಂ ಯಡಿಯೂರಪ್ಪ ಅವರು ಸಾಕಷ್ಟು ಯೋಜನೆಯನ್ನು ಜಾರಿಗೊಳಿಸಿದ್ದಾರೆ. ಅದು ಎಲ್ಲ ಬಿಜೆಪಿ ಕಾರ್ಯಕರ್ತರಿಗೆ ತಿಳಿದಿದೆ ಎಂದು ತಿಳಿಸಿದ್ದಾರೆ. 

ಜೈಲಿನಲ್ಲಿ ವಿನಯ್‌ ಕುಲಕರ್ಣಿಗೆ ಅದೆಲ್ಲವೂ ಸಿಗ್ತಿದೆ..!

ಕೇಂದ್ರದಲ್ಲಿ ಅಟಲ್‌ ಬಿಹಾರಿ ವಾಜಪೇಯಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಬಂದು ಅಭಿವೃದ್ಧಿ ಕಾರ್ಯ ಮಾಡಿದರೂ ದುರಾದೃಷ್ಟ ಮತ್ತೆ ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದು 2ಜಿ, 3ಜಿ ಹಗರಣದಲ್ಲಿ ಭೂಮಿ, ಆಕಾಶನೂ ಬಿಡಲಿಲ್ಲ ಎಂದು ಆರೋಪಿಸಿದ್ದಾರೆ. 
 

PREV
click me!

Recommended Stories

ವಿದ್ಯಾರ್ಥಿನಿಯರ ಮೈಮುಟ್ಟಿ ಅಸಭ್ಯ ವರ್ತನೆ; ಪ್ರೌಢಶಾಲೆಗೆ ನುಗ್ಗಿ ಪ್ರಾಂಶುಪಾಲನಿಗೆ ಧರ್ಮದೇಟು ಕೊಟ್ಟ ಗ್ರಾಮಸ್ಥರು!
ಮೈಸೂರು ಏಕತಾ ಮಹಲ್‌ ವಿವಾದ, ಕೋರ್ಟ್ ಮೆಟ್ಟಲೇರಿದ ರಾಜಮಾತೆ ಪ್ರಮೋದಾದೇವಿ!