* ಗವಿಮಠದ ಯಾತ್ರಿ ನಿವಾಸದಲ್ಲಿ ನಿರ್ಮಾಣಗೊಂಡ 100 ಆಕ್ಸಿಜನ್ ಬೆಡ್ ಆಸ್ಪತ್ರೆ
* ಕೋವಿಡ್-19 ರೋಗಿಗಳ ಆರೋಗ್ಯ ವಿಚಾರಿಸಿದ ಸಚಿವೆ ಜೊಲ್ಲೆ
* ಕೊರೋನಾ ಸೋಂಕಿತರಿಗೆ ಚಿಕಿತ್ಸೆಗೆ ನೆರವಾಗಲು ಕೋವಿಡ್ ಆಸ್ಪತ್ರೆ ನಿರ್ಮಾಣ
ಕೊಪ್ಪಳ(ಜೂ.11): ನಗರದ ಗವಿಮಠ ಕೋವಿಡ್ ಆಸ್ಪತ್ರೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರು ಗುರುವಾರ ಭೇಟಿ ನೀಡಿ, ಪರಿಶೀಲಿಸಿದರು.
ಜಿಲ್ಲೆಯ ಕೊರೋನಾ ಸೋಂಕಿತರಿಗೆ ಚಿಕಿತ್ಸೆಗೆ ನೆರವಾಗಲು ಕೊಪ್ಪಳ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಗವಿಸಿದ್ಧೇಶ್ವರ ಆಯುರ್ವೇದ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಸಹಯೋಗದಲ್ಲಿ ಗವಿಮಠದ ಯಾತ್ರಿ ನಿವಾಸದಲ್ಲಿ ನಿರ್ಮಾಣಗೊಂಡ 100 ಆಕ್ಸಿಜನ್ ಬೆಡ್‌ಗಳ ಕೋವಿಡ್ ಆಸ್ಪತ್ರೆಯನ್ನು ಸಚಿವೆ ಶಶಿಕಲಾ ಜೊಲ್ಲೆ ವೀಕ್ಷಿಸಿದರು.
undefined
ಕೋವಿಡ್‌ನಿಂದ ರಾಜ್ಯದಲ್ಲಿ 32 ಮಕ್ಕಳು ಅನಾಥ: ಸಚಿವೆ ಜೊಲ್ಲೆ
ಬಳಿಕ ಕೋವಿಡ್-19 ರೋಗಿಗಳ ಆರೋಗ್ಯ ವಿಚಾರಿಸಿ, ಅವರಿಗೆ ನೀಡಲಾಗುತ್ತಿರುವ ಚಿಕಿತ್ಸೆ ಹಾಗೂ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು.
ಸಂಸದ ಸಂಗಣ್ಣ ಕರಡಿ, ಗಂಗಾವತಿ ಶಾಸಕರ ಪರಣ್ಣ ಮುನವಳ್ಳಿ, ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ. ಲಿಂಗರಾಜು, ಜಿಲ್ಲಾ ಕ್ಷಯ ನಿರ್ಮೂಲನಾ ಅಧಿಕಾರಿ ಡಾ. ಮಹೇಶ್ ಎಂ.ಜಿ. ಉಪಸ್ಥಿತರಿದ್ದರು.