ಗಂಜಿ ಆಸೆಗೆ ಹೇಳಿಕೆ ಕೊಡೋರನ್ನು ಬಂಧಿಸಿ : ನಟ ಚೇತನ್ ವಿರುದ್ಧ ಸಚಿವ ಹೆಬ್ಬಾರ್ ಕಿಡಿ

By Kannadaprabha News  |  First Published Jun 12, 2021, 7:20 AM IST
  • ಬ್ರಾಹ್ಮಣರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ಖಂಡಿಸುತ್ತೇವೆ
  •  ಸಂವಿಧಾನದಲ್ಲಿ ಪ್ರತಿಯೊಂದು ಧರ್ಮ-ಜಾತಿಗಳಿಗೆ ಸ್ಥಾನಮಾನ ನೀಡಿದ್ದಾರೆ. 
  • ಬಂಧಿಸಿ, ಕಠಿಣ ಕ್ರಮ ಜರುಗಿಸಬೇಕೆಂದು ಮುಖ್ಯಮಂತ್ರಿ ಬಳಿ ಸಚಿವ ಹೆಬ್ಬಾರ್ ಮನವಿ

ಯಲ್ಲಾಪುರ (ಜೂ.12): ಕನ್ನಡ ಚಿತ್ರರಂಗದ ನಟ ಚೇತನ್‌ ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರ ವಿರುದ್ಧ ಅವಹೇಳನಕಾರಿಯಾಗಿ, ಪ್ರಚೋದನಕಾರಿಯಾಗಿ ಮಾತನಾಡಿರುವುದು ಗಮನಕ್ಕೆ ಬಂದಿದ್ದು, ಆತನ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಚಿವ ಶಿವರಾಮ ಹೆಬ್ಬಾರ್‌ ತಿಳಿಸಿದ್ದಾರೆ. 

'ಬೇಷರತ್ ಕ್ಷಮೆ ಕೇಳಬೇಕು' ಚೇತನ್ ವಿರುದ್ಧ ಬ್ರಾಹ್ಮಣ ಮಂಡಳಿ ದೂರು .

Tap to resize

Latest Videos

undefined

ಇದಲ್ಲದೇ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಸಂವಿಧಾನದಲ್ಲಿ ಪ್ರತಿಯೊಂದು ಧರ್ಮ-ಜಾತಿಗಳಿಗೆ ಸ್ಥಾನಮಾನ ನೀಡಿದ್ದಾರೆ. 

'ಸರ್ಕಾರ ಕಾರ್ಪೋರೇಟ್ ಜಗತ್ತಿಗೆ, ಇಂಗ್ಲೀಷ್ ಮಾತಾಡೊರಿಗೆ ಮಾರಾಟ ಆಗೋದನ್ನ ಖಂಡಿಸ್ತೇವೆ' ..

ಸಮಾಜದಲ್ಲಿ ತಾನು ಗುರುತಿಸಿಕೊಳ್ಳಬೇಕು ಅಂತಲೋ, ಗಂಜೀ ಕಾಸಿನ ಆಸೆಗೋ ಹೇಳಿಕೆ ಕೊಡೋ ಇಂತಹ ಸಮಾಜ ಕಂಟಕರನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸಿ, ಕಠಿಣ ಕ್ರಮ ಜರುಗಿಸಬೇಕೆಂದು ಮುಖ್ಯಮಂತ್ರಿ ಬಿ.ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ.

click me!