ಕಾಂಗ್ರೆಸ್ ಮುಖಂಡ ಅನಿಲ್ ಲಾಡ್ ಅವರು ಬಿಜೆಪಿ ಸೇರುವ ಬಗ್ಗೆ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು| ಪಕ್ಷಕ್ಕೆ ಯಾರೆ ಬಂದರೂ ಸ್ವಾಗತ ಇದೆ ಎಂದ ಶ್ರೀರಾಮುಲು| ಅನಿಲ್ ಲಾಡ್ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ವಿಚಾರ ಬಗ್ಗೆ ಈ ಮೊದಲೇ ಮಾತುಕತೆ ನಡೆದಿದ್ದು ನಿಜ| ಸಮಯ ಬಂದಾಗ ಎಲ್ಲವೂ ಗೊತ್ತಾಗಲಿದೆ|
ಕೊಡಗು(ಸೆ. 27) ಕಾಂಗ್ರೆಸ್ ಮುಖಂಡ ಅನಿಲ್ ಲಾಡ್ ಅವರು ಬಿಜೆಪಿ ಸೇರುವ ಬಗ್ಗೆ ಈ ಮೊದಲೇ ಮಾತುಕತೆ ನಡೆದಿತ್ತು, ಪಕ್ಷಕ್ಕೆ ಯಾರೆ ಬಂದರೂ ಸ್ವಾಗತ ಇದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ಹೇಳಿದ್ದಾರೆ.
ಕಾಂಗ್ರೆಸ್ ಮುಖಂಡ ಅನಿಲ್ ಲಾಡ್ ಅವರು ಬಿಜೆಪಿ ಸೇರುತ್ತಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಶುಕ್ರವಾರ ಮಡಿಕೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಶ್ರೀರಾಮುಲು ಅವರು, ಅನಿಲ್ ಲಾಡ್ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ವಿಚಾರ ಈ ಮೊದಲೇ ಮಾತುಕತೆ ನಡೆದಿದ್ದು ನಿಜ, ಪಕ್ಷಕ್ಕೆ ಯಾರೇ ಬಂದರೂ ಸ್ವಾಗತಿಸುತ್ತೇವೆ, ಸಮಯ ಬಂದಾಗ ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದ್ದಾರೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಅನಿಲ್ ಲಾಡ್ ಅವರು ಬಿಜೆಪಿ ಸೇರುವ ವಿಚಾರದ ಬಗ್ಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಜೊತೆ ಚರ್ಚೆಮಾಡಿದ ನಂತರವೇ ತೀರ್ಮಾನ ಕೈಗೊಳ್ಳಲಾಗುತ್ತದೆ. ಈಗಲೇ ಎಲ್ಲವನ್ನೂ ಹೇಳಲು ಸಾಧ್ಯವಿಲ್ಲ, ಸದ್ಯದಲ್ಲೇ ಎಲ್ಲವೂ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.