'ದಸರೆಗೆ ಹೋಗಬೇಕಂದ್ರೆ 5 ದಿನ ಮುಂಚೆ ಕೋವಿಡ್ ಟೆಸ್ಟ್ ಅಗತ್ಯ'

By Kannadaprabha NewsFirst Published Sep 27, 2020, 4:17 PM IST
Highlights

 
ಕೊರೊನಾ ಕಾರಣದಿಂದಾಗಿ ಸರಳ ದಸರಾ ಮಾಡಲು ನಿರ್ಧರಿಸಿದ್ದೇವೆ. ಚಾಮುಂಡಿ ಬೆಟ್ಟದಲ್ಲಿ ನಡೆಯುವ ಉದ್ಘಾಟನಾ ಕಾರ್ಯಕ್ರಮಕ್ಕೆ 250, ಅರಮನೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 1 ಸಾವಿರ, ಜಂಬೂ‌ ಸವಾರಿಗೆ 2 ಸಾವಿರ ಜನ ಸೇರಿಸಲು ಚಿಂತನೆ ನಡೆಸಿದ್ದೇವೆ ಎಂದು ಸಚಿವ ಸೋಮಶೇಖರ್ ಹೇಳಿದರು
 

ಮೈಸೂರು (ಸೆ.27) ಜಂಬೂ ಸವಾರಿಗೆ 2 ಸಾವಿರ ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮಾಹಿತಿ ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಸೋಮಶೇಖರ್ ಕೊರೊನಾ ಕಾರಣದಿಂದಾಗಿ ಸರಳ ದಸರಾ ಮಾಡಲು ನಿರ್ಧರಿಸಿದ್ದೇವೆ. ಚಾಮುಂಡಿ ಬೆಟ್ಟದಲ್ಲಿ ನಡೆಯುವ ಉದ್ಘಾಟನಾ ಕಾರ್ಯಕ್ರಮಕ್ಕೆ 250, ಅರಮನೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 1 ಸಾವಿರ, ಜಂಬೂ‌ ಸವಾರಿಗೆ 2 ಸಾವಿರ ಜನ ಸೇರಿಸಲು ಚಿಂತನೆ ನಡೆಸಿದ್ದೇವೆ ಎಂದರು.

ಕೇಂದ್ರ ಸರ್ಕಾರದ ಮಾರ್ಗಸೂಚಿ ಕೈ ಸೇರಿದ ನಂತರ ಈ ಬಗ್ಗೆ ಸ್ಪಷ್ಟ ತೀರ್ಮಾನ ಆಗಲಿದೆ. ಜಂಬೂ ಸವಾರಿಗೆ ಭಾಗವಹಿಸುವ ಕಲಾವಿದರಿಗೂ ಕೋವಿಡ್ ಟೆಸ್ಟ್ ಮಾಡಲಾಗುವುದು.  ದಿನ ಮುಂಚಿತವಾಗಿ ಟೆಸ್ಟ್‌ ಮಾಡಿಸಿಕೊಂಡ ಕಲಾವಿದರಿಗೆ ಮಾತ್ರ ಅವಕಾಶ ನೀಡಲಾಗುವುದು.  ದಸರಾ ಪರಂಪರೆಯಾಗಿ ಮುಂದುವರಿದುಕೊಂಡು ಬಂದಿದೆ.  ಹೀಗಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಬೇಕಾಗುತ್ತೆ.  ವಿಚಾರದಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ. ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು

 ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್ ವಿತರಣೆ

  ಶ್ರೀರಾಮಕೃಷ್ಣ ಆಶ್ರಮದಲ್ಲಿ ಹಮ್ಮಿಕೊಂಡಿದ್ದ ಹಚ್ಚಹಸಿರು ಮೈಸೂರು, ವಿವೇಕಪ್ರಭೆಯ ಮೈಸೂರು ಕಾರ್ಯಕ್ರಮಕ್ಕೆ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು.  ಇದೇ ವೇಳೆ ಕೊರೋನಾ ವಾರಿಯರ್ಸ್ ಆಗಿ ದುಡಿದ ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್ ಗಳನ್ನು ವಿತರಣೆ ಮಾಡಲಾಯಿತು.

ಶ್ರೀ ರಾಮಕೃಷ್ಣ ಆಶ್ರಮದ ಮುಕ್ತಿದಾನಂದ ಜಿ ಮಹಾರಾಜ್, ಪ್ರಕೃತಿಯಿಂದಾದ ಸಮಸ್ಯೆಗಳನ್ನು ಪ್ರಕೃತಿ ಸರಿಮಾಡಿಕೊಳ್ಳುತ್ತದೆ. ಆದರೆ, ಮಾನವ ಮಾಡುವ ತಪ್ಪುಗಳನ್ನು ಆತನೇ ಸರಿಪಡಿಸಿಕೊಳ್ಳಬೇಕು. ಹೀಗಾಗಿ ಮೈಸೂರನ್ನು ಹಸಿರೀಕರಣ ಮಾಡಿ ಪ್ರತಿಮನೆಗೆ ಸ್ವಚ್ಛ ಉಸಿರನ್ನು ಕೊಡುವ ಕೆಲಸವನ್ನು ಆಶ್ರಮದ ಮೂಲಕ ಮಾಡುತ್ತಿದ್ದೇವೆ ಎಂದು ಹೇಳಿದರು. 

ಔಷಧೀಯ ಸಸ್ಯಗಳು ಸೇರಿದಂತೆ ಅತ್ಯವಶ್ಯಕ ಸಸಿಗಳನ್ನು ಕೊಡುವ ನಿಟ್ಟಿನಲ್ಲಿ ಆಶ್ರಮ ಮುಂದಾಗಿದ್ದು, ಒಟ್ಟು 8 ಸಸ್ಯಗಳನ್ನು ಪ್ರತಿ ಮನೆಗೆ ವಿತರಣೆ ಮಾಡಲಾಗುತ್ತಿದೆ. ಈ ಮೂಲಕ ಜವಾಬ್ದಾರಿ ಬೆಳೆಸುವ ಕಾರ್ಯಕ್ಕೆ ಮುಂದಾಗಲಾಗಿದೆ. ಅಲ್ಲದೆ ಶಿಕ್ಷಣದ ಮೂಲಕ ವಿವೇಕವನ್ನು ಮೂಡಿಸುವ ಕೆಲಸವೂ ಆಗುತ್ತಿದೆ ಎಂದು ತಿಳಿಸಿದರು.

ಸಂಸದರಾದ ಪ್ರತಾಪ್ ಸಿಂಹ, ಸಚಿವರಾದ ಸೋಮಶೇಖರ್ ಅವರು ಉಸ್ತುವಾರಿ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡಾಗ ಕೊರೋನಾ ಉಚ್ಛ್ರಾಯ ಪರಿಸ್ಥಿತಿಯಲ್ಲಿತ್ತು. ಆಗ ಕೊರೋನಾ ಮುಕ್ತ ಮಾಡುವಲ್ಲಿ ಶ್ರಮಿಸುವ ಜೊತೆ ಜೊತೆಗೆ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿದ್ದಾರೆ. ಇದರ ಪರಿಣಾಮವಾಗಿ ಹಸಿರು ಮೈಸೂರು ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದ್ದರು. ಇದಕ್ಕೆ ಪೂರಕವಾಗಿ ರಾಮಕೃಷ್ಣ ಆಶ್ರಮದವರು ಕೈಜೋಡಿಸಿ ಹಚ್ಚಹಸಿರ ಮೈಸೂರು ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಹೇಳಿದರು. 

ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಆಶ್ರಮದ ವತಿಯಿಂದ ವಿತರಣೆ ಮಾಡಲಾಯಿತು. ಶಾಸಕರಾದ ನಾಗೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

click me!