ಶಿವಮೊಗ್ಗದಲ್ಲಿ ಮಂಗನ ಕಾಯಿಲೆ ಮಹಾಮಾರಿ ತನ್ನ ಆರ್ಭಟ ಹೆಚ್ಚಾಗಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ಶ್ರೀ ರಾಮುಲು ಭರವಸೆ ನೀಡಿದ್ದಾರೆ.
ಶಿವಮೊಗ್ಗ [ಮಾ.18]: ವಿಶ್ವದಾದ್ಯಂತ ಕೊರೋನಾ ಮಹಾಮಾಹರಿ ಹೆಚ್ಚಾದರೆ ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆ ತನ್ನ ಅಟ್ಟಹಾಸ ಮೆರೆಯುತ್ತಿದೆ.
ಈಗಾಗಲೇ ಮಂಗನ ಕಾಯಿಲೆಗೆ ನಾಲ್ವರು ಬಲಿಯಾಗಿದ್ದು, 80ಕ್ಕೂ ಹೆಚ್ಚು ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಂಡು ಚಿಕಿತ್ಸೆಗೆ ನೆರವಾಗುವುದಾಗಿ ಭರವಸೆ ನೀಡಿದೆ.
ಈ ಬಗ್ಗೆ ಆರೋಗ್ಯ ಶ್ರೀ ರಾಮುಲು ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಾಗಿರುವ ಮಂಗನ ಕಾಯಿಲೆ ಬಗ್ಗೆ ವಿಧಾನಸಭೆಯಲ್ಲಿ ಶಾಸಕರಾದ ಹರತಾಳು ಹಾಲಪ್ಪ ತಮ್ಮ ಗಮನ ಸೆಳೆದಿದ್ದು, ಈ ಬಗ್ಗೆ ಆರೋಗ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಹಿರಿಯ ಅದಿಕಾರಿಗಳೊಂದಿಗೆ ಸಭೆ ನಡೆಸಿ, ಕೂಡಲೇ ಜಾರಿಗೆ ಬರುವಂತೆ ಕೆಲ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಮಂಗಳೂರಲ್ಲಿ ಶೀಘ್ರ ವೈರಾಣು ಪತ್ತೆ ಪರೀಕ್ಷಾ ಕೇಂದ್ರ'..
ಅಲ್ಲದೇ ಕೂಡಲೆ ಎಲ್ಲಾ ಆರೋಗ್ಯಾಧಿಕಾರಿಗಳು ಕಾರ್ಯಪ್ರವೃತ್ತರಾಗಿ ರೋಗಿಗಳಿಗೆ ಎಲ್ಲಾ ರೀತಿಯ ನೆರವು ನೀಡಿ ಯಾವುದೇ ಕೊರತೆ ಆಗದಂತೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
*ಮಣಿಪಾಲ್ ಆಸ್ಪತ್ರೆ ಹಿಂದಿನ ವರ್ಷದ ಬಾಕಿ ಇರುವ ಬಿಲ್ಲುಗಳನ್ನು ಇಲಾಖೆಯಿಂದ ಮರು ಪಾವತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಹಾಗೂ ಹಿಂದಿನಂತೆ ಮಣಿಪಾಲ ಆಸ್ಪತ್ರೆಗೆ ರೆಫರ್ ಮಾಡಲು ಸೂಚಿಸಲಾಗಿದೆ.
*ಈ ವರ್ಷವೂ ಸಹ ಸಾಗರ ತಾಲೂಕು ಹಾಗೂ ಕೊಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಂಬುಲೆನ್ಸ್ ನಿಯೋಜಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಮಾರ್ಚ್ 16 ರಂದು ವಿಧಾನಸಭೆಯಲ್ಲಿ ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ತಮ್ಮ ಜಿಲ್ಲೆಯಲ್ಲಿ ಆಗುತ್ತಿರುವ ಸಾವು ನೋವು ಹಾಗೂ ಈ ಬಗ್ಗೆ ಸರ್ಕಾರದ ನಿರ್ಲಕ್ಷ್ಯದ ಬಗ್ಗೆ ಅಸಮಾಧಾನ ಹೊರಹಾಕಿದ್ದರು.