ಮೈಸೂರು(ಜೂ.10): ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಬಡಕುಟುಂಬದವರಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಇಂದು ನಡೆದ ಸರಳ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧಮಾ೯ಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮೈಸೂರು ಜಿಲ್ಲಾ ಆಡಳಿತಕ್ಕೆ ಕಳುಹಿಸಿ ಕೊಟ್ಟ 5.5 ಟನ್ ಆಮ್ಲಜನಕ, SMT ಆಸ್ಪತ್ರೆಗೆ 1ವೆಂಟಿಲೇಟರ್ ಜಿಲ್ಲಾಡಳಿತಕ್ಕೆ ಸಚಿವರು ಹಸ್ತಾಂತರಿಸಿದರು.
undefined
ಜನರ ರಕ್ಷಣೆಗೆ ಟೊಂಕ ಕಟ್ಟಿ ನಿಂತ ಸಚಿವ ಸೋಮಶೇಖರ್, ಇವರ ಕಾರ್ಯ ಮೆಚ್ಚಿ ಬಿಜೆಪಿ ಸೇರಿದ ಮುಖಂಡ ...
ಅಲ್ಲದೇ ಈ ವೇಳೆ ಕೋವಿಡ್ ಸಂಕಷ್ಟಕ್ಕೆ ಒಳಗಾಗಿರುವ ಹಲವಾರು ಬಡಕುಟುಂಬಗಳಿಗೆ ಈ ವೇಳೆ ಆಹಾರ ಕಿಟ್‌ಗಳನ್ನು ವಿತರಿಸುವ ಕಾರ್ಯಕ್ಕೂ ಚಾಲನೆ ದೊರೆಯಿತು.
ಈ ಸಂದರ್ಭದಲ್ಲಿ ಮುಡಾ ಅಧ್ಯಕ್ಷರಾದ ಹೆಚ್.ವಿ.ರಾಜೀವ್, ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಲ್ಲಾ ಪಂಚಾಯತಿ ಸಿ.ಇ.ಒ. ಎ.ಎಂ.ಯೋಗೀಶ್, ಮಹಾನಗರ ಪಾಲಿಕೆಯ ಆಯುಕ್ತ ಲಕ್ಷ್ಮಿಕಾಂತ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ಡಾ. ಮಂಜುನಾಥಸ್ವಾಮಿ, ಗ್ರಂಥಾಲಯ ಉಪ ನಿರ್ದೇಶಕ ಹಾಗೂ ಆಕ್ಸಿಜನ್ ನೋಡಲ್ ಅಧಿಕಾರಿ ಬಿ. ಮಂಜುನಾಥ್, ಮತ್ತಿತರರು ಉಪಸ್ಥಿತರಿದ್ದರು.