ಅಗತ್ಯಕ್ಕನುಗುಣವಾಗಿ ಜಿಲ್ಲೆಗಳಿಗೆ ಆಕ್ಸಿಜನ್ ಹಂಚಿಕೆ : ST ಸೋಮಶೇಖರ್

By Suvarna NewsFirst Published May 10, 2021, 2:55 PM IST
Highlights
  • ಜಿಲ್ಲೆಗಳಿಗೆ ಅಗತ್ಯಕ್ಕೆ ಅನುಗುಣವಾಗಿ  ಆಕ್ಸಿಜನ್ ಹಂಚಿಕೆ 
  • ಮೈಸೂರಿನಲ್ಲಿ ಜೆ.ಎಸ್.ಎಸ್. ಆಸ್ಪತ್ರೆಯಲ್ಲಿ  ಆಮ್ಲಜನಕ ಸಹಿತ ಹಾಸಿಗೆ ಹೆಚ್ಚಳ ಮಾಡಲು
  • ಆಕ್ಸಿಜನ್ ಕೊರತೆ ನೀಗಿಸಲು ಗುಜರಾತ್ ಕಂಪನಿಯೊಂದಿಗೆ ಒಡಂಬಡಿಕೆ

ಮೈಸೂರು ಮೇ(10): ಆಕ್ಸಿಜನ್ ಸಮಸ್ಯೆ ನಿವಾರಣೆಗೆ ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಜಿಲ್ಲೆಗೆ ಅಗತ್ಯಕ್ಕೆ ಅನುಗುಣವಾಗಿ  ಆಕ್ಸಿಜನ್ ಹಂಚಿಕೆ ಮಾಡಲು ಮುಖ್ಯಮಂತ್ರಿ , ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್, ಆರೋಗ್ಯ ಸಚಿವ  ಡಾ. ಸುಧಾಕರ್ ಅವರೊಂದಿಗೆ ಮಾತನಾಡಿದ್ದಾಗಿ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.

ಮೈಸೂರಿನಲ್ಲಿ ಜೆ.ಎಸ್.ಎಸ್. ಆಸ್ಪತ್ರೆಯಲ್ಲಿ  ಆಮ್ಲಜನಕ ಸಹಿತ ಹಾಸಿಗೆ ಹೆಚ್ಚಳ ಮಾಡಲು ಸುತ್ತೂರು ಶ್ರೀಗಳೊಂದಿಗೆ ಇಂದು ಸಭೆ ನಡೆಸಿದ ನಂತರ ಮಾತನಾಡಿದ ಅವರು ಜೆ.ಎಸ್.ಎಸ್.ನಲ್ಲಿ 417 ಹಾಸಿಗೆಗಳನ್ನು ಕೊಟ್ಟಿದ್ದಾರೆ. ಇದರಲ್ಲಿ 100 ಆಮ್ಲಜನಕ ಸಹಿತ ಹಾಸಿಗೆಗಳು ಇವೆ. ಈ ಆಕ್ಸಿಜನೇಟೆಡ್ ಹಾಸಿಗೆಗಳ ಪ್ರಮಾಣವನ್ನು ಹಂತ ಹಂತವಾಗಿ ಹೆಚ್ಚಿಸುವಂತೆ ಕಳೆದ ವಾರ ಶ್ರೀಗಳನ್ನು ಭೇಟಿ ಮಾಡಿ ಕೇಳಿದ್ದೆವು,  ಶ್ರೀಗಳು ಸ್ಪಂದಿಸಿದ್ದಾರೆ ಎಂದರು. 

ಮೈಸೂರು : ಬೇರೆ ಜಿಲ್ಲೆಯಿಂದ ಬರುವವರೆಗೆ ಪ್ರವೇಶ ನಿಷೇಧ ...

ಆಕ್ಸಿಜನೇಟೆಡ್ ಹಾಸಿಗೆ ಹೆಚ್ಚಿಸಿದರೆ ಆಕ್ಸಿಜನ್ ಪೂರೈಕೆಯನ್ನು ಹೆಚ್ಚಿಸುವಂತೆ ಕೇಳಿದ್ದಾರೆ. ಇದರ ಉಸ್ತುವಾರಿ ನೋಡಿಕೊಳ್ಳುವ ಪ್ರತಾಪ್ ಸಿಂಹ ಅವರು ಅದರಂತೆ ಕ್ರಮವಹಿಸುವರು ಎಂದರು.

ಆಕ್ಸಿಜನ್ ಕೊರತೆ ನೀಗಿಸಲು ಜೆಎಸ್‌ಎಸ್‌ ಆಸ್ಪತ್ರೆಯಲ್ಲಿ ಲಿಕ್ವಿಡ್ ಆಕ್ಸಿಜನ್ ಘಟಕ ಹೆಚ್ಚಿಸಲು ಗುಜರಾತ್‌ನ ಕಂಪನಿಯೊಂದಿಗೆ ಜೆ‌‌ಎಸ್‌ಎಸ್ ಒಡಂಬಡಿಕೆ ಮಾಡಿಕೊಂಡಿದೆ. ಘಟಕ ಗುಜರಾತ್ ನಿಂದ ಬರಲು ಉಂಟಾಗಿರುವ ಸಮಸ್ಯೆಯನ್ನು ನಿವಾರಿಸಲು ಕ್ರಮವಹಿಸಲಾಗುವುದು ಎಂದರು. 

ಆಂಬುಲೆನ್ಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ ಕೊರೋನಾ ಸೋಂಕಿತೆ : ಇಬ್ಬರೂ ಸುರಕ್ಷಿತ

ಈ ವೇಳೆ ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್. ನಾಗೇಂದ್ರ, ಮುಡಾ ಅಧ್ಯಕ್ಷ ಹೆಚ್.ವಿ‌.ರಾಜೀವ್, ಅಪರ ಜಿಲ್ಲಾಧಿಕಾರಿ ಡಾ. ಬಿ.ಎಸ್.ಮಂಜುನಾಥಸ್ವಾಮಿ, ಅಧ್ಯಕ್ಷರುಗಳಾದ  ರಘು, ಅಪ್ಪಣ್ಣ, ಶ್ರೀವತ್ಸ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

"

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

click me!