ಬಾಬು ಜಗಜೀವನ್ ರಾಂ ಅವರ ಪುಣ್ಯ ಸ್ಮರಣೆ : ಎಸ್.ಟಿ.ಸೋಮಶೇಖರ್ ಮಾಲಾರ್ಪಣೆ

Suvarna News   | Asianet News
Published : Jul 06, 2021, 01:40 PM IST
ಬಾಬು ಜಗಜೀವನ್ ರಾಂ ಅವರ ಪುಣ್ಯ ಸ್ಮರಣೆ :  ಎಸ್.ಟಿ.ಸೋಮಶೇಖರ್ ಮಾಲಾರ್ಪಣೆ

ಸಾರಾಂಶ

ಹಸಿರು ಕ್ರಾಂತಿಯ ಹರಿಕಾರ ಶ್ರೀ ಬಾಬು ಜಗಜೀವನ್ ರಾಂ ಅವರ 35ನೇ ವರ್ಷದ ಪುಣ್ಯಸ್ಮರಣೆ ಬಾಬು ಜಗಜೀವನ್ ರಾಂ ಅವರ ಪುತ್ಥಳಿಗೆ ಮಾಲಾರ್ಪಣೆ  ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್  ಮಾಲಾರ್ಪಣೆ

ಮೈಸೂರು (ಜು.06): ಹಸಿರು ಕ್ರಾಂತಿಯ ಹರಿಕಾರ ಶ್ರೀ ಬಾಬು ಜಗಜೀವನ್ ರಾಂ ಅವರ 35ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಮಂಗಳವಾರ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಬಾಬು ಜಗಜೀವನ್ ರಾಂ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು. 

ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಸರಳವಾಗಿ ಆಚರಿಸಲಾಗುತ್ತಿದೆ. ಜಿಲ್ಲೆಯಲ್ಲಿ ಹಂತ ಹಂತವಾಗಿ ಕೋವಿಡ್ ಕಡಿಮೆಯಾಗುತ್ತಿದೆ. ಈ ಕಾರಣಕ್ಕಾಗಿ ಬಾಬು ಜಗಜೀವನ್ ರಾಂ ಅವರ ಜಯಂತಿಯನ್ನು ಸರಳವಾಗಿ ಮಾಡಲಾಗುತ್ತಿದೆ ಎಂದರು.

ಸಂಕಷ್ಟದಲ್ಲಿ ಸಹಕಾರ ನೀಡಿದವರಿಗೆ ಶೀಘ್ರ ಸನ್ಮಾನಿಸಿ ಅಭಿನಂದನೆ : ಎಸ್.ಟಿ.ಸೋಮಶೇಖರ್ ...

ಸಸಿ ನೆಡುವ ಕಾರ್ಯಕ್ರಮಗಳಿಗೆ ಚಾಲನೆ:- ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಸ್ಮರಣಾರ್ಥ ದಟ್ಟಗಳ್ಳಿಯ ಮಹಾಮನೆ ವೃತ್ತದ ಉದ್ಯಾನವನದಲ್ಲಿ, ಹಾಗೂ ಕುವೆಂಪು ನಗರದ ಬಿ.ಸಿ.ಎಂ ಇಲಾಖೆಯ ಮಹಿಳಾ ಹಾಸ್ಟೆಲ್ನಲ್ಲಿ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು  ಸಸಿಗಳನ್ನು  ನೆಟ್ಟು ನೀರು ಹಾಕಿದರು. ವಿಜಯನಗರದ 4ನೇ ಹಂತದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ 15 ಸಾವಿರ ಗಿಡ ನೆಡುವ ಕಾರ್ಯಕ್ರಮಗಳಿಗೆ ಉಸ್ತುವಾರಿ ಸಚಿವರು ಚಾಲನೆ ನೀಡಿದರು. ನಂತರ  ಹೆಬ್ಬಾಳುನಲ್ಲಿ ನೂತವಾಗಿ ನಿರ್ಮಾಣವಾದ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅನ್ನು ಉದ್ಘಾಟಿಸಿದರು.

ರಸಗೊಬ್ಬರ ಮತ್ತು ಬಿತ್ತನೆ ಬೀಜದ ಕೊರತೆ ಇಲ್ಲ: ರೈತರಿಗೆ ಸಚಿವರ ಅಭಯ

ಕಾರ್ಯಕ್ರಮಗಳಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್.ನಾಗೇಂದ್ರ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ರಾಜೀವ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ.ಡಿ.ಬಿ.ನಟೇಶ್, ಅರಗು ಮತ್ತು ಬಣ್ಣದ ಕಾರ್ಖಾನೆಯ ಅಧ್ಯಕ್ಷ ಫಣೀಶ್,  ಮುಖಂಡ ಶ್ರೀವತ್ಸ, ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ ಸೇರಿದಂತೆ ಇತರರು ಹಾಜರಿದ್ದರು.

PREV
click me!

Recommended Stories

ವೃದ್ಧೆಯ ಕೇರ್ ಟೇಕರ್‌ನಿಂದಲೇ ₹31 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಬಿಹಾರ ಮೂಲದ ಚಾಂದಿನಿ ಬಂಧನ!
ಡೆವಿಲ್ ಬ್ಯಾನರ್‌ನಲ್ಲಿ 'ಡಾ.ಅಂಬೇಡ್ಕರ್ ತಲೆಮೇಲೆ ಕೊಲೆ ಆರೋಪಿ' ಕೂರಿಸಿದ ಅಂದಾಭಿಮಾನಿಗಳು!