ಜನತಾ ಕರ್ಫ್ಯೂ ಪ್ಯಾಕೇಜ್‌ ಚರ್ಚೆ ಆಗಿಲ್ಲ: ಸಚಿವ ಎಸ್‌ಟಿಎಸ್‌

By Kannadaprabha News  |  First Published Apr 28, 2021, 7:12 AM IST

ಸಹಕಾರ ಕ್ಷೇತ್ರದ ಬ್ಯಾಂಕ್‌ಗಳ ಸಾಲ ಮನ್ನಾ, ಬಡ್ಡಿ ಮನ್ನಾ ಇಲ್ಲ| ಈ ರೀತಿಯ ಯಾವ ಪ್ರಸ್ತಾವನೆಯೂ ನಮ್ಮ ಮುಂದೆ ಇಲ್ಲ| ಇಂದಿನ ಪರಿಸ್ಥಿತಿ ನಿಭಾಯಿಸುವುದು ಅಷ್ಟೇ ನಮ್ಮ ಗುರಿ. ತಾಂತ್ರಿಕ ಸಲಹಾ ಸಮಿತಿ ಸಲಹೆಯಂತೆ ಜನತಾ ಕರ್ಫ್ಯೂ: ಸೋಮಶೇಖರ್‌| 


ಮೈಸೂರು(ಏ.28): ರಾಜ್ಯದಲ್ಲಿ ಜನತಾ ಕರ್ಫ್ಯೂ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ವಲಯಕ್ಕೂ ಯಾವ ಪ್ಯಾಕೇಜ್‌ ಬಗ್ಗೆ ಚರ್ಚೆ ಆಗಿಲ್ಲ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಸ್ಪಷ್ಟಪಡಿಸಿದ್ದಾರೆ. 

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಹಕಾರ ಕ್ಷೇತ್ರದ ಬ್ಯಾಂಕ್‌ಗಳ ಸಾಲ ಮನ್ನಾ, ಬಡ್ಡಿ ಮನ್ನಾ ಇಲ್ಲ. ಈ ರೀತಿಯ ಯಾವ ಪ್ರಸ್ತಾವನೆಯೂ ನಮ್ಮ ಮುಂದೆ ಇಲ್ಲ ಎಂದು ಸ್ಪಷ್ಪಡಸಿದ್ದಾರೆ.

Tap to resize

Latest Videos

14 ದಿನ ಕರ್ನಾಟಕ ಲಾಕ್‌ಡೌನ್: ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ಇಂದಿನ ಪರಿಸ್ಥಿತಿ ನಿಭಾಯಿಸುವುದು ಅಷ್ಟೇ ನಮ್ಮ ಗುರಿ. ತಾಂತ್ರಿಕ ಸಲಹಾ ಸಮಿತಿ ಸಲಹೆಯಂತೆ ಜನತಾ ಕರ್ಫ್ಯೂ ಮಾಡಲಾಗಿದೆ. ಇದು ಜನರ ಹಿತದೃಷ್ಟಿಯಿಂದ ತೆಗೆದುಕೊಂಡ ಕ್ರಮ ಎಂದು ಅವರು ಹೇಳಿದರು.
 

click me!