ತಾಯಿ ಮೃತಪಟ್ಟಿದ್ದರೂ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮೌಲ್ಯಮಾಪನಕ್ಕೆ ಹಾಜರಾಗಿ ವೃತ್ತಿ ಬದ್ಧತೆ ಮೆರೆದಿದ್ದ ಮಡಿಕೇರಿ ತಾಲೂಕಿನ ಬೆಟ್ಟಗೇರಿ ಉದಯ ವಿದ್ಯಾ ಸಂಸ್ಥೆಯ ಶಿಕ್ಷಕಿ ಕವಿತಾ ಅವರಿಗೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಶಿಕ್ಷಣ ಇಲಾಖೆಯ ಪರವಾಗಿ ಧನ್ಯವಾದ ತಿಳಿಸಿದ್ದಾರೆ.
ಮಡಿಕೇರಿ(ಜು.15): ತಾಯಿ ಮೃತಪಟ್ಟಿದ್ದರೂ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮೌಲ್ಯಮಾಪನಕ್ಕೆ ಹಾಜರಾಗಿ ವೃತ್ತಿ ಬದ್ಧತೆ ಮೆರೆದಿದ್ದ ಮಡಿಕೇರಿ ತಾಲೂಕಿನ ಬೆಟ್ಟಗೇರಿ ಉದಯ ವಿದ್ಯಾ ಸಂಸ್ಥೆಯ ಶಿಕ್ಷಕಿ ಕವಿತಾ ಅವರಿಗೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಶಿಕ್ಷಣ ಇಲಾಖೆಯ ಪರವಾಗಿ ಧನ್ಯವಾದ ತಿಳಿಸಿದ್ದಾರೆ.
ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷÜ್ಯವೂ ಮುಖ್ಯ ಎಂಬ ಭಾವನೆಯಿಂದ ತನ್ನ ವೈಯಕ್ತಿಕ ನೋವು ನುಂಗಿಕೊಂಡು ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನಕ್ಕೆ ಹಾಜರಾಗಿರುವ ಮಡಿಕೇರಿ ತಾಲೂಕಿನ ಶಿಕ್ಷಕಿ ಕವಿತಾರಿಗೆ ಶಿಕ್ಷಣ ಇಲಾಖೆಯ ಪರವಾಗಿ ಧನ್ಯವಾದಗಳು. ಇವರು ಕೇವಲ ಶಿಕ್ಷಕಿ ಮಾತ್ರವಲ್ಲ. ಎಸ್‌ಎಸ್‌ಎಲ್‌ಸಿ ಮಕ್ಕಳ ತಾಯಿಯೂ ಹೌದು ಎಂದು ತೋರಿದ್ದಾರೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
'ಪರೀಕ್ಷೆ ಹೇಗಾಯ್ತು..? ಫೋನಲ್ಲೇ ಪಾಯಸ ಕಳಿಸಲಾ..'? ವಿದ್ಯಾರ್ಥಿನಿಗೆ ಸಚಿವರ ಕಾಲ್
ಸೋಮವಾರ ತಾಯಿ ಮೃತಪಟ್ಟಿದ್ದರೂ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮೌಲ್ಯ ಮಾಪನಕ್ಕೆ ಹಾಜರಾಗುವ ಮೂಲಕ ಈ ಶಿಕ್ಷಕಿ ವೃತ್ತಿ ಬದ್ಧತೆ ತೋರಿದ್ದರು.
ಶಿಕ್ಷಕಿ ಕವಿತಾ ಅವರಿಗೆ ವಸತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಕೂಡ ಪ್ರಶಂಸಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ತಡವಾಗಿ ನಡೆದಿವೆ. ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಶಿಕ್ಷಕಿ ಕವಿತಾ ಅವರು ತಮ್ಮ ತಾಯಿ ನಿಧನರಾಗಿದ್ದರೂ ಮೌಲ್ಯಮಾಪನಕ್ಕೆ ಹಾಜರಾಗಿ ವಿದ್ಯಾರ್ಥಿಗಳ ಭವಿಷ್ಯದ ಬಗೆಗಿನ ಅವರ ಕಾಳಜಿಯನ್ನು ಮತ್ತು ಕರ್ತವ್ಯ ನಿಷ್ಠೆಯನ್ನು ಮೆರೆದಿದ್ದಾರೆ. ವೃತ್ತಿಯಲ್ಲಿ ತೃಪ್ತಿ ಕಾಣುವ ಕವಿತಾ ಅವರ ಈ ಕಾರ್ಯ ನಿಜಕ್ಕೂ ಶ್ಲಾಘನೀಯ ಮತ್ತು ಇತರರಿಗೂ ಮಾದರಿಯಾಗಿದೆ ಎಂದು ವಸತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.