ಮೆಟ್ರೋದಿಂದ ಕನ್ನಡ ನಿರ್ಲಕ್ಷ್ಯ: ಕ್ರಮಕ್ಕೆ ಸಚಿವ ಸುನಿಲ್ ಸೂಚನೆ

By Kannadaprabha NewsFirst Published Sep 2, 2021, 3:34 PM IST
Highlights

*   ಕನ್ನಡ ಭಾಷೆಯ ಕಡೆಗಣನೆಗೆ ತೀವ್ರ ಟೀಕೆ
*   ಕಾರಣರಾದ ಅಧಿಕಾರಿಗಳ ಮೇಲೆ ಕೂಡಲೇ ಶಿಸ್ತು ಕ್ರಮ 
*   ಕನ್ನಡ ಅಧಿಕೃತ ಆಡಳಿತ ಭಾಷೆಯೆಂದು ಘೋಷಿಸಿದ್ದರೂ ಅಧಿಕಾರಿಗಳ ಕಡೆಗಣನೆ
 

ಬೆಂಗಳೂರು(ಸೆ.02): ನಾಯಂಡಹಳ್ಳಿ-ಕೆಂಗೇರಿ ನಡುವಿನ ರೈಲು ಸಂಚಾರದ ಉದ್ಘಾಟನಾ ಸಮಾರಂಭದಲ್ಲಿ ಕನ್ನಡ ಭಾಷೆಯ ಕಡೆಗಣನೆ ಮಾಡಿ ತೀವ್ರ ಟೀಕೆಗೆ ಗುರಿಯಾಗಿರುವ ಬಿಎಂಆರ್‌ಸಿಎಲ್ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಸೂಚಿಸಿದ್ದಾರೆ. 

ಬುಧವಾರ ಈ ಕುರಿತು ಮೆಟ್ರೋ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿರುವ ಅವರು, ಕನ್ನಡ ಅಧಿಕೃತ ಆಡಳಿತ ಭಾಷೆಯೆಂದು ಘೋಷಿಸಿದ್ದರೂ ಅಧಿಕಾರಿಗಳು ಕಡೆಗಣಿಸಿರುವುದನ್ನು ಸಹಿಸುವುದಿಲ್ಲ. ಸರ್ಕಾರ ಇದನ್ನುಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ. 

ಕೆಂಗೇರಿ ಮೆಟ್ರೋ ಆರಂಭ: ವೇದಿಕೆಯಲ್ಲಿ ಕನ್ನಡವೇ ಮಾಯ!

ಇದಕ್ಕೆ ಕಾರಣರಾದ ಅಧಿಕಾರಿಗಳ ಮೇಲೆ ಕೂಡಲೇ ಶಿಸ್ತು ಕ್ರಮ ಕೈಗೊಳ್ಳಬೇಕು. ಜೊತೆಗೆ ಇದಕ್ಕೆ ಸೂಕ್ತ ವಿವರಣೆ ನೀಡಬೇಕು ಎಂದು ಪತ್ರದಲ್ಲಿ ಸಚಿವ ವಿ. ಸುನಿಲ್ ಕುಮಾರ್ ಎಚ್ಚರಿಸಿದ್ದಾರೆ.
 

click me!