ಲೋಕೋಪಯೋಗಿ ಇಲಾಖೆ ಎಇಇಗೆ ಬೂಟಿನಿಂದ ಹೊಡೆಯುತ್ತೇನೆಂದ ಉಮೇಶ್ ಕತ್ತಿ!

By Suvarna News  |  First Published Aug 11, 2022, 2:56 AM IST

ಬುರಣಾಪುರ ಬಳಿ ನಿರ್ಮಾಣ ಹಂತದ ವಿಮಾನ ನಿಲ್ದಾಣ ಕಾಮಗಾರಿ ಮಾರ್ಚ್ ಒಳಗಾಗಿ ಪೂರ್ಣಗೊಳಿಸಿದರೆ ಹೂವಿನ ಹಾರ ಹಾಕುವೆ. ಇಲ್ಲದಿದ್ದರೆ ಬೂಟಿನಿಂದ ಹೊಡೆಯುವೆ ಎಂದು  ಸಚಿವ ಉಮೇಶ ಕತ್ತಿ ಅವಾಚ್ಯವಾಗಿ ಎಚ್ಚರಿಕೆ ನೀಡಿದ ಪ್ರಸಂಗ ನಡೆದಿದೆ.


ವಿಜಯಪುರ (ಆ.10): ನಗರ ಹೊರ ವಲಯದ ಬುರಣಾಪುರ ಬಳಿ ನಿರ್ಮಾಣ ಹಂತದ ವಿಮಾನ ನಿಲ್ದಾಣ ಕಾಮಗಾರಿ ಮಾರ್ಚ್ ಒಳಗಾಗಿ ಪೂರ್ಣಗೊಳಿಸಿದರೆ ಹೂವಿನ ಹಾರ ಹಾಕುವೆ. ಇಲ್ಲದಿದ್ದರೆ ಬೂಟಿನಿಂದ ಹೊಡೆಯುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಅವರು ಲೋಕೋಪಯೋಗಿ ಇಲಾಖೆಯ ಅಭಿಯಂತರಗೆ ಅವಾಚ್ಯವಾಗಿ ಎಚ್ಚರಿಕೆ ನೀಡಿದ ಪ್ರಸಂಗ ಬುಧವಾರ ಸಂಜೆ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಅವರು ಬುರಣಾಪುರ ಬಳಿ ನಡೆದಿರುವ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ವೇಳೆ ಲೋಕೋಪಯೋಗಿ ಇಲಾಖೆ ಅಭಿಯಂತರ ಅವರು ನವೆಂಬರ್‌ ಇಲ್ಲವೆ ಡಿಸೆಂಬರ್‌ ವೇಳೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ವಿವರಿಸಿದರು. ಈ ವೇಳೆ ಸಚಿವ ಕತ್ತಿ ಅವರು ನವೆಂಬರ್‌, ಡಿಸೆಂಬರ್‌ ಬೇಡ. ಮಾಚ್‌ರ್‍ನಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಬೇಕು. ಆಗ ನಾನು ಹೂವಿನ ಹಾರ ಹಾಕುತ್ತೇನೆ. ಇಲ್ಲದಿದ್ದರೆ ಬೂಟಿನಿಂದ ಹೊಡೆಯುತ್ತೇನೆ ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ. ಆನಂದಕುಮಾರ ಮತ್ತಿತರ ಹಿರಿಯ ಅಧಿಕಾರಿಗಳು ಇದ್ದರು.

 ಮಳೆಹಾನಿ ಸಮೀಕ್ಷೆ ವಾರದೊಳಗೆ ಮುಗಿಸಿ, ಉಮೇಶ ಕತ್ತಿ ಗಡುವು: ತೀವ್ರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬೆಳೆ ಹಾನಿ, ವಸತಿ ಹಾನಿ, ಶಾಲಾ ಕಟ್ಟಡ ಹಾನಿ ಸೇರಿದಂತೆ ಆಗಿರುವ ಇನ್ನಿತರ ಹಾನಿ ಬಗ್ಗೆ ಕಂದಾಯ, ಕೃಷಿ, ತೋಟಗಾರಿಕೆ, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಒಂದು ವಾರದೊಳಗೆ ಜಂಟಿ ಸಮೀಕ್ಷೆ ನಡೆಸಿ ಸಮಗ್ರ ವರದಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಗಡುವು ವಿಧಿಸಿದರು.

Latest Videos

undefined

ಬುಧವಾರ ನೈಸರ್ಗಿಕ ವಿಕೋಪ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಅವರು ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಮಳೆಯಿಂದಾಗಿ ಬೆಳೆ ಹಾನಿ ಅನುಭವಿಸಿದ ರೈತರಿಗೆ ಅನ್ಯಾಯವಾಗಬಾರದು. ಹೀಗಾಗಿ ಬೆಳೆನಷ್ಟಅನುಭವಿಸಿದ ರೈತರಿಗೆ ಪರಿಹಾರಕ್ಕೆ ಕ್ರಮ ವಹಿಸಬೇಕು ಎಂದು ಸೂಚಿಸಿದ ಅವರು, ಈಗ ಜಿಲ್ಲೆಯಲ್ಲಿ ಸಮೃದ್ಧ ಮಳೆಯಾಗಿದೆ. ಬಿತ್ತನೆ ಮಾಡುವ ರೈತರಿಗೆ ಬೀಜದ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಕೊರತೆ ಇರುವ ಬೀಜಗಳ ದಾಸ್ತಾನಿಗೆ ಗಮನ ಹರಿಸಬೇಕು. ರೈತರ ಬೇಡಿಕೆಯಂತೆ ಕಡಲೆ ಮತ್ತು ತೊಗರಿ ಬೀಜಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವಿಜಯಪುರ: 6ನೇ ದಿನಕ್ಕೆ ಕಾಲಿಟ್ಟ AS ಪಾಟೀಲ್ ನಡಹಳ್ಳಿಯವರ ಯುವಜನ ಸಂಕಲ್ಪ ನಡಿಗೆ

ವಿಜಯಪುರ ತಾಲೂಕಿನಲ್ಲಿ ಒಟ್ಟು 99 ಮನೆಗಳಿಗೆ ಹಾನಿಯಾಗಿತ್ತು. ಈ ಪೈಕಿ ಈಗಾಗಲೇ 78 ಮನೆಗಳಿಗೆ ನಿಯಮಾನುಸಾರ ಪರಿಹಾರ ಕಲ್ಪಿಸಲಾಗಿದೆ. 17 ಮನೆಗಳಿಗೆ ಪರಿಹಾರ ಕೊಡುವುದು ಬಾಕಿ ಇದೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸಭೆಗೆ ತಿಳಿಸಿದರು. ಯಾವುದೇ ಮನೆಗಳು ಬಿಟ್ಟು ಹೋಗದಂತೆ ಸರ್ವೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Vijyapura;   ಅತಿವೃಷ್ಟಿಯಿಂದಾದ ಹಾನಿ ಪ್ರದೇಶಕ್ಕೆ ಉಮೇಶ್ ಕತ್ತಿ ಭೇಟಿ

ಈ ಸಂದರ್ಭದಲ್ಲಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ, ಜಿಪಂ ಸಿಇಒ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ.ಆನಂದಕುಮಾರ, ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಹಾಗೂ ಇತರರು ಇದ್ದರು.

click me!