ಗೋಮಾಂಸ ಸಾಗಾಟ ಶಂಕೆ: ವಾಹನಕ್ಕೆ ಬೆಂಕಿ ಇಟ್ಟ ದುಷ್ಕರ್ಮಿಗಳು

Kannadaprabha News   | Asianet News
Published : Jun 07, 2020, 10:03 AM ISTUpdated : Jun 07, 2020, 10:14 AM IST
ಗೋಮಾಂಸ ಸಾಗಾಟ ಶಂಕೆ: ವಾಹನಕ್ಕೆ ಬೆಂಕಿ ಇಟ್ಟ ದುಷ್ಕರ್ಮಿಗಳು

ಸಾರಾಂಶ

ಬೆಳಗಾವಿಯಿಂದ ಗೋವಾಕ್ಕೆ ಅನಧಿಕೃತವಾಗಿ ಗೋಮಾಂಸ ಸಾಗಾಟ ಶಂಕೆ| ವಾಹನ ಕಾಯುತ್ತ ನಿಂತಿದ್ದ ಕೆಲ ಹಿಂದೂ ಸಂಘಟನೆಗಳ ಕಾರ್ಯಕರ್ತರು| ವಾಹನ ತಡೆದು ಬೆಂಕಿ ಹಚ್ಚಿದ ದುಷ್ಕರ್ಮಿಗಳು|

ಬೆಳಗಾವಿ(ಜೂ.07):  ನಗರದಿಂದ ಗೋವಾ ರಾಜ್ಯಕ್ಕೆ ಅಕ್ರಮವಾಗಿ ಗೋಮಾಂಸ ಸಾಗಾಣಿಕೆ ಮಾಡಲಾಗುತ್ತಿದೆ ಎಂದು ಶಂಕೆ ವ್ಯಕ್ತಪಡಿಸಿ ವಾಹನವೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಶನಿವಾರ ಬೆಳಗಿನ ಜಾವ ಬೆಳಗಾವಿಯ ಕರ್ಲೆ- ಬೆಳವಟ್ಟಿ ರಸ್ತೆಯ ಮೇಲೆ ಸಂಭವಿಸಿದೆ. 

ಬೆಳಗಾವಿಯಿಂದ ಗೋವಾಕ್ಕೆ ಅನಧಿಕೃತವಾಗಿ ಗೋಮಾಂಸ ಸಾಗಿಸಲಾಗುತ್ತಿದೆ ಎಂದು ಕೆಲ ಹಿಂದೂ ಸಂಘಟನೆಗಳ ಕಾರ್ಯಕರ್ತರು ವಾಹನ ಕಾಯುತ್ತ ನಿಂತಿದ್ದರು. ವಾಹನವನ್ನು ತಡೆದು ಬೆಂಕಿ ಹಚ್ಚಿದ್ದಾರೆ. ವಾಹನದಲ್ಲಿದ್ದವರು ಓಡಿ ಹೋಗಿದ್ದಾರೆ. 

ಬೆಳಗಾವಿ: 'ಕೊರೋನಾ ಕಾಟದ ಮಧ್ಯೆಯೇ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸಿದ್ಧರಾಗಿ'

ವಾಹನಕ್ಕೆ ಬೆಂಕಿ ಹಚ್ಚಿರುವ ಘಟನೆಯಿಂದ ಭಯದ ವಾತಾವರಣ ನಿರ್ಮಾಣವಾಗಿದೆ. ಈ ವಾಹನ ನಿತ್ಯ ಗೋವಾಕ್ಕೆ ತೆರಳುತಿತ್ತು ಎನ್ನಲಾಗಿದೆ. ಈ ಕುರಿತು ಬೆಳಗಾವಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV
click me!

Recommended Stories

ಗೃಹ ಲಕ್ಷ್ಮೀ ಅಡಿ 1.24 ಕೋಟಿ ಸ್ತ್ರೀಯರಿಗೆ ₹1.54 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಹೊಸ ಮಾರ್ಗಗಳಿಗೆ ಬರಲಿವೆ ಚಾಲಕ ರಹಿತ ರೈಲು