ಮುಖ್ಯಮಂತ್ರಿ ಫೇಸ್‌ಬುಕ್ ಖಾತೆಯಲ್ಲಿ ಆದ ಮಿಸ್ಟೇಕ್ ನಿಂದ ನೆಟ್ಟಿಗರು ತೀವ್ರ ತರಾಟೆಗೆ ತೆಗೆದುಕೊಂಡಿದ್ದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಹನೂರು (ನ.30): ಶ್ರೀ ಕ್ಷೇತ್ರ ಮಹದೇಶ್ವರ ಬೆಟ್ಟದಲ್ಲಿ ಜರುಗಿದ್ದ ಕಾರ್ಯಕ್ರಮಗಳ ಮಾಹಿತಿಯನ್ನು ಮುಖ್ಯಮಂತ್ರಿಗಳ ಅಧಿಕೃತ ಫೇಸ್‌ನುಲ್ ಖಾತೆಯಲ್ಲಿ ಅಳವಡಿಸುವಾಗ ಸ್ಥಳೀಯ ಶಾಸಕ ನರೇಂದ್ರ ಮತ್ತು ಚಾಮರಾಜನಗರ ಶಾಸಕ ಪುಟ್ಟರಂಗ ಶೆಟ್ಟಿ ಹೆಸರು ಕೈ ಬಿಟ್ಟಿರುವುದಕ್ಕೆಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿದೆ.
ನವೆಂಬರ್ 26 ರಂದು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಖ್ಯಮಂತ್ರಿಗಳು ಸಂವಿಧಾನ ದಿನಾಚರಣೆ ನಿಮಿತ್ತ ಸಂವಿಧಾನ ಪ್ರಸ್ತಾವನೆ ಓಡಿದ್ದರು.
ಬಳಿಕ ಶ್ರೀ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ್ದರು.
ಈ ಎರಡು ವಿಚಾರಗಳನ್ನು ಭಾವಚಿತ್ರ ಸಮೇತ ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ ಹೆಸರನ ಮುಖ್ಯಮಂತ್ರಿಗಳ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.
ಬೇಲೂರಿನಿಂದ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಈಗಲೇ ಫಿಕ್ಸ್ : ಗೆಲುವು ಫಿಕ್ಸ್ ಎಂದ ವಿಜಯೇಂದ್ರ ...
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರ ಹೆಸರು ಹಾಕಲಾಗಿತ್ತು. ಆದರೆ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ನರೇಂದ್ರ ಮತ್ತು ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಹೆಸರು ಕೈ ಬಿಡಲಾಗಿತ್ತು.
ಇನ್ನದರಿಂದ ನೆಟ್ಟಿಗರು ಹಾಗೂ ಸ್ಥಳೀಯರು ಪ್ರಶ್ನೆ ಮಾಡಿದ್ದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.