ನನಗೂ ಸಚಿವನಾಗಬೇಕೆಂಬ ಆಸೆ ಇದೆ: ಶಾಸಕ ಬೆಲ್ಲದ

Kannadaprabha News   | Asianet News
Published : Nov 27, 2020, 11:05 AM IST
ನನಗೂ ಸಚಿವನಾಗಬೇಕೆಂಬ ಆಸೆ ಇದೆ: ಶಾಸಕ ಬೆಲ್ಲದ

ಸಾರಾಂಶ

ಸಚಿವ ಸ್ಥಾನಕ್ಕೆ ಲಾಬಿ ನಡೆಸಲ್ಲ|ಸಚಿವ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಮೂಲ ಮತ್ತು ವಲಸಿಗರೆಂಬ ಭಿನ್ನಾಭಿಪ್ರಾಯಗಳು ಇಲ್ಲ| ಸಚಿವ ಸ್ಥಾನಕ್ಕಾಗಿ ಪಕ್ಷದಲ್ಲಿ ಲಾಬಿ ನಡೆಸಬೇಕಾದ ಪರಿಸ್ಥಿತಿಯಿಲ್ಲ| ಪಕ್ಷದ ಹಿರಿಯರು ರಾಜ್ಯ ಹಿತ ಕಾಪಾಡಲು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ| ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ: ಬೆಲ್ಲದ| 

ಹುಬ್ಬಳ್ಳಿ(ನ.27):  ಶಾಸಕರಾದ ಎಲ್ಲರಿಗೂ ಸಚಿವ ಸ್ಥಾನದ ಬಗ್ಗೆ ಆಸೆ ಇರುತ್ತದೆ. ಅದೇ ರೀತಿ ನನಗೂ ಸಚಿವನಾಗಬೇಕೆಂಬ ಆಸೆ ಇದೆ. ಹಾಗಂತ ನಾನು ಸಚಿವಗಿರಿಗಾಗಿ ಲಾಬಿ ಮಾಡುವುದಿಲ್ಲ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ. 

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಮೂಲ ಮತ್ತು ವಲಸಿಗರೆಂಬ ಭಿನ್ನಾಭಿಪ್ರಾಯಗಳು ಇಲ್ಲ. ಸಚಿವ ಸ್ಥಾನಕ್ಕಾಗಿ ಪಕ್ಷದಲ್ಲಿ ಲಾಬಿ ನಡೆಸಬೇಕಾದ ಪರಿಸ್ಥಿತಿಯಿಲ್ಲ. ಪಕ್ಷದ ಹಿರಿಯರು ರಾಜ್ಯ ಹಿತ ಕಾಪಾಡಲು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ. ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಿರುತ್ತೇನೆ ಎಂದು ನುಡಿದರು. 

ಕನ್ನಡ ಸಂಘಟನೆಗಳ ಹೆಸರಲ್ಲಿ ರೋಲ್‌ಕಾಲ್‌ ಮಾಡುವವರು ಬಂದ್‌ ಕರೆ: ಅರವಿಂದ ಬೆಲ್ಲದ

ಕನ್ನಡಪರ ಸಂಘಟನೆ ಕಾರ್ಯಕರ್ತರು ವಸೂಲಿಗಿಳಿದಿದ್ದಾರೆ ಎಂಬ ನನ್ನ ಹೇಳಿಕೆಗೆ ಈಗಲೂ ನಾನು ಬದ್ಧ. ವಸೂಲಿ ಮಾಡುವವರು ಯಾರು ಎಂಬುದು ಎಲ್ಲರಿಗೂ ಗೊತ್ತಿದೆ. ಅದನ್ನು ನಾನು ಸಾಬೀತು ಮಾಡುವ ಅವಶ್ಯಕತೆ ಇಲ್ಲ ಎಂದರು.
 

PREV
click me!

Recommended Stories

Bengaluru New Year 2026: ಎಂಜಿ ರೋಡ್ ಬಿಟ್ಟು ಕೋರಮಂಗಲಕ್ಕೆ ಜನಸಾಗರ; ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಹಿಳೆ ಜೊತೆ ಟೋಯಿಂಗ್ ಚಾಲಕನ ಕಿರಿಕ್!
ಹೊಸ ವರ್ಷಕ್ಕೆ ಕೆಲವೇ ಹೊತ್ತಲ್ಲಿ ಶಾಕ್! ಕೊಳ್ಳೇಗಾಲದಲ್ಲಿ ಭೀಕರ ಅಗ್ನಿ ಅವಘಡ; ಬೇಕರಿ ಸೇರಿದಂತೆ ಮೂರು ಅಂಗಡಿಗಳು ಭಸ್ಮ!