ಮಸ್ಕಿ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಶಾಸಕ ನಡಹಳ್ಳಿ ಪ್ರಚಾರ| ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆದುಕೊಳ್ಳುವ ತಾಕ್ಕತ್ತು ಉಳ್ಳವರು| ರಾಜ್ಯದ ಅಭಿವೃದ್ಧಿಗಾಗಿ ಸಿಎಂ ಯಡಿಯೂರಪ್ಪ ಯಾವುದೇ ತ್ಯಾಗಕ್ಕೂ ಸಿದ್ಧ| ಬಿಜೆಪಿ ಮತ್ತು ಪಕ್ಷದ ಕಾರ್ಯಕರ್ತರು ಶಿಸ್ತಿನ ಸಿಪಾಯಿಗಳು|
ಮಸ್ಕಿ(ಏ.15): ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಪರ ಶಾಸಕ ಎ.ಎಸ್.ನಡಹಳ್ಳಿ ಮಸ್ಕಿ ಕ್ಷೇತ್ರದ ವಿವಿಧ ಹಳ್ಳಿಗಳಲ್ಲಿ ಬಿರುಸಿನ ಪ್ರಚಾರ ನಡೆಸಿದ್ದಾರೆ.
ಕ್ಷೇತ್ರ ವ್ಯಾಪ್ತಿಯ ಗುಡದೂರು ಶಕ್ತಿ ಕೇಂದ್ರ ವ್ಯಾಪ್ತಿಯ ಬಳಗಾನೂರು ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಮನೆಮನೆಗೆ ತೆರಳಿ ನಡೆಸಿ ಪ್ರತಾಪಗೌಡ ಪಾಟೀಲ್‌ಗೆ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು. ನಂತರ ಪ್ರಚಾರ ಸಭೆಯಲ್ಲಿ ಮಾತನಾಡಿ, ಸಿಎಂ ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆದುಕೊಳ್ಳುವ ತಾಕ್ಕತ್ತು ಉಳ್ಳವರು. ಅದರಂತೆ ಮಸ್ಕಿ ಕ್ಷೇತ್ರದಲ್ಲಿ ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ರಾಜ್ಯದ ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದಾರೆ ಎಂದರು.
ನಾನು ಬಂದಿರೋದ್ರಿಂದ ಕಾಂಗ್ರೆಸ್‌ಗೆ ಸೋಲಿನ ಭಯ ಹೆಚ್ಚಾಗಿದೆ: ವಿಜಯೇಂದ್ರ
ಮಸ್ಕಿ ಕ್ಷೇತ್ರದಲ್ಲಿ ಕಳೆದ ಒಂದು ವಾರದಿಂದ ಪ್ರಚಾರ ಕಾರ್ಯಕೈಗೊಂಡಿದ್ದೇನೆ. ಬಿಜೆಪಿ ಪರ ಅಲೆ ಇದ್ದು, ಉಪಚುನಾವಣೆಯಲ್ಲಿ ಅತಿಹೆಚ್ಚು ಅಂತರದಿಂದ ಸಾಧಿಸಲಿದೆ. ರಾಜ್ಯದ ಅಭಿವೃದ್ಧಿಗಾಗಿ ಸಿಎಂ ಯಡಿಯೂರಪ್ಪ ಯಾವುದೇ ತ್ಯಾಗಕ್ಕೂ ಸಿದ್ಧರಾಗಿದ್ದಾರೆ. ಆದ್ದರಿಂದ ಮಸ್ಕಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಉಪಚುನಾವಣೆಯಲ್ಲಿ ಜನರು ಬಿಜೆಪಿ ಬೆಂಬಲಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗಾಗಿ ಕೈಜೋಡಿಸಬೇಕು ಎಂದರು.
ಬಿಜೆಪಿ ಮತ್ತು ಪಕ್ಷದ ಕಾರ್ಯಕರ್ತರು ಶಿಸ್ತಿನ ಸಿಪಾಯಿಗಳು. ಮತದಾರರ ಮನವೊಲಿಸಿ ಮತಗಟ್ಟೆಗೆ ಕರೆತಂದು ಮಾತದಾನ ಮಾಡಿಸುವ ಮೂಲಕ ಬಿಜೆಪಿಗೆ ಗೆಲುವು ನೀಡಿ ಕ್ಷೇತ್ರದ ಜನರ ಸೇವೆ ಮಾಡುವ ಅವಕಾಶ ಪ್ರತಾಪಗೌಡ ಪಾಟೀಲ್‌ಗೆ ಕಲ್ಪಿಸಿ. ಪಾಟೀಲರು 20 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.