ಬದನವಾಳು ಖಾದಿ ಕೇಂದ್ರದ ಆವರಣದಲ್ಲಿ ಕಟ್ಟಡ ದುರಸ್ತಿ, ಕಾಂಪೌಂಡ್ ನಿರ್ಮಾಣ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯವನ್ನು ಸರ್ಕಾರದ ಗಮನ ಸೆಳೆಯುವ ಮೂಲಕ ಶೀಘ್ರದಲ್ಲಿಯೇ ಕೈಗೊಳ್ಳುವುದಾಗಿ ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.
ನಂಜನಗೂಡು : ಬದನವಾಳು ಖಾದಿ ಕೇಂದ್ರದ ಆವರಣದಲ್ಲಿ ಕಟ್ಟಡ ದುರಸ್ತಿ, ಕಾಂಪೌಂಡ್ ನಿರ್ಮಾಣ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯವನ್ನು ಸರ್ಕಾರದ ಗಮನ ಸೆಳೆಯುವ ಮೂಲಕ ಶೀಘ್ರದಲ್ಲಿಯೇ ಕೈಗೊಳ್ಳುವುದಾಗಿ ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.
ಅವರು ಗಾಂಧಿ ಜಯಂತಿ ಹಾಗೂ ಭಾರತ್ ಜೋಡೋ ಯಾತ್ರೆಯ ನೆನಪಿನ ಪ್ರಯುಕ್ತ ಬದನವಾಳಿನಲ್ಲಿ ಆಯೋಜಿಸಿದ್ದ ಗಾಂಧಿ ಸ್ಮರಣೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.
undefined
ಸತ್ಯ ಹಾಗೂ ಅಹಿಂಸೆಯ ಕಡೆಗೆ ನಮ್ಮ ನಡಿಗೆ ಎಂಬ ಧ್ಯೇಯವಾಕ್ಯದೊಂದಿಗೆ ಗಾಂಧಿ ಜಯಂತಿಯಂದು ನಂಜನಗೂಡು ನಗರದಿಂದ ಬದನವಾಳುವರೆಗೆ 12 ಕಿ.ಮೀ ಪಾದಯಾತ್ರೆ ಮಾಡಲಾಗಿದ್ದು ಆ ಮೂಲಕ ಕಳೆದ ವರ್ಷ ಇದೇ ದಿನ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ಆರಂಭಿಸಿದ ಭಾರತ್ ಜೋಡೋ ಯಾತ್ರೆ ಮೂಲಕ ಬದನವಾಳಿನಲ್ಲಿ ಭಾಗಿಯಾಗಿದ್ದ ಕ್ಷಣಗಳನ್ನು ಸ್ಮರಿಸಿದರು.
ಇನ್ನು ಬದನವಾಳು ಗ್ರಾಮ ಐತಿಹಾಸಿಕ ಹಿನ್ನಲೆ ಹೊಂದಿದ್ದು ಸ್ವಾತಂತ್ರ್ಯ ಪೂರ್ವದಲ್ಲೇ ಮಹಾತ್ಮಾ ಗಾಂಧೀಜಿ ಅವರು ಬದನವಾಳಿಗೆ ಭೇಟಿ ನೀಡಿ ಜನರಿಗೆ ಸ್ವಯಂ ಉದ್ಯೋಗಕ್ಕೆ ಸ್ಫೂರ್ತಿ ತುಂಬಿದ್ದರು. ಗಾಂಧೀಜಿ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಅಹಿಂಸೆಯ ಮಾರ್ಗದಲ್ಲಿಯೇ ಮುನ್ನಡೆಯುವ ಜೊತೆಗೆ ಸಮಾಜವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ರೂಪಿಸಲು ಎಲ್ಲರ ಜೊತೆ ಕೈಜೋಡಿಸುವುದಾಗಿ ಅವರು ಹೇಳಿದರು.
ಇದೇ ವೇಳೆ ನಿವೃತ್ತ ಪ್ರಾಧ್ಯಾಪಕ ಕೆ.ಟಿ. ವೀರಪ್ಪ ಮುಖ್ಯ ಭಾಷಣ ಮಾಡಿದರು. ಸಮಾರಂಭದಲ್ಲಿ ಗುಂಡ್ಲುಪೇಟೆ ಶಾಸಕ ಎಚ್.ಎಂ. ಗಣೇಶ್ ಪ್ರಸಾದ್, ಮಾಜಿ ಶಾಸಕ ಕಳಲೆ ಕೇಶಮೂರ್ತಿ, ಕೊಳ್ಳೇಗಾಲದ ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ, ಧೀರನ್ ಧೃವನಾರಾಯಣ್, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾವತಿ ಅಮರನಾಥ್, ಜಿಲ್ಲಾಧ್ಯಕ್ಷೆ ಲತಾ ಸಿದ್ದಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾವೇರಪ್ಪ, ಎಸ್.ಸಿ. ಬಸವರಾಜು, ಬಿ.ಕೆ. ರವಿಕುಮಾರ್, ಹಿರೇಹಳ್ಳಿ ಸೋಮೇಶ್, ಜಿಪಂ ಮಾಜಿ ಸದಸ್ಯ ಕೆ. ಮಾರುತಿ, ತಾಪಂ ಮಾಜಿ ಅಧ್ಯಕ್ಷ ಬಿ.ಎಂ. ನಾಗೇಶ್ ರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕುರಹಟ್ಟಿ ಮಹೇಶ್, ಸಿ.ಎಂ. ಶಂಕರ್, ಶ್ರೀಕಂಠ ನಾಯಕ ಮೊದಲಾದವರು ಇದ್ದರು.
ಕಾವೇರಿ ವಿಚಾರದಲ್ಲಿ ಅನ್ಯಾಯ
ಪಾಂಡವಪುರ (ಅ.01): ಕಾವೇರಿ ನದಿ ನೀರಿನ ವಿಚಾರವಾಗಿ ನೀರು ನಿರ್ವಹಣ ಪ್ರಾಧಿಕಾರ ಪದೇಪದೇ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ರಾಜ್ಯದಲ್ಲಿನ ಕುಡಿಯುವ ನೀರಿನ ಸ್ಥಿತಿ ಅರ್ಥವಾಗುತ್ತಿಲ್ಲ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಕಿಡಿಕಾರಿದರು. ತಾಲೂಕಿನಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಕಾವೇರಿ ಹೋರಾಟದ ಮುಂದಿನ ರೂಪುರೇಷಗಳನ್ನು ನಿರ್ಧರಿಸುವ ಸಂಬಂಧ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ವತಿಯಿಂದ ಸಭೆ ಕರೆಯಲಾಗಿದೆ. ಜಿಲ್ಲೆಯ ಎಲ್ಲಾ ಮುಖಂಡರು ಕುಳಿತು ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕಾವೇರಿ ನೀರು ನಿರ್ವಹಣಾ ಸಮಿತಿ ಹಾಗೂ ಪ್ರಾಧಿಕಾರ ಪ್ರತಿಬಾರಿಯೂ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಪ್ರಾಧಿಕಾರದ ಅಧಿಕಾರಿಗಳಿಗೆ ರಾಜ್ಯದ ಕುಡಿಯುವ ನೀರಿನ ವಸ್ತುಸ್ಥಿತಿಯನ್ನೇ ಅರ್ಥಮಾಡಿಕೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಅಣೆಕಟ್ಟೆಯಲ್ಲಿ ನೀರು ಖಾಲಿಯಾಗಿದೆ. ಕುಡಿಯುವ ನೀರಿನ ಹಾಹಾಕಾರ ಎದುರಾಗಿದೆ. ಕೆಲವೆಡೆ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡುತ್ತಿದ್ದಾರೆ. ಪರಿಸ್ಥಿತಿ ಹೀಗಿದ್ದರೂ ಸಹ ತಮಿಳುನಾಡಿಗೆ 3 ಸಾವಿರ ಕ್ಯುಸೆಕ್ ನೀರು ಹರಿಸುವಂತೆ ಆದೇಶ ನೀಡುವುದು ಆತಂಕ ತಂದಿದೆ ಎಂದರು.
ದೊಡ್ಡ ಕಾನೂನು ಹೋರಾಟ ಅಗತ್ಯ: ಕಾವೇರಿ ನದಿ ನೀರು ಹಂಚಿಕೆ ವಿಷಯದಲ್ಲಿ ಕರ್ನಾಟಕಕ್ಕೆ ನ್ಯಾಯ ಸಿಗಲು ದೊಡ್ಡಮಟ್ಟದ ಕಾನೂನು ಹೋರಾಟ ನಡೆಸುವ ಅಗತ್ಯವಿದೆ ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು. ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯಿಂದ ನಗರದ ಸರ್ ಎಂ.ವಿ.ಪ್ರತಿಮೆ ಬಳಿ ನಡೆಯುತ್ತಿರುವ ಧರಣಿ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು. ಪ್ರಾಧಿಕಾರ ಯಾವ ಮಾನದಂಡ ಆಧರಿಸಿ ನೀರು ಬಿಡುಗಡೆಗೆ ಆದೇಶ ಮಾಡುತ್ತಿದೆಯೋ ಗೊತ್ತಾಗುತ್ತಿಲ್ಲ. ಪ್ರಾಧಿಕಾರಕ್ಕೆ ವಾಸ್ತವ ಸ್ಥಿತಿ ಏಕೆ ಅರ್ಥವಾಗುತ್ತಿಲ್ಲ? ನೀರಿನ ಪರಿಸ್ಥಿತಿ ಅವಲೋಕನ ನಡೆಸುತ್ತಿಲ್ಲವೇಕೆ ಎಂಬುದೇ ತಿಳಿಯದಾಗಿದೆ. ವಸ್ತುಸ್ಥಿತಿ ಮನವರಿಕೆ ಮಾಡುವಲ್ಲಿ ಸರ್ಕಾರ ವಿಫಲವಾಗಿದೆಯೇ ಎನ್ನುವುದೂ ತಿಳಿಯುತ್ತಿಲ್ಲ ಎಂದು ಹೇಳಿದರು.
ಪ್ರಧಾನಿ ಮೋದಿ ಜಗತ್ತೇ ಮೆಚ್ಚುವಂತಹ ನಾಯಕ: ಸಂಸದ ರಮೇಶ ಜಿಗಜಿಣಗಿ
ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸುವ ಅಗತ್ಯವಿದೆ. ಹೋರಾಟದ ಮೂಲಕವೇ ಕೇಂದ್ರ ಸರ್ಕಾರ, ಪ್ರಾಧಿಕಾರ, ಸುಪ್ರೀಂಕೋರ್ಟ್ ಮತ್ತು ತಮಿಳುನಾಡಿಗೆ ವಾಸ್ತವ ಸ್ಥಿತಿ ಅರ್ಥ ಮಾಡಿಸಬೇಕಿದೆ ಎಂದು ಪ್ರತಿಪಾದಿಸಿದ ಅವರು, ಈ ನಿಟ್ಟಿನಲ್ಲಿ ಹಿರಿಯರು, ತಜ್ಞರು, ರೈತ ಮುಖಂಡರ ನಿರ್ದೇಶನದಂತೆ ಹೋರಾಟ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ ಅವರು, ಸೆ.26 ಮತ್ತು 29ರ ಬಂದ್‌ಗೆ ನಮ್ಮ ಬೆಂಬಲ ಇದೆ ಎಂದ ಅವರು, ಅದರಲ್ಲಿ ನಾವೂ ಭಾಗಿಯಾಗುತ್ತೇವೆ ಎಂದರು.