ಗಂಗಾವತಿಯಲ್ಲಿ ಜನತಾ ದರ್ಶನ: ಬರುವ ದಿನಗಳಲ್ಲಿ “ನಿಮ್ಮೊಂದಿಗೆ ನಾನು” ಕಾರ್ಯಕ್ರಮ, ಜನಾರ್ಧನ ರೆಡ್ಡಿ

By Girish Goudar  |  First Published Oct 19, 2023, 9:30 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತಾ ದರ್ಶನ ಮೂಲಕ ಸಾರ್ವಜನಿಕರ ಸಮಸ್ಯೆಗಳನ್ನು ಈಡೇರಿಸ ಬೇಕೆಂಬ ಹಿನ್ನಲೆಯಲ್ಲಿ ಈ ಕಾರ್ಯಕ್ರಮ ರೂಪಿಸಿದ್ದಾರೆ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳು ಮುತುವರ್ಜಿ ವಹಿಸಿ ಬಂದಂತಹ ಅರ್ಜಿಗಳನ್ನು ಪರಿಶೀಲಿಸಿ ಇತ್ಯರ್ಥಗೊಳಿಸಬೇಕು: ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ 


ರಾಮಮೂರ್ತಿ ನವಲಿ

ಗಂಗಾವತಿ(ಅ.19):  ಮುಂಬರುವ ದಿನಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ನಿಮ್ಮೊಂದಿಗೆ ನಾನು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಹೇಳಿದರು.  ಇಂದು(ಗುರುವಾರ) ಇಲ್ಲಿಯ ನಗರಸಭೆ ಆವರಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಜರುಗಿದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜನಾರ್ಧನ ರೆಡ್ಡಿ ಅವರು, ನಗರದಲ್ಲಿ ಬಹಳಷ್ಟು ಸಮಸ್ಯೆಗಳಿವೆ ಜನರ ಆಶೋತ್ತರಗಳನ್ನು ಈಡೇರಿಸುವ ಕಾರ್ಯ ಅಧಿಕಾರಿಗಳಿಂದ ಆಗಬೇಕಾಗಿದೆ. ಈ ನಿಟ್ಟಿನಲ್ಲಿ ವಿವಿಧ ಕಚೇರಿಗಳಿಗೆ ಬರುವ ಸಾರ್ವಜನಿಕರ ಕುಂದು ಕೊರೆತಗಳನ್ನು ಈಡೇರಿಸಬೇಕೆಂದು ಸೂಚನೆ ನೀಡಿದರು.

Latest Videos

undefined

ನಗರದಲ್ಲಿ ಮೂಲಭೂತ ಸೌಕರ್ಯಗಳು ಸೇರಿತಂತೆ ನಿವೇಶನ ಮತ್ತು ಮನೆಗಳ ನಿರ್ಮಾಣದ ಬೇಡಿಕೆಗಳು ಹೆಚ್ಚಾಗಿರುತ್ತವೆ. ಅಧಿಕಾರಿಗಳು ಬಂದಂತಹ ಅರ್ಜಿಗಳನ್ನು ಸಮರ್ಪವಾಗಿ ಪರಿಶೀಲಿಸಿ ಅವರಿಗೆ ಸಂಪೂರ್ಣ ಮಾಹಿತಿ ನೀಡಬೇಕೆಂದರು.

ಪೇ ಆನ್ ಲೈನ್ ಚರ್ಚಾ ಸ್ಪರ್ಧೆ: ಗಂಗಾವತಿ ಬಾಲಕನಿಗೆ ಪ್ರಧಾನಿಯಿಂದ ಅಭಿನಂದನಾ ಪ್ರಮಾಣ ಪತ್ರ

ತಾವು ಈ ಹಿಂದೆ ಸಚಿವರಾಗಿದ್ದ ಸಂದರ್ಭದಲ್ಲಿ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ಜನರ ಬೇಡಿಕೆಗಳನ್ನು ಈಡೇರಿಸಲಾಗುತ್ತಿತ್ತು. ಈಗ ಜನರ ಬಳಿ ನಾವೇ ಹೋಗಿ ಸಮಸ್ಯೆಗಳನ್ನು ಈಡೇರಿಸ ಬೇಕೆಂದರು. ಕೇಂದ್ರ ಮಾಜಿ ಸಚಿವರಾಗಿದ್ದ ದಿ. ಸುಷ್ಮಾ ಸ್ವರಾಜ್ ಮಾರ್ಗದರ್ಶನದಲ್ಲಿ ಹಲವಾರು ಯೋಜನೆಗಳನ್ನು ಕಾರ್ಯಗತಗೊಳಿಸಲಾಗಿದೆ. ಈಗಲೂ ಸಹ ತಾವು ಗಂಗಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಜನರ ಬೇಡಿಕೆಗಳನ್ನು ಈಡೇರಿಸುವದಾಗಿ ಭರವಸೆ ನೀಡಿದರು.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತಾ ದರ್ಶನ ಮೂಲಕ ಸಾರ್ವಜನಿಕರ ಸಮಸ್ಯೆಗಳನ್ನು ಈಡೇರಿಸ ಬೇಕೆಂಬ ಹಿನ್ನಲೆಯಲ್ಲಿ ಈ ಕಾರ್ಯಕ್ರಮ ರೂಪಿಸಿದ್ದಾರೆ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳು ಮುತುವರ್ಜಿ ವಹಿಸಿ ಬಂದಂತಹ ಅರ್ಜಿಗಳನ್ನು ಪರಿಶೀಲಿಸಿ ಇತ್ಯರ್ಥಗೊಳಿಸ ಬೇಕೆಂದರು. ಜನಾತ ದರ್ಶನ ಬಗ್ಗೆ ಇನ್ನು ಜನರಲ್ಲಿ ಜಾಗೃತಿ ಮೂಡಿಸ ಬೇಕಾಗಿತ್ತು. ಇನ್ನುಂದೆ ನಡೆಯುವ ಕಾರ್ಯಮಕ್ರದ ಬಗ್ಗೆ ಜನರಿಗೆ ತಿಳಿ ಹೇಳಬೇಕೆಂದರು.  

ಜಿಲ್ಲಾದಿಕಾರಿ ನಳಿನ್ ಅತುಲ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹೂಲ್ ರತ್ನಂ ಪಾಂಡೆ,  ಅಪರ ಜಿಲ್ಲಾದಿಕಾರಿ ಸಾವಿತ್ರಿ ಬಿ ಕಡಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಯಶೋಧ ವಂಟಿಗೋಡಿ,  ಸಹಾಯಕ ಆಯುಕ್ತ ಕ್ಯಾಪ್ಟನ್ ಮಹಾಂತೇಶ,  ಜಿಲ್ಲಾ ಪಂಚಾಯಿತಿ  ಉಪ ಕಾರ್ಯದರ್ಶಿ  ಮಲ್ಲಿಕಾರ್ಜುನ್,  ತಹಸೀಲ್ದಾರ  ಮಂಜುನಾಥಸ್ವಾಮಿ, ಡಿಎಸ್ಪಿ ಸಿದ್ದಲಿಂಗಪ್ಪಗೌಡ , ಪೌರಾಯುಕ್ತ ವಿರೂಪಾಕ್ಷಮೂರ್ತಿ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

click me!