ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ; ಅಂಜನಾದ್ರಿಯಲ್ಲಿ ಮೆಟ್ಟಿಲು ದೀಪೋತ್ಸವಕ್ಕೆ ರೆಡ್ಡಿ ದಂಪತಿ ಚಾಲನೆ

Published : Jan 22, 2024, 10:13 PM IST
ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ; ಅಂಜನಾದ್ರಿಯಲ್ಲಿ ಮೆಟ್ಟಿಲು ದೀಪೋತ್ಸವಕ್ಕೆ ರೆಡ್ಡಿ ದಂಪತಿ ಚಾಲನೆ

ಸಾರಾಂಶ

ಅಯೋಧ್ಯೆ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆ ಅಂಜನಾದ್ರಿ ಬೆಟ್ಟದಲ್ಲಿ ಮೆಟ್ಟಿಲು ದೀಪೋತ್ಸವಕ್ಕೆ ಗಂಗಾವತಿ ಶಾಸಕ ಗಾಲಿ ಜನಾರ್ದನರೆಡ್ಡಿ ಚಾಲನೆ ನೀಡಿದರು.

ಕೊಪ್ಪಳ (ಜ.22): ಅಯೋಧ್ಯೆ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆ ಅಂಜನಾದ್ರಿ ಬೆಟ್ಟದಲ್ಲಿ ಮೆಟ್ಟಿಲು ದೀಪೋತ್ಸವಕ್ಕೆ ಗಂಗಾವತಿ ಶಾಸಕ ಗಾಲಿ ಜನಾರ್ದನರೆಡ್ಡಿ ಚಾಲನೆ ನೀಡಿದರು.

ಕೊಪ್ಪಳ‌ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ದೀಪೋತ್ಸವ ಸಂಭ್ರಮ. ಶಾಸಕ ಗಾಲಿ ಜನಾರ್ದನರೆಡ್ಡಿ ಹಾಗೂ ಪತ್ನಿ ಅರುಣಾ ಲಕ್ಷ್ಮೀ ನೇತೃತ್ವದಲ್ಲಿ ನಡೆದ ದೀಪೋತ್ಸವ. ಈ ವೇಳೆ ಶಾಸಕ ಜನಾರ್ದನರೆಡ್ಡಿಗೆ ಸಾಥ್ ನೀಡಿದ ನೂರಾರು ಬೆಂಬಲಿಗರು. ರಾಮಮಂದಿರ ಉದ್ಘಾಟನೆ ಹಿನ್ನೆಲೆ ಅಂಜನಾದ್ರಿಯಲ್ಲಿ ಹಲವು ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ.

ಈ ಹಿಂದೆ ಚುನಾವಣೆ ವೇಳೆ ಅಂಜನಾದ್ರಿ ವಿಚಾರ ಇಟ್ಟುಕೊಂಡೇ ಗೆದ್ದಿರುವ ಶಾಸಕ ಜನಾರ್ದನರೆಡ್ಡಿ. ಅಯೋಧ್ಯೆಯಂತೆ ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ ಅಂಜನಾದ್ರಿ ಅಭಿವೃದ್ಧಿಯಲ್ಲಿ ತೊಡಗಿಕೊಂಡಿರುವ ಶಾಸಕರು ಇಂದು ಕುಟುಂಬ ಸಮೇತ ದೀಪೋತ್ಸವದಲ್ಲಿ ಭಾಗಿಯಾಗಿ ಸಂಭ್ರಮಿಸಿದರು.

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಂಭ್ರಮದ ನಡುವೆ ಅಪ್ರಾಪ್ತ ಮುಸ್ಲಿಂ ಯುವಕನಿಂದ ಉದ್ರೇಕಕಾರಿ ಸಂದೇಶ!

PREV
Read more Articles on
click me!

Recommended Stories

ಬೆಂಗಳೂರಿನ ಹಲವೆಡೆ ಡಿ.6, 8ಕ್ಕೆ ಪವರ್ ಕಟ್, ಯಾವ ಏರಿಯಾದಲ್ಲಿ 8 ಗಂಟೆ ವಿದ್ಯುತ್ ಕಡಿತ?
ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ